AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ. ಸಾರ್ವಜನಿಕ ಚರ್ಚೆ ನಡೆಸದೆ ಹಾಗೂ ಸಚಿವ ಸಂಪುಟದ ಅನುಮೋದನೆ ಪಡೆಯದೆ ಕೈಗೊಂಡ ಈ ಏಕಪಕ್ಷೀಯ ನಿರ್ಧಾರವು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ.

SSLC ತೃತೀಯ ಭಾಷೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರದ ‘ಗ್ರೇಡಿಂಗ್’ ನಿರ್ಧಾರ
ಹೈಕೋರ್ಟ್‌ ಹಾಗೂ ಮಧು ಬಂಗಾರಪ್ಪ (ಸಂಗ್ರಹ ಚಿತ್ರ)Image Credit source: tv9
ಗಣಪತಿ ಶರ್ಮಾ
|

Updated on:Apr 02, 2026 | 6:38 AM

Share

ಬೆಂಗಳೂರು, ಏಪ್ರಿಲ್ 2: ಕರ್ನಾಟಕ ಶೈಕ್ಷಣಿಕ ವಲಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಎಸ್‌ಎಸ್‌ಎಲ್‌ಸಿ (SSLC) ತೃತೀಯ ಭಾಷಾ ಪರೀಕ್ಷೆಯಲ್ಲಿ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ತೀರ್ಮಾನ ಈಗ ಕಾನೂನು ಹೋರಾಟಕ್ಕೆ ನಾಂದಿ ಹಾಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಈ ದಿಢೀರ್ ಘೋಷಣೆಯು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕರಿ ನೆರಳು ಬೀರಲಿದೆ ಎಂದು ಆರೋಪಿಸಿ ಹೈಕೋರ್ಟ್‌ನಲ್ಲಿ (Karnataka High Court) ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ದಾಖಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಸಲ್ಲಿಸಿರುವ ಈ ಅರ್ಜಿಯಲ್ಲಿ, ಸರ್ಕಾರದ ನಡೆಯನ್ನು ‘ಅಸಂವಿಧಾನಿಕ’ ಎಂದು ಉಲ್ಲೇಖಿಸಲಾಗಿದೆ.

ಮುಖ್ಯವಾಗಿ, ಯಾವುದೇ ಒಂದು ದೊಡ್ಡ ಶೈಕ್ಷಣಿಕ ಬದಲಾವಣೆ ಮಾಡುವ ಮುನ್ನ ಸಾರ್ವಜನಿಕರ ಅಥವಾ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆಯುವುದು ಅತ್ಯಗತ್ಯ. ಆದರೆ, ಈ ವಿಷಯದಲ್ಲಿ ಸರ್ಕಾರ ಅಂತಹ ಯಾವುದೇ ಪ್ರಕ್ರಿಯೆ ನಡೆಸದೆ, ಸಚಿವ ಸಂಪುಟದ ಒಪ್ಪಿಗೆಯನ್ನೂ ಪಡೆಯದೆ ಏಕಪಕ್ಷೀಯವಾಗಿ ತೀರ್ಮಾನಿಸಿದೆ ಎಂಬುದು ಅರ್ಜಿದಾರರ ಪ್ರಬಲ ವಾದ.

ಅರ್ಜಿಯಲ್ಲಿನ ಪ್ರಮುಖ ಅಂಶಗಳು

  • ವಿದ್ಯಾರ್ಥಿಗಳ ಗೊಂದಲ: ಪರೀಕ್ಷೆಗಳು ನಡೆಯುತ್ತಿರುವಾಗಲೇ ಇಂತಹ ಹೇಳಿಕೆ ನೀಡಿರುವುದು ಲಕ್ಷಾಂತರ ವಿದ್ಯಾರ್ಥಿಗಳಲ್ಲಿ ಅತಂತ್ರ ಸ್ಥಿತಿ ನಿರ್ಮಿಸಿದೆ.
  • ಸಮಾನತೆಯ ಹಕ್ಕಿನ ಉಲ್ಲಂಘನೆ: ಸಂವಿಧಾನದ 14 ಮತ್ತು 21ನೇ ವಿಧಿಯಡಿ ನೀಡಲಾದ ಸಮಾನತೆ ಮತ್ತು ಶಿಕ್ಷಣದ ಹಕ್ಕಿಗೆ ಇದು ಚ್ಯುತಿ ತರುತ್ತದೆ.
  • ಅಧಿಕೃತ ಆದೇಶದ ಕೊರತೆ: ಸಚಿವರು ಕೇವಲ ಮೌಖಿಕವಾಗಿ ಹೇಳಿಕೆ ನೀಡಿದ್ದಾರೆಯೇ ಹೊರತು, ಈವರೆಗೆ ಯಾವುದೇ ಅಧಿಕೃತ ಗೆಜೆಟ್ ಅಧಿಸೂಚನೆ ಹೊರಬಂದಿಲ್ಲ. ಆದರೂ ಇದನ್ನು ಜಾರಿಗೆ ತರಲು ಹೊರಟಿರುವುದು ಕಾನೂನುಬಾಹಿರ.

ಸರ್ಕಾರದ ಹೊಸ ನಿಯಮ ಏನು?

ತೃತೀಯ ಭಾಷೆಯ (ಹಿಂದಿ/ಇತರ) ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸುವುದಿಲ್ಲ. ಒಟ್ಟು 625 ಅಂಕಗಳ ಬದಲಿಗೆ ಕೇವಲ 525 ಅಂಕಗಳ ಆಧಾರದ ಮೇಲೆ ಶೇಕಡಾವಾರು ಲೆಕ್ಕ ಹಾಕಲಾಗುತ್ತದೆ. ತೃತೀಯ ಭಾಷೆಯಲ್ಲಿ ಕೇವಲ ಎ, ಬಿ, ಸಿ, ಡಿ ಗ್ರೇಡ್‌ಗಳನ್ನು ಮಾತ್ರ ನೀಡಲಾಗುತ್ತದೆ.

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾದ ‘ಹಿಂದಿ’ ಭಾಷೆ

ಈಗಾಗಲೇ ಈ ವಿಷಯವು ರಾಜಕೀಯ ಬಣ್ಣ ಪಡೆದುಕೊಂಡಿದೆ. ರಾಜ್ಯ ಸರ್ಕಾರವು ‘ಹಿಂದಿ ಹೇರಿಕೆ’ ತಡೆಯುವ ನೆಪದಲ್ಲಿ ತ್ರಿಭಾಷಾ ಸೂತ್ರಕ್ಕೆ ಎಳ್ಳುನೀರು ಬಿಟ್ಟು, ಪರೋಕ್ಷವಾಗಿ ದ್ವಿಭಾಷಾ ನೀತಿಯನ್ನು ಜಾರಿಗೊಳಿಸುತ್ತಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಹಿಂದಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ದೇಶದ್ರೋಹದ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ ಆಕ್ರೋಶ ವ್ಯಕ್ತಪಡಿಸಿದ್ದರು.

ಮತ್ತೊಂದೆಡೆ, SSLC 3ನೇ ಭಾಷೆಯ ಅಂಕಗಳನ್ನು ರದ್ದುಗೊಳಿಸಿರುವ ನಿರ್ಧಾರದಿಂದ, ಉರ್ದು ಹಾಗೂ ಸಂಸ್ಕೃತವನ್ನು ಪ್ರಥಮ ಭಾಷೆಯಾಗಿ ಓದುವವರಿಗೆ 3ನೇ ಭಾಷೆಯಾದ ‘ಕನ್ನಡ’ಕ್ಕೆ ಮಹತ್ವ ಇಲ್ಲದಂತಾಗುವುದಿಲ್ಲವೇ ಎಂಬ ಪ್ರಶ್ನೆಯೂ ಉದ್ಭವಿಸಿತ್ತು. ಕನ್ನಡ ಉಳಿಸಲು, ಹಿಂದಿ ಹೇರಿಕೆ ತಡೆಯಲು ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳುತ್ತಿದ್ದ. ಆದರೆ, ಇಲ್ಲಿ ಕನ್ನಡ 3ನೇ ಭಾಷೆ ಇದ್ದವರ ವಿಚಾರದಲ್ಲಿ ಕನ್ನಡಕ್ಕೆ ಅನ್ಯಾಯವಾದಂತಲ್ಲವೇ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಇದನ್ನೂ ಓದಿ: SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಈ ವಿವಾದಾತ್ಮಕ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಲಿದೆಯೇ ಅಥವಾ ಸರ್ಕಾರದ ಈ ಹೊಸ ಶೈಕ್ಷಣಿಕ ಪ್ರಯೋಗ ಮುಂದುವರಿಯಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಶೀಘ್ರದಲ್ಲೇ ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:32 am, Thu, 2 April 26

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?