ಜಾತಿಗಣತಿ ವರದಿ ಪ್ರಶ್ನಿಸಿ ಪಿಐಎಲ್‌: ವಿಚಾರಣೆ ಮುಂದೂಡಿದ ಹೈಕೋರ್ಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Mar 21, 2024 | 10:18 PM

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪ್ರಶ್ನಿಸಿ ಸಮಾಜ ಸಂಪರ್ಕ ವೇದಿಕೆ ಸಲ್ಲಿಸಿದ್ದ ಪಿಐಎಲ್​ನ್ನು ಹೈಕೋರ್ಟ್ ಇಂದು ವಿಚಾರಣೆ ಮಾಡಿದೆ. ಈ ವೇಳೆ ಹಿಂದುಳಿದ‌ ವರ್ಗಗಳ ಆಯೋಗ ವರದಿ ಸಲ್ಲಿಸಿದೆ. ಜೂನ್‌ 6ರವರೆಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಎಜಿ ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ. ಹೀಗಾಗಿ ವಿಚಾರಣೆಯನ್ನು ಜೂನ್ 5ಕ್ಕೆ ಹೈಕೋರ್ಟ್ ಮುಂದೂಡಿದೆ.

ಜಾತಿಗಣತಿ ವರದಿ ಪ್ರಶ್ನಿಸಿ ಪಿಐಎಲ್‌: ವಿಚಾರಣೆ ಮುಂದೂಡಿದ ಹೈಕೋರ್ಟ್
ಹೈಕೋರ್ಟ್
Follow us on

ಬೆಂಗಳೂರು, ಮಾರ್ಚ್​ 21: ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ (Caste Census) ಪ್ರಶ್ನಿಸಿ ಸಮಾಜ ಸಂಪರ್ಕ ವೇದಿಕೆ ಸಲ್ಲಿಸಿದ್ದ ಪಿಐಎಲ್​ನ್ನು ಹೈಕೋರ್ಟ್ ಇಂದು ವಿಚಾರಣೆ ಮಾಡಿದೆ. ಈ ವೇಳೆ ಹಿಂದುಳಿದ‌ ವರ್ಗಗಳ ಆಯೋಗ ವರದಿ ಸಲ್ಲಿಸಿದೆ. ಸಚಿವ ಸಂಪುಟ ಸಭೆಯಲ್ಲಿ ವರದಿ ಚರ್ಚಿಸಬೇಕಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಜೂನ್‌ 6ರವರೆಗೆ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಎಜಿ ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ. ಹೀಗಾಗಿ ವಿಚಾರಣೆಯನ್ನು ಜೂನ್ 5ಕ್ಕೆ ಹೈಕೋರ್ಟ್ ಮುಂದೂಡಿದೆ.

ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ತೀವ್ರ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಜಾತಿಗಣತಿ ವರದಿ ಸ್ವೀಕರಿಸಿತ್ತು. ಇತ್ತೀಚೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವರದಿ ಸಲ್ಲಿಸಿದ್ದರು. ಸಾಮಾಜಿಕ ಮತ್ತು ಶೈಕ್ಷಣಿಕ ಅಧ್ಯಯನ ವರದಿ ಅಂತಾ ಹೆಸರಿದ್ರೂ, ಸಮಿಕ್ಷೆಯ ಪ್ರಶ್ನಾವಳಿಯಲ್ಲಿ ಜಾತಿ ಯಾವುದು ಅನ್ನೋ ಪ್ರಶ್ನೆ ಇದ್ದುದರಿಂದ ಇದು ಜಾತಿ ಗಣತಿಯೇ ಆಗಿದೆ. ಜಾತಿ ಗಣತಿ ವರದಿ ಸ್ವೀಕರಿಸಿದ್ದ ಸಿಎಂ ಸಿದ್ದರಾಮಯ್ಯ ಸಂಪುಟ ಸಭೆಯಲ್ಲಿ ವರದಿ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಎಂದು ಹೇಳಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲಿ ನಮ್ಮ ಅಭಿಪ್ರಾಯ ಕೇಳುತ್ತಾರೆ? ಶಾಮನೂರು ಶಿವಶಂಕರಪ್ಪ ಹೀಗೆನ್ನಲು ಕಾರಣ ಇಲ್ಲಿದೆ

ಇತ್ತೀಚೆಗೆ ಕೂಡ ಜಾತಿ ಗಣತಿ ಪ್ರಶ್ನಿಸಿ ಶಿವರಾಜ್ ಕನಶೆಟ್ಟಿ ಸಲ್ಲಿಸಿದ್ದ ಪಿಐಎಲ್​ ವಿಚಾರಣೆ ಮಾಡಿದ ಹೈಕೋರ್ಟ್, ಜಾತಿಗಣತಿ ನಡೆಸಿದ 9 ವರ್ಷಗಳ ನಂತರ ವರದಿ ಸಲ್ಲಿಸಲಾಗಿದೆ. ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಮಾತ್ರ ಅಧಿಕಾರವಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಚುನಾವಣೆ ವೇಳೆ ಜಾತಿಗಣತಿ ವರದಿ ಸ್ವೀಕರಿಸಲಾಗಿದೆ.

ರಾಜಕೀಯ ಕಾರಣಕ್ಕೆ ಸರ್ಕಾರದಿಂದ ಕ್ರಮವೆಂದು ಆರೋಪಿಸಿ ಅರ್ಜಿದಾರರ ಪರ ಹಿರಿಯ ವಕೀಲ ಜಿ.ಆರ್.ಗುರುಮಠ್ ವಾದ ಮಂಡಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ವರದಿ ಸ್ವೀಕರಿಸಿದ ಬಗ್ಗೆ ಮಾಹಿತಿ ಇಲ್ಲ ಎಂದು ಸರ್ಕಾರಿ ವಕೀಲರು ಹೇಳಿದ್ದರು.

ಇದನ್ನೂ ಓದಿ: ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ

ಸರ್ಕಾರ ವರದಿ ಸ್ವೀಕರಿಸಿದೆಯೇ ಇಲ್ಲವೇ ಎಂಬ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ ಎಂದು ಸರ್ಕಾರಿ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ಪೀಠ ಸೂಚನೆ ನೀಡಿದ್ದು, ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 5ಕ್ಕೆ ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.