ಶಿರೂರು ಮಠಕ್ಕೆ ನೂತನ ಯತಿಯಾಗಿ ಅಪ್ರಾಪ್ತರ ನೇಮಕಕ್ಕೆ ಆಕ್ಷೇಪ; ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲು
ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠಕ್ಕೆ ನೂತನ ಯತಿಯಾಗಿ ಅನಿರುದ್ಧ ಸರಳತ್ತಾಯ ಎಂಬವರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ನೂತನ ಪೀಠಾಧಿಪತಿ ನೇಮಕ ಮಾಡಲಾಗಿತ್ತು.
ಬೆಂಗಳೂರು: ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕವಾಗಿದೆ ಎಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ನೂತನ ಪೀಠಾಧಿಪತಿಯಾಗಿ ಅಪ್ರಾಪ್ತರ ನೇಮಕ ಆಗಿರುವುದನ್ನು ಪ್ರಶ್ನಿಸಿ ಪಿಐಎಲ್ ಸಲ್ಲಿಕೆಯಾಗಿದೆ. ಪೀಠಾಧಿಪತಿಯಾಗಿ 16 ವರ್ಷದ ಬಾಲಕನ ನೇಮಕವಾಗಿದೆ. ಈ ರೀತಿ ಅಪ್ರಾಪ್ತರನ್ನು ನೇಮಕ ಕಾನೂನುಬಾಹಿರವೆಂದು ಅರ್ಜಿದಾರರು ವಾದ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿ ಹೈಕೋರ್ಟ್ ಆದೇಶಿಸಿದೆ.
ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಯತಿಯಾಗಿ ಅನಿರುದ್ಧ ಸರಳತ್ತಾಯ ಎಂಬವರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ನೂತನ ಪೀಠಾಧಿಪತಿ ನೇಮಕ ಮಾಡಲಾಗಿತ್ತು. ಹೀಗೆ ಅಪ್ರಾಪ್ತರ ನೇಮಕ ಮಾಡುವಂತಿಲ್ಲವೆಂದು ತಕರಾರು ಕೇಳಿಬಂದಿದೆ.
ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯನ್ನು ಘೋಷಿಸಲಾಗಿತ್ತು. ಸೋದೆ (ವಾದಿರಾಜ) ಮಠದ ವಿಶ್ವವಲ್ಲಭ ತೀರ್ಥರು ನೂತನ ಪೀಠಾಧಿಪತಿಯ ಹೆಸರು ಘೋಷಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀಗಳಾಗಿ ನಿಯುಕ್ತಿಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠದಲ್ಲಿ ಮೇ 11ರಿಂದ 14ರವರೆಗೆ ಶಿಷ್ಯ ಸ್ವೀಕಾರ ವಿಧಿ ವಿಧಾನಗಳು ಜರುಗಲಿವೆ ಎಂದು ತಿಳಿಸಿದ್ದರು. ಅದರಂತೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದೆ.
ಶಿರೂರು ಮಠಕ್ಕೆ ನೂತನ ಪೀಠಾಧಿಕಾರಿಯಾಗಿ ನಿಯುಕ್ತಿಗೊಂಡಿರುವ ಅನಿರುದ್ಧ್ ಸರಳತ್ತಾಯ ಮಠದ ಉತ್ತರಾಧಿಕಾರಿಯಾಗಲಿದ್ದಾರೆ. ತುಳು ಶಿವಳ್ಳಿ ಮಾಧ್ವ ಬ್ರಾಹ್ಮಣ ಕುಟುಂಬದ 16 ವರ್ಷದ ವಟುವಾಗಿರುವ ಅವರು, ಉಡುಪಿಯ ವಿದ್ಯೋದಯ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪೂರೈಸಿದ್ದಾರೆ.
ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ. ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಎಲ್ಲಾ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ ಎಂದು ಉಡುಪಿಯ ಶಿರೂರಿನಲ್ಲಿ ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಉತ್ತರಾಯಣ ನಂತರ ಶಿರೂರು ಮಠಕ್ಕೆ ಉತ್ತರಾಧಿಕಾರಿ ಘೋಷಣೆ -ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ
ಉಡುಪಿ ಶಿರೂರು ಮಠಕ್ಕೆ ನೂತನ ಪೀಠಾಧಿಪತಿ ಘೋಷಣೆ; ಧರ್ಮಸ್ಥಳ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀ
Published On - 4:49 pm, Wed, 19 May 21