AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ

ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಇಂದಿನಿಂದಲೇ ಜಾರಿಯಾಗಿದೆ. ದೇವಸ್ಥಾನಗಳ ಒಳಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವಂತಿಲ್ಲ. ಒಂದು ವೇಳೆ ಬಳಸಿದರೆ ದಂಡ ವಿಧಿಸಲು ಸೂಚನೆ ನೀಡಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಕರ್ನಾಟಕ ಮುಜರಾಯಿ ದೇಗುಲಗಳಲ್ಲಿ ಇಂದಿನಿಂದಲೇ ಪ್ಲಾಸ್ಟಿಕ್ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Aug 15, 2025 | 12:28 PM

Share

ರಾಮನಗರ, ಆಗಸ್ಟ್ 15: ಇಂದಿನಿಂದ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಸ್ಥಾನಗಳಲ್ಲಿ (Muzrai Temples)  ಪ್ಲಾಸ್ಟಿಕ್ ಬಳಕೆ (Plastic Ban) ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಿಳಿಸಿದರು. ರಾಮನಗರದಲ್ಲಿ ಮಾತನಾಡಿದ ಅವರು, ದೇವಸ್ಥಾನ ಆವರಣದ ಒಳಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇಗುಲಗಳ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸುತ್ತವೆ ಎಂದು ತಿಳಿಸಿದರು. ಪರಿಸರ ಸ್ವಚ್ಛತೆ ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ದೇಗುಲಗಳಲ್ಲಿ ಪ್ಲಾಸ್ಟಿಕ್ ನಿಷೇಧ ವಿಚಾರವಾಗಿ ಗುರುವಾರವಷ್ಟೇ ವಿಧಾನಪರಿಷತ್ ಕಲಾಪದಲ್ಲಿಯೂ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದರು.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲಾಗುತ್ತಿದೆ. ಒಂದು ವೇಳೆ ಇದನ್ನು ಉಲ್ಲಂಘಿಸುವುದು ಕಂಡು ಬಂದರೆ ದಂಡ ವಿಧಿಸುವಂತೆ ದೇಗುಲಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಪರಿಷತ್ತಿನಲ್ಲಿ ತಿಳಿಸಿದ್ದರು.

ಇದನ್ನೂ ಓದಿ
Image
ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ
Image
ಬೆಂಗಳೂರಿನ ಗಾಳಿ ಆಂಜನೇಯಸ್ವಾಮಿ ದೇವಸ್ಥಾನ ಮುಜರಾಯಿ ಸುಪರ್ದಿಗೆ
Image
ನೀರಿನ ಬಾಟಲ್‌ ಸೇರಿದಂತೆ ದೇಗುಲಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ!
Image
ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಬೇಡಿಕೆ

ಈ ಮಧ್ಯೆ, ಬೆಂಗಳೂರು ದಕ್ಷಿಣ ಜಿಲ್ಲಾ ವ್ಯಾಪ್ತಿಯಲ್ಲಿರುವ (ರಾಮನಗರ), ಧಾರ್ಮಿಕ ದತ್ತಿ ಇಲಾಖೆ ಅಡಿ ಬರುವ ಎಲ್ಲ ದೇಗುಲಗಳಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದೇಗುಲಗಳ ಒಳಾಂಗಣಗಳಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಪ್ಲಾಸ್ಟಿಕ್ ಬಿಂದಿಗೆ, ಬಕೆಟ್, ಪ್ಲಾಸ್ಟಿಕ್ ಜಗ್, ಪ್ಲಾಸ್ಟಿಕ್​ ಲಕೋಟೆಗಳು, ಬಾಟಲಿಗಳನ್ನು ಬಳಸದಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮುಜರಾಯಿ ದೇವಾಲಯಗಳಲ್ಲಿ ಸಂಸ್ಕೃತ ಬದಲು ಕನ್ನಡದಲ್ಲೇ ಶ್ಲೋಕ

ಮುಜರಾಯಿ ಇಲಾಖೆಯ ದೇಗುಲಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂಬುದಾಗಿಯೂ ಸಚಿವರು ವಿಧಾನಸಭೆಯಲ್ಲಿ ಗುರುವಾರ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಕನ್ನಡದ ಶ್ಲೋಕದ ಬಗ್ಗೆ ಪ್ರಸ್ತಾಪಿಸಿದ್ದರು. ಅದಕ್ಕೆ ಉತ್ತರಿಸಿದ ರಾಮಲಿಂಗಾ ರೆಡ್ಡಿ, ಕನ್ನಡದಲ್ಲಿ ಶ್ಲೋಕಗಳನ್ನು ಅಭ್ಯಾಸ ಮಾಡಲು ಸೂಚನೆ ಕೊಡುತ್ತೇವೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?