“ಯುವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ” ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ

ಈ ಬಾರಿ ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಬದಲಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹಗೆ ಹೈಕಮಾಂಡ್ ಬಿಗ್ ಶಾಕ್ ಕೊಟ್ಟಿದೆ. ಇನ್ನು ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಶುರುವಾಗಿದೆ. ಮತ್ತೊಂದೆಡೆ ಯದುವೀರ್ ಅವರು ರಾಜಕೀಯಕ್ಕೆ ಬರುವುದು ಬೇಡ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ.

“ಯುವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ” ಯದುವೀರ್‌ ಚುನಾವಣೆಗೆ ಸ್ಪರ್ಧಿಸದಂತೆ ಪೋಸ್ಟರ್‌ ಅಭಿಯಾನ
ಯದುವೀರ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 12, 2024 | 6:54 PM

ಬೆಂಗಳೂರು/ಮೈಸೂರು, (ಮಾರ್ಚ್ 12): ರಾಜ್ಯದ ಗಮನ ಸೆಳೆದಿರುವ ಮೈಸೂರು-ಕೊಡಗು (Mysore-Kodagu) ಲೋಕಸಭಾ(Loka Saba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ವಿಚಾರ ಭಾರೀ ಕುತೂಹಲ ಮೂಡಿಸಿದೆ. ಮಹತ್ವದ ಬೆಳವಣಿಗೆಯಲ್ಲಿ ಸಂಸದ ಪ್ರತಾಪ್‌ ಸಿಂಹ(Prathap Simha) ಬದಲಿಗೆ ರಾಜವಂಶಸ್ಥ ಯದುವೀರ್‌ ಒಡೆಯರ್‌ (Yaduveer) ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಇನ್ನೊಂದೆಡೆ ರಾಜವಂಶಸ್ಥ ಯದುವೀರ್‌ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಎಂಟ್ರಿಕೊಡುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ದೊಡ್ಡಮಟ್ಟದ ಚರ್ಚೆ ನಡೆಯುತ್ತಿದೆ. ಯದುವೀರ್‌ ಒಡೆಯರ್‌ ಅವರು ಅವರು ಚುನಾವಣೆಗೆ ಸ್ಪರ್ಧೆ ಮಾಡುವ ವಿಷಯದ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ(Social Media)ದಲ್ಲಿ ಚರ್ಚೆ ನಡೆಯುತ್ತಿದ್ದು, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ ಎನ್ನುವ ಪೋಸ್ಟರ್ ಅಭಿಯಾನ ಆರಂಭವಾಗಿದೆ.

ರಾಜವಂಶಸ್ಥ ಯದುವೀರ್ ಒಡೆಯರ್ ಬಿಜೆಪಿ ಅಭ್ಯರ್ಥಿ ಆಗುತ್ತಾರೆ ಎಂಬ ಸಂಗತಿ ಹೊರಬೀಳುತ್ತಿದ್ದಂತೆ ಹಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭಿಸಿದ್ದಾರೆ. ಯದುವೀರ್‌ ಒಡೆಯರ್‌ ಅವರು ರಾಜಕೀಯಕ್ಕೆ ಬರದಂತೆ ಪೋಸ್ಟರ್ ಅಭಿಯಾನ ಆರಂಭಿಸಿದ್ದು, “ಯವರಾಜರೇ ನಿಮಗೆ ನಿಮ್ಮದೇ ಘನತೆ ಇದೆ, ದಯವಿಟ್ಟು ರಾಜಕೀಯಕ್ಕೆ ಬರಬೇಡಿ. ರಾಜರಾಗಿರಿ ಕೇವಲ ಮಂತ್ರಿಯಾಗಬೇಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಹಾರಾಜರನ್ನೇ ರಾಜಕೀಯಕ್ಕೆ ತಂದ ಪಕ್ಷದ ಮುಖಂಡರಿಗೆ ನಮೋ! ಯದುವೀರ್​​ ರಾಜಕೀಯ ಪ್ರವೇಶ ಬಗ್ಗೆ ಪ್ರತಾಪ್​ ಸಿಂಹ ಟಾಂಗ್

ಯದುವೀರ್ ಸ್ಪರ್ಧೆಗೆ ಪ್ರತಾಪ್ ಸಿಂಹ ಟಾಂಗ್

ಮೈಸೂರು-ಕೊಡಗು ಲೋಕಸಭೆಯ ಬಿಜೆಪಿ ಟಿಕೆಟ್ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ಗೆ ಸಿಗೋದು ಬಹುತೇಕ ಪಕ್ಕಾ ಆಗಿದೆ. ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿರುವ ಹಾಲಿ ಸಂಸದ ಪ್ರತಾಪ್​ ಸಿಂಹಗೆ ಕೈತಪ್ಪುತ್ತಿರೋದು ಬಹುತೇಕ ದೃಢವಾಗಿದೆ. ಅದೇ ಕಾರಣಕ್ಕೆ ಯದುವೀರ್ ಒಡೆಯರ್​​ ಅವರಿಗೆ ಪ್ರತಾಪ್ ಸಿಂಹ ತಮ್ಮ ಮೊನಚು ಮಾತುಗಳ ಮೂಲಕ ತಿವಿದಿದ್ದಾರೆ.

ಮಾಧ್ಯಮಗಳ ಎದುರು ಬೇಸರದಿಂದಲೇ ಮೈಸೂರು ಮಹಾರಾಜರಿಗೆ ಟಾಂಗ್ ನೀಡಿರುವ ಪ್ರತಾಪ್ ಸಿಂಹ, ಪಕ್ಷದಲ್ಲಿ ಒಂದು ಪ್ರೊಟೋಕಾಲ್ ಇರುತ್ತದೆ, ಕಾರ್ಯಕಾರಣಿ ಸಭೆ ನಡೆಯುತ್ತದೆ. ರಾಜ್ಯಾಧ್ಯಕ್ಷರು, ಪ್ರಮುಖರು, ದೊಡ್ಡವರು ಮೇಲೆ ಕೂತಿರುತ್ತಾರೆ. ನಮ್ಮಂಥವರು ಕೆಳಗಡೆ ಕೂತಿರುತ್ತೇವೆ. ಇನ್ಮೇಲೆ ರಾಜರು ಕೆಳಗಡೆ ಕೂರೋದಕ್ಕೂ ರೆಡಿ ಇದ್ದಾರೆ. ಅಷ್ಟೇ ಅಲ್ಲ, ನಮ್ಮ ರಾಜ್ಯಾಧ್ಯಕ್ಷರು ಮೈಸೂರಿಗೆ ಬರುತ್ತಿದ್ದಾರೆ ಅಂದರೆ ನಾವು ಹೋಟೆಲ್ ಮುಂದೆ ಬಿಸಿಲಲ್ಲಿ ಬೊಕ್ಕೆ ಹಿಡಿದು ಕಾಯುತ್ತಿರುತ್ತೇವೆ. ಮಹಾರಾಜರು ಆ ರೀತಿ ಕಾಯೋದಕ್ಕೂ ಸಿದ್ಧರಿದ್ದಾರೆ. ಇದ್ಕಿಂತ ಖುಷಿ ಇನ್ನೇನಿದೆ? ಎಂದು ಪರೋಕ್ಷವಾಗಿ ಯದುವೀರ್ ಕಾಲೆಳೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Tue, 12 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ