AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ

Karnataka Kannada Rajyotsava: ಕರ್ನಾಟಕದಾದ್ಯಂತ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡದಲ್ಲಿಯೇ ಕರ್ನಾಟಕದ ಜನತೆಗೆ ಶುಭ ಹಾರೈಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ
ರಾಜ್ಯೋತ್ಸವಕ್ಕೆ ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ ಮೋದಿ
Ganapathi Sharma
|

Updated on: Nov 01, 2025 | 10:34 AM

Share

ಬೆಂಗಳೂರು, ನವೆಂಬರ್ 1: ಬೆಂಗಳೂರು ನಗರ ಹಾಗೂ ಕರ್ನಾಟಕದ (Karnataka) ವಿವಿಧ ಕಡೆಗಳಲ್ಲಿ ಇಂದು 70ನೇ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದ ಜನತೆಗೆ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ. ಉಭಯ ನಾಯಕರು ಎಕ್ಸ್ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

‘ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಪ್ರಧಾನಿ ಮೋದಿ ಎಕ್ಸ್ ಸಂದೇಶ

‘ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ’ ಎಂದು ಅಮಿತ್ ಶಾ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ