Modi 2.0 Cabinet: ಪ್ರಧಾನಿ ಮೋದಿ ಸಂಪುಟದಲ್ಲಿ ಶೇ 42 ರಷ್ಟು ಸಚಿವರಿಗೆ ಕ್ರಿಮಿನಲ್ ಹಿನ್ನೆಲೆ, 70 ಸಚಿವರು ಕೋಟ್ಯಾಧಿಪತಿಗಳು -ಎಡಿಆರ್​ ವರದಿ

PM Modi cabinet: ನರೇಂದ್ರ ಮೋದಿ ಸಂಪುಟದ 78ಸಚಿವರಲ್ಲಿ 70 ಸಚಿವರು ಕೋಟ್ಯಾಧಿಪತಿಗಳಾಗಿದ್ದಾರೆ. ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ಆಗಿದೆ. ಮೋದಿ ಸಂಪುಟದ 4 ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ.

Modi 2.0 Cabinet: ಪ್ರಧಾನಿ ಮೋದಿ ಸಂಪುಟದಲ್ಲಿ ಶೇ 42 ರಷ್ಟು ಸಚಿವರಿಗೆ ಕ್ರಿಮಿನಲ್ ಹಿನ್ನೆಲೆ, 70 ಸಚಿವರು ಕೋಟ್ಯಾಧಿಪತಿಗಳು -ಎಡಿಆರ್​ ವರದಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 10, 2021 | 2:53 PM

ಮೋದಿ 2.O ಸರಕಾರದಲ್ಲಿ ಮೊದಲ ಬಾರಿಗೆ ಸಂಪುಟಕ್ಕೆ ಮೇಜರ್ ಸರ್ಜರಿ ನಡೆದಿದೆ.‌ ಹೊಸದಾಗಿ 44 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡಿದ್ದಾರೆ. ‌ಮೋದಿ ತನ್ನ ಸಂಪುಟ ಹಿಗ್ಗಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಸಂಪುಟದಲ್ಲಿರುವ 78 ಸಚಿವರಲ್ಲಿ 33 ಮಂದಿ ವಿರುದ್ಧ ಕ್ರಿಮಿನಲ್ ಹಿನ್ನೆಲೆಯಿದೆ. ನೂತನ ಕೇಂದ್ರ ಸಂಪುಟದ ಶೇಕಡಾ 40 ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಶೇಕಡಾ 90 ರಷ್ಟು ಸಚಿವರು ಕೋಟ್ಯಾಧಿಪತಿಗಳಿದ್ದಾರೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ADR ತನ್ನ ವರದಿಯಲ್ಲಿ ತಿಳಿಸಿದೆ.

ಸಂಪುಟದಲ್ಲಿನ 78 ಮಂತ್ರಿಗಳಲ್ಲಿ 33 ಮಂದಿ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿದ್ದಾರೆ ಎಂದು ಎಡಿಆರ್ ತಿಳಿಸಿದೆ. 33 ಮಂದಿ ಮಂತ್ರಿಗಳ ಪೈಕಿ 24 ಮಂತ್ರಿಗಳ ವಿರುದ್ಧ ಕೊಲೆ, ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ಇರುವುದನ್ನು ಸ್ವತಃ ತಾವೇ ತಮ್ಮ ಚುನಾವಣಾ ಅಫಿಡವಿಟ್‌ಗಳಲ್ಲಿ ಘೋಷಿಸಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಸಂಪುಟ ಹಿಗ್ಗಿಸಿಕೊಂಡ ಬಳಿಕ ಕ್ರಿಮಿನಲ್‌ ಹಿನ್ನೆಲೆಯ ಮಂತ್ರಿಗಳ ಸಂಖ್ಯೆಯೂ ಏರಿಕೆಯಾಗಿದೆ. ಸಚಿವ ಸಂಪುಟ ಪುನಾರಚನೆ ಬಳಿಕ ಸಂಪುಟದಲ್ಲಿ ಕ್ರಿಮಿನಲ್ ಪ್ರಕರಣಗಳಿರುವ ಸಚಿವರ ಪ್ರಮಾಣ ಶೇಕಡಾ 3 ರಷ್ಟು ಏರಿಕೆಯಾಗಿದೆ. 2019ರಲ್ಲಿ ರಚನೆಯಾದ ಮೊದಲ ಸಚಿವ ಸಂಪುಟದಲ್ಲಿ ಪ್ರಮಾಣವಚನ ಸ್ವೀಕರಿಸಿದ, 56 ಮಂತ್ರಿಗಳಲ್ಲಿ ಶೇಕಡಾ 39 ರಷ್ಟು ಮಂದಿಯ ವಿರುದ್ದ ಕ್ರಿಮಿನಲ್ ಪ್ರಕರಣಗಳಿದ್ದವು.

ಸಂಪುಟದಲ್ಲಿ ಶೇಕಡಾ 91 ರಷ್ಟು ಸಚಿವರು ಕೋಟ್ಯಾಧಿಪತಿಗಳು

ನರೇಂದ್ರ ಮೋದಿ ಸಂಪುಟದ 78ಸಚಿವರಲ್ಲಿ 70 ಸಚಿವರು ಕೋಟ್ಯಾಧಿಪತಿಗಳಾಗಿದ್ದಾರೆ. ಪ್ರತಿ ಸಚಿವರ ಸರಾಸರಿ ಆಸ್ತಿ 16.24 ಕೋಟಿ ರೂ. ಆಗಿದೆ. ಮೋದಿ ಸಂಪುಟದ 4 ಸಚಿವರು 50 ಕೋಟಿ ರೂ.ಗಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ – 395 ಕೋಟಿ ರೂ, ಪಿಯೂಷ್ ಗೋಯಲ್ – 95 ಕೋಟಿ ರೂ, ನಾರಾಯಣ್ ರಾಣೆ – 87 ಕೋಟಿ ರೂ, ರಾಜೀವ್ ಚಂದ್ರಶೇಖರ್ – 64 ಕೋಟಿ ರೂ ಆಸ್ತಿ ಘೋಷಿಸಿಕೊಂಡಿದ್ದಾರೆ.

– ಹರೀಶ್ ಟಿವಿನೈನ್ ನವದೆಹಲಿ Modi Cabinet: ನಿಮ್ಮ ಕೆಲಸಗಳು ಎದ್ದು ಕಾಣಬೇಕೇ ವಿನಃ ನೀವಲ್ಲ; ಹೊಸ ಸಚಿವರಿಗೆ ಮೋದಿ ಪಾಠ

(PM Modi cabinet 42 percent of ministers have criminal background says adr report )

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ