SL Bhyrappa: ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಧೀಮಂತ ವ್ಯಕ್ತಿ; ಎಸ್.ಎಲ್ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಕನ್ನಡದ ಹಿರಿಯ ಸಾಹಿತಿ ಪದ್ಮಭೂಷಣ ಪುರಸ್ಕೃತ ಎಸ್​.ಎಲ್ ಭೈರಪ್ಪ ಬೆಂಗಳೂರಿನಲ್ಲಿ ಇಂದು ನಿಧನರಾಗಿದ್ದಾರೆ. 94 ವರ್ಷದ ಎಸ್​.ಎಲ್ ಭೈರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಎಸ್​.ಎಲ್. ಭೈರಪ್ಪನವರ ಜೊತೆಗಿನ ತಮ್ಮ ಭೇಟಿಯ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

SL Bhyrappa: ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಧೀಮಂತ ವ್ಯಕ್ತಿ; ಎಸ್.ಎಲ್ ಭೈರಪ್ಪ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
PM Modi with SL Bhyrappa

Updated on: Sep 24, 2025 | 4:02 PM

ಬೆಂಗಳೂರು, ಸೆಪ್ಟೆಂಬರ್ 24: ಕನ್ನಡದ ಹಿರಿಯ ಸಾಹಿತಿ ಎಸ್​. ಎಲ್ ಭೈರಪ್ಪ (SL Bhyrappa) ಬೆಂಗಳೂರಿನ ಆರ್​ಆರ್​ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. 94 ವರ್ಷದ ಎಸ್​.ಎಲ್ ಭೈರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಎಸ್.ಎಲ್. ಭೈರಪ್ಪ ಅವರ ನಿಧನದಿಂದ ಬೇಸರವಾಗಿದೆ. ನಮ್ಮ ಆತ್ಮಸಾಕ್ಷಿಯನ್ನು ಕಲಕಿ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ಮೋದಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಭೈರಪ್ಪ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದರು. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.


ಇದನ್ನೂ ಓದಿ: SL Bhyrappa Obituary: ಕರುನಾಡಿನ ಜೀವಂತ ಸಾಹಿತ್ಯ ದಂತಕಥೆ ಎಸ್​.ಎಲ್​. ಭೈರಪ್ಪ

ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಎಸ್​.ಎಲ್ ಭೈರಪ್ಪ ಅವರ ಅಚಲವಾದ ಉತ್ಸಾಹವು ಮುಂಬರುವ ವರ್ಷಗಳಲ್ಲಿಯೂ ನಮ್ಮೆಲ್ಲರ ಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳ ಜೊತೆ ನಾವಿದ್ದೇವೆ. ಓಂ ಶಾಂತಿ. ಎಂದು ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 3:52 pm, Wed, 24 September 25