AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಧುರೈ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಹೊರಡುವ ಸಮಯ, ನಿಲುಗಡೆ ಇತರೆ ಮಾಹಿತಿ ಇಲ್ಲಿದೆ

Madurai Bengaluru Cantonment Vande Bharat Express: ಕರ್ನಾಟಕ ಮತ್ತು ತಮಿಳುನಾಡಿನ ನಗರಗಳ ನಡುವೆ ಸಂಪರ್ಕ ಬೆಸೆಯುವ ನಿಟ್ಟಿನಲ್ಲಿ ಮತ್ತೊಂದು ವಂದೇ ಭಾರತ್ ರೈಲು ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅವರು ಶನಿವಾರ ಬೆಂಗಳೂರು ಮಧುರೈ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ರೈಲಿನ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ ಇಲ್ಲಿದೆ.

ಬೆಂಗಳೂರು ಮಧುರೈ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಹೊರಡುವ ಸಮಯ, ನಿಲುಗಡೆ ಇತರೆ ಮಾಹಿತಿ ಇಲ್ಲಿದೆ
ಬೆಂಗಳೂರು ಮಧುರೈ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆImage Credit source: PTI
Ganapathi Sharma
|

Updated on:Aug 31, 2024 | 5:40 PM

Share

ಬೆಂಗಳೂರು, ಆಗಸ್ಟ್ 31: ಬೆಂಗಳೂರು ಮಧುರೈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸೇರಿದಂತೆ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕವನ್ನೊಳಗೊಂಡ ಮೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಾಹ್ನ ಚಾಲನೆ ನೀಡಿದರು. ಚೆನ್ನೈ ಸೆಂಟ್ರಲ್ ಹಾಗೂ ನಾಗರ್‌ಕೋಯಿಲ್, ಮೀರತ್ ಹಾಗೂ ಲಖನೌ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲುಗಳಿಗೂ ಚಾಲನೆ ನೀಡಲಾಗಿದೆ.

ಮಧುರೈ ಬೆಂಗಳೂರು ವಂದೇ ಭಾರತ್ ರೈಲಿನ ವಿವರ

ಮಧುರೈ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ. ಈ ವಂದೇ ಭಾರತ್ ರೈಲು ಸೇವೆಯು ತಮಿಳುನಾಡಿನ ಮಧುರೈನ ದೇವಾಲಯ ನಗರವನ್ನು ಕರ್ನಾಟಕದ ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರದೊಂದಿಗೆ ಸಂಪರ್ಕಿಸುತ್ತದೆ.

ರೈಲಿನ ಸಮಯ

ರೈಲು ಸಂಖ್ಯೆ 20671 ಮಧುರೈನಿಂದ ಬೆಳಿಗ್ಗೆ 5:15 ಕ್ಕೆ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪುತ್ತದೆ. ಪ್ರತಿಯಾಗಿ (ಟ್ರೇನ್ ಸಂಖ್ಯೆ 20672)ಬೆಂಗಳೂರಿನಿಂದ ಮಧ್ಯಾಹ್ನ 1:30 ಕ್ಕೆ ಹೊರಡುವ ವಂದೇ ಭಾರತ್ ರೈಲು ರಾತ್ರಿ 9:45ಕ್ಕೆ ಮಧುರೈಗೆ ತಲುಪಲಿದೆ.

ಎಲ್ಲೆಲ್ಲಿ ನಿಲುಗಡೆ?

ಮಧುರೈ ಬೆಂಗಳೂರು ವಂದೇ ಭಾರತ್ ಎಕ್ಸ್​​​ಪ್ರೆಸ್ ರೈಲು ದಿಂಡುಗಲ್, ತಿರುಚಿರಾಪಳ್ಳಿ, ಕರೂರ್, ನಾಮಕ್ಕಲ್, ಸೇಲಂ ಮತ್ತು ಕೃಷ್ಣರಾಜಪುರಂನಲ್ಲಿ ನಿಲುಗಡೆ ಹೊಂದಿದೆ.

ಇದನ್ನೂ ಓದಿ: ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪು ಬೇಕು: ಪ್ರಧಾನಿ ಮೋದಿ

ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಕ್ಸ್​ ಖಾತೆಯಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ಮಧುರೈ-ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಎಂದು ನೈಋತ್ಯ ರೈಲ್ವೆ ಟ್ವೀಟ್ ಮಾಡಿದೆ.

ನೈಋತ್ಯ ರೈಲ್ವೆ ಟ್ವೀಟ್

ಮೋದಿ ಎಕ್ಸ್ ಸಂದೇಶ

ಪ್ರಧಾನಮಂತ್ರಿ ನರೇಂದ್ರ ಮೋದಿ 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ್ ಭಾರತ್ ದೃಷ್ಟಿಕೋನದಡಿ ಈ ಉಪಕ್ರಮ ಕೈಗೊಳ್ಳಲಾಗಿದ್ದು, ಅತ್ಯಾಧುನಿಕ ರೈಲುಗಳು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಸಮಯವನ್ನು ಉಳಿಸುತ್ತದೆ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:23 pm, Sat, 31 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್