ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ

|

Updated on: Aug 26, 2023 | 8:01 AM

Narendra Modi Speech in Bangalore; ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿಗಾಗಿ ಇಲ್ಲಿಗೆ ಬಂದಿದ್ದೇನೆ. ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ
ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್; ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಘೋಷಣೆ
Follow us on

ಬೆಂಗಳೂರು, ಆಗಸ್ಟ್ 26: ‘ದೂರದ ದೇಶದಿಂದ ನೇರ ಇಲ್ಲಿಗೆ ಬಂದೆ. ಭಾರತದ ಸೂರ್ಯೋದಯವಾಗುತ್ತಿರುವ ಈ ಹೊತ್ತಿನಲ್ಲಿ ಆ ಬೆಳಕಿನಲ್ಲಿ ನಾನು ಬೆಂಗಳೂರಿಗರ (Bangalore) ಮುಖ ನೋಡಿದೆ. ನಮ್ಮ ದೇಶದ ವಿಜ್ಞಾನಿಗಳ ಸಾಧನೆಯಿಂದ ಬಹಳ ಸಂತಸವಾಗುತ್ತಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಹೇಳಿದರು. ಚಂದ್ರಯಾನ-3ರ ಯಶಸ್ಸಿಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಲು ಬೆಂಗಳೂರಿಗೆ ಬಂದ ಅವರು, ಹೆಚ್​ಎಎಲ್ ಏರ್​ಪೋರ್ಟ್​ ಹೊರಭಾಗದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಅವರು ಮಾತನಾಡು ಆರಂಭಿಸುತ್ತಿದ್ದಂತೆಯೇ, ಅಭಿಮಾನಿಗಳು ‘ಜೈ ಮೋದಿ’ ಘೋಷಣೆ ಕೂಗಲು ಮುಂದಾದರು. ತಕ್ಷಣವೇ ಅದನ್ನು ತಡೆದ ಮೋದಿ, ‘ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್’ ಎಂಬ ಘೋಷಣೆ ಕೂಗುವಂತೆ ಮನವಿ ಮಾಡಿದರು. ಜತೆಗೆ, ‘ಭಾರತ್ ಮಾತಾ ಕೀ ಜೈ’ ಎಂಬ ಘೋಷಣೆಗಳೂ ಮೊಳಗಿದವು.

ಮೋದಿ ಭೇಟಿ ಯಾವುದೇ ಕಾರಣಕ್ಕೂ ಪಕ್ಷದ ಕಾರ್ಯಕ್ರಮ ಆಗಬಾರದು ಎಂಬ ನಿಟ್ಟಿನಲ್ಲಿ ಪ್ರಧಾನಿಯವರು ಬಹಳ ಎಚ್ಚರಿಕೆಯ ನಡೆ ಇಟ್ಟಿರುವುದು ಎದ್ದು ಕಾಣುತ್ತಿತ್ತು.

ನಮ್ಮ ದೇಶದ ವಿಜ್ಞಾನಿಗಳ ಸಾಧನೆ ಬಗ್ಗೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ನಮ್ಮ ವಿಜ್ಞಾನಿಗಳ ಶಕ್ತಿ ಇಡೀ ವಿಶ್ವಕ್ಕೆ ಗೊತ್ತಾಗಿದೆ. ವಿದೇಶದಲ್ಲಿ ಇರುವಾಗಲೇ ಇಸ್ರೋಗೆ ಭೇಟಿ ನೀಡಲು ನಿರ್ಧರಿಸಿದ್ದೆ. ಹಾಗಾಗಿ ವಿದೇಶದಿಂದ ನೇರವಾಗಿ ವಿಜ್ಞಾನಿಗಳ ಭೇಟಿಗಾಗಿ ಇಲ್ಲಿಗೆ ಬಂದಿದ್ದೇನೆ. ಇಸ್ರೋ ಕಚೇರಿಗೆ ತೆರಳಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು.

ಸಿಎಂ, ಡಿಸಿಎಂ, ರಾಜ್ಯಪಾಲರಿಗೆ ಧನ್ಯವಾದ


ವಿದೇಶದಲ್ಲಿರುವಾಗ ಅಲ್ಲಿಂದ ನೇರ ಬೆಂಗಳೂರಿಗೆ ಬರಲು ನಿರ್ಧರಿಸಿದೆ. ಹೀಗಾಗಿ ಕರ್ನಾಟಕದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಿಗೆ ನಾನು ಮನವಿ ಮಾಡಿದ್ದೆ. ಅದಕ್ಕೆ ಇಷ್ಟೊಂದು ಕಡಿಮೆ ಅವಧಿಯಲ್ಲಿ ಪ್ರೋಟೋಕಾಲ್​ ವ್ಯವಸ್ಥೆ ಮಾಡಿದ ಅವರಿಗೆ ಧನ್ಯವಾದ ಸಮರ್ಪಿಸುತ್ತಿದ್ದೇನೆ ಎಂದು ಮೋದಿ ಹೇಳಿದರು. ನಂತರ ಇಸ್ರೋ ಪ್ರಧಾನ ಕಚೇರಿಯತ್ತ ನಿರ್ಗಮಿಸಿದರು.

ಮೋದಿ ಭೇಟಿಯ ಲೈವ್​ ಅಪ್​ಡೇಟ್ಸ್​ಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದಕ್ಕೂ ಮುನ್ನ, ಗ್ರೀಕ್​ ದೇಶದಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದರಾದ ತೇಜಸ್ವಿ ಸೂರ್ಯ, ಎಸ್​​​.ಮುನಿಸ್ವಾಮಿ, ಶಾಸಕರಾದ ಭೈರತಿ ಬಸವರಾಜ್​​, ಮಂಜುಳಾ ಲಿಂಬಾವಳಿ ಪ್ರಧಾನಿಯವರನ್ನು ಸ್ವಾಗತಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:09 am, Sat, 26 August 23