Narendra Modi in Bengaluru Live: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್​ ಸಮಾವೇಶ: ನೇರ ಪ್ರಸಾರ ಇಲ್ಲಿದೆ

Narendra Modi in Bengaluru Live: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೃಹತ್​ ಸಮಾವೇಶ: ನೇರ ಪ್ರಸಾರ ಇಲ್ಲಿದೆ

ಗಂಗಾಧರ​ ಬ. ಸಾಬೋಜಿ
|

Updated on:Apr 20, 2024 | 5:31 PM

Lok Sabha Elections: ಇತ್ತೀಚೆಗೆ ಮೈಸೂರು, ಮಂಗಳೂರಿನಲ್ಲಿ ಮತಯಾಚನೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್​ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಇದೀಗ ಬೆಂಗಳೂರಿನ ಅರಮನೆ ಮೈದಾನಕ್ಕೆ ಆಗಮಿಸಿದ್ದಾರೆ. ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಏಪ್ರಿಲ್​ 20: ರಾಜ್ಯದ 28 ಕ್ಷೇತ್ರಗಳು ನಮ್ಮದೇ ಅಂತಿರುವ ಬಿಜೆಪಿ ಅಬ್ಬರದ ಪ್ರಚಾರ ನಡೆಸಿದೆ. ಇತ್ತೀಚೆಗೆ ಮೈಸೂರು, ಮಂಗಳೂರಿನಲ್ಲಿ ಮತಯಾಚನೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ಎರಡನೇ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್​ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಜೆಡಿಎಸ್-ಬಿಜೆಪಿ ನಾಯಕರ ಸಮಾಗಮವಾಗಿದ್ದು, ಮಾಜಿ ಪ್ರಧಾನಿ ದೇವೇಗೌಡ ಮತ್ತು ಪ್ರಧಾನಿ ಮೋದಿ ಒಗ್ಗಟ್ಟಾಗಿ ಮತಯಾಚಿಸಿದರು. ಇದೀಗ ಪ್ರದಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ನಗರದ ಅರಮನೆ ಮೈದಾನದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಅಭ್ಯರ್ಥಿ ಶೋಭಾ ಕರಂದ್ಲಾಜೆ, ಸಂಸದ ಡಿ.ವಿ.ಸದಾನಂದಗೌಡ, ವಿಪಕ್ಷ ನಾಯಕ ಆರ್.ಅಶೋಕ್​​, ಡಾ.ಸಿ.ಎನ್.ಮಂಜುನಾಥ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ನಿಖಿಲ್ ಕುಮಾರಸ್ವಾಮಿ, ಬೆಂಗಳೂರಿನ ಬಿಜೆಪಿ ಶಾಸಕರು ಉಪಸ್ಥಿತರಿದ್ದರು. ಮೋದಿ ಭಾಷಣದ ಲೈವ್ ವಿಡಿಯೋ ಇಲ್ಲಿದೆ ನೋಡಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Apr 20, 2024 05:30 PM