ಶ್ರೀಕೃಷ್ಣ ಮಠದಲ್ಲಿ ಕನಕನ ಕಿಂಡಿ ಸ್ವರ್ಣ ಕವಚ ಲೋಕಾರ್ಪಣೆ ಮಾಡಿದ ನಮೋ
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ವೇಳೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಠದ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆಯನ್ನೂ ಅವರು ನೆರವೇರಿಸಿದ್ದಾರೆ. ಪರ್ಯಾಯ ಪುತ್ತಿಗೆ ಮಠದ ಶ್ರೀಗಳ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆದಿದೆ.
ಉಡುಪಿ, ನವೆಂಬರ್ 28: ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಯ ಐತಿಹಾಸಿಕ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ, ಈ ವೇಳೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಠದ ಕನಕನ ಕಿಂಡಿಗೆ ಅರ್ಪಿಸಿರುವ ಸ್ವರ್ಣ ಕವಚದ ಲೋಕಾರ್ಪಣೆ ನೆರೆವೇರಿಸಿದ್ದಾರೆ. ಈ ಸಂದರ್ಭದಲ್ಲಿ ಧಾರ್ಮಿಕ ವಿಧಿವಿಧಾನಗಳ ಭಾಗವಾಗಿ ವೇದ ಮಂತ್ರಗಳನ್ನು ಪಠಿಸಲಾಯಿತು. ಉಡುಪಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಶ್ರೀಗಳ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
