PM Modi Karnataka Visit: ಇಂದು ಪ್ರಧಾನಿ ಮೋದಿ ಬೆಂಗಳೂರು, ತುಮಕೂರು ಭೇಟಿ; 6 ಪ್ರಮುಖ ಯೋಜನೆಗಳಿಗೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಇಂದು (ಫೆ.06) ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು ಮತ್ತು ತುಮಕೂರಿನಲ್ಲಿ 6 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

PM Modi Karnataka Visit: ಇಂದು ಪ್ರಧಾನಿ ಮೋದಿ ಬೆಂಗಳೂರು, ತುಮಕೂರು ಭೇಟಿ; 6 ಪ್ರಮುಖ ಯೋಜನೆಗಳಿಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 06, 2023 | 8:52 AM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಫೆ.06) ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರು (Bengaluru) ಮತ್ತು ತುಮಕೂರಿನಲ್ಲಿ (Tumakuru) 6 ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಮೋದಿ ಜೊತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್​​ ಸಿಂಗ್​ (Rajnath Sing)​ ದೆಹಲಿಯಿಂದ ಹೊರಟು ಬೆಳಗ್ಗೆ 10.55ಕ್ಕೆ ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಅಲ್ಲಿಂದ ಹೊರಟು ಬೆಳಗ್ಗೆ 11.30ಕ್ಕೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಬಳಿಯಿರುವ ಬಿಐಇಸಿಯಲ್ಲಿ ಇಂಧನ ಸಪ್ತಾಹ (India energy week) ಉದ್ಘಾಟನೆ ಮಾಡಲಿದ್ದಾರೆ. ನಂತರ ಜಾಗತಿಕ ತೈಲ, ಅನಿಲ ವಲಯದ ಸಿಇಒಗಳ ಜೊತೆ ದುಂಡು ಮೇಜಿನ ಸಭೆ ನಡೆಸಲಿದ್ದಾರೆ.

ನಂತರ ಹಸಿರು ಸಾಗಣೆ ಜಾಥಾಗೆ ಚಾಲನೆ ನೀಡಲಿದ್ದು, ಹಸಿರು ಇಂಧನ ಕ್ಷೇತ್ರದಲ್ಲಿ ಬಹುಹಂತದ ಉಪಕ್ರಮಗಳು, ಸಾಗಣೆ ಜಾಥಾ ಬಳಿಕ ಶೀಷರಹಿತ ಉಪಕ್ರಮದಡಿ ಸಮವಸ್ತ್ರ ಬಿಡುಗಡೆಗೊಳಿಸಲಿದ್ದಾರೆ. ನಂತರ ಭಾರತೀಯ ತೈಲ ನಿಮಗದ ಒಳಾಂಗಣ ಸೌರ ಅಡುಗೆ ವ್ಯವಸ್ಥೆಯ ಅವಳಿ ಕುಕ್ ಟಾಪ್ ಮಾದರಿ ಲೋಕಾರ್ಪಣೆಗೊಳಿಸಲಿದ್ದಾರೆ.

ತುಮಕೂರು ಪ್ರವಾಸ

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್​​ ಸಿಂಗ್​ ಬೆಂಗಳೂರಿಂದ ಹೊರಟು, ಮಧ್ಯಾಹ್ನ 3.30ಕ್ಕೆ HAL​ ಫ್ಯಾಕ್ಟರಿ ತಲುಪಲಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್ ಗ್ರಾಮದ ಬಳಿಯ ಏಷ್ಯಾದಲ್ಲೇ ಅತಿ ದೊಡ್ಡ ಹೆಚ್​ಎಎಲ್​ನ ಹೆಲಿಕಾಪ್ಟರ್​ ಉತ್ಪಾದನಾ ಘಟಕವನ್ನು​ ಉದ್ಘಾಟಿಸಲಿದ್ದಾರೆ. 10 ನಿಮಿಷ ಫ್ಯಾಕ್ಟರಿ ವೀಕ್ಷಿಸಿ, ಎಲ್​ಯು ಹೆಲಿಕಾಪ್ಟರ್ ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 3.43ಕ್ಕೆ ಕಾರ್ಯಕ್ರಮದ ವೇದಿಕೆಗೆ ಆಗಮಿಸಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತ ಭಾಷಣ ಮಾಡಲಿದ್ದಾರೆ. ನಂತರ 4 ನಿಮಿಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಷಣ ಮಾಡಲಿದ್ದಾರೆ. ಆ ನಂತರ ಚಿಕ್ಕನಾಯಕನಹಳ್ಳಿ, ತಿಪಟೂರು ಜಲಜೀವನ್​ ಮಿಷನ್​ಗೆ ಪ್ರಧಾನಿ ಅಡಿಗಲ್ಲು ಹಾಕಲಿದ್ದಾರೆ. ತುಮಕೂರು ಕೈಗಾರಿಕಾ ಟೌನ್​ಶಿಪ್​ಗೆ ಶಿಲಾನ್ಯಾಸ ನೆರವೇರಿಸಿ, ಸಂಜೆ 4ರಿಂದ 4.30ರವರೆಗೆ ಭಾಷಣ ಮಾಡಲಿದ್ದಾರೆ. ಸಂಜೆ 4.30ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ನಿರ್ಗಮಿಸಲಿದ್ದಾರೆ. ಸಂಜೆ 4.45ಕ್ಕೆ ತುಮಕೂರಿನಿಂದ ಬೆಂಗಳೂರಿಗೆ ವಾಪಸ್​ ಆಗಲಿದ್ದು, ಸಂಜೆ 5.20ಕ್ಕೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಾರೆ.

ಪ್ರಧಾನಿ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವ ನಾಯಕರು

ಹೆಚ್​ಎಎಲ್​​​ ಫ್ಯಾಕ್ಟರಿ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಪ್ರಧಾನಿ ಮೋದಿ ಜತೆ 15 ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಗೃಹಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಮುರುಗೇಶ್ ನಿರಾಣಿ, ವಿ.ಸೋಮಣ್ಣ, ಜೆ.ಸಿ.ಮಾಧುಸ್ವಾಮಿ ಮತ್ತು ಬಿ.ಸಿ.ನಾಗೇಶ್​, ರಾಜ್ಯಸಭಾ ಸದಸ್ಯ ಜಗ್ಗೇಶ್, ಸಂಸದ ಬಸವರಾಜು, ಶಾಸಕರಾದ ಜ್ಯೋತಿ ಗಣೇಶ್, ಎಂ.ಚಿದಾನಂದ, ಎ.ಎಸ್.ಜಯರಾಂ, ರಾಜೇಶ್ ಗೌಡ, ವೈ.ಎ.ನಾರಾಯಣಸ್ವಾಮಿಗೆ ವೇದಿಕೆ ಮೇಲೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮದಲ್ಲಿ 70 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕೆ ಬರುವವರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಶಿಲಾನ್ಯಾಸ ನೆರವೇರಿಸಲಿರುವ ಮೋದಿ, ತುಮಕೂರಿನಲ್ಲಿ ಮೂರು ಹಂತಗಳಲ್ಲಿ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಾಡಲಾಗಿದೆ. ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ಸುಮಾರು 8,484 ಎಕರೆ ಪ್ರದೇಶದಲ್ಲಿ ಮೂರು ಹಂತಗಳಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ. ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್​ನ ಭಾಗವಾಗಿದೆ.

ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರಿನಲ್ಲಿ ಜಲಜೀವನ್ ಅಭಿಯಾನದ ಯೋಜನೆಗಳಿಗೆ ಮೋದಿ ಶಿಲಾನ್ಯಾಸ ನೆರವೇರಿಸಲಿದ್ದಾರೆ. 430 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ ಯೋಜನೆ ಇದಾಗಿದ್ದು, ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಅಡಿ ಚಿಕ್ಕನಾಯಕನಹಳ್ಳಿಯ 147 ಜನವಸತಿ ಪ್ರದೇಶಗಳಿಗೆ ನೀರು ಪೂರೈಕೆಯಾಗಲಿದ್ದಾರೆ. 115 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಕಾಮಗಾರಿ ನಡೆಯುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಕ್ಲಿ ಮಾಡಿ

Published On - 7:22 am, Mon, 6 February 23

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?