ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ: ಪೂಜಿಸಲೆಂದೇ ಹೂಗಳ ತಂದೆ ಹಾಡಿಗೆ ಮೆಚ್ಚುಗೆ

|

Updated on: Jan 16, 2024 | 10:15 AM

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಮೋದಿ ಬಣ್ಣಿಸಿದ್ದಾರೆ.

ಕನ್ನಡ ಹಾಡಿಗೆ ತಲೆದೂಗಿದ ಪ್ರಧಾನಿ ಮೋದಿ: ಪೂಜಿಸಲೆಂದೇ ಹೂಗಳ ತಂದೆ ಹಾಡಿಗೆ ಮೆಚ್ಚುಗೆ
ಪ್ರಧಾನಿ ನರೇಂದ್ರ ಮೋದಿ & ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್
Follow us on

ಬೆಂಗಳೂರು, ಜನವರಿ 16: ಕನ್ನಡದ ಹಾಡಿಗೆ (Kannada Song) ತಲೆದೂಗಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಆ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದ್ದಾರೆ. ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ (Sivasri Skandaprasad) ಅವರು ಯೂಟ್ಯೂಬ್​ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿನ ಲಿಂಕ್​ ಅನ್ನು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಮೋದಿ ಬಣ್ಣಿಸಿದ್ದಾರೆ.

ಎರಡು ಕನಸು ಸಿನಿಮಾದ ಹಾಡು

‘ಪೂಜಿಸಲೆಂದೆ ಹೂಗಳ ತಂದೆ’ ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‌ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ಹಾಡು. ಕನ್ನಡದ ಶ್ರೇಷ್ಠ ಪ್ರಣಯ ಚಲನಚಿತ್ರಗಳಲ್ಲಿ ಒಂದೆಂದು ಪರಿಗಣಿಸಲಾಗಿರುವ ಈ ಸಿನಿಮಾ 1974 ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು. ‘ಪೂಜಿಸಲೆಂದೆ ಹೂಗಳ ತಂದೆ’ ಹಾಡಿನ ಸಾಹಿತ್ಯ ಚಿ. ಉದಯಶಂಕರ್ ಅವರದ್ದು. ಸಿನಿಮಾದಲ್ಲಿ ಹಿನ್ನೆಲೆ ಗಾಯನ ಮಾಡಿದವರು ಖ್ಯಾತ ಗಾಯಕಿ ಎಸ್​ ಜಾನಕಿ. ಎಂದೆಂದೂ ನಿನ್ನನು ಮರೆತು, ಬಾಡಿಹೋದ ಬಳ್ಳಯಿಂದ, ಎಂದು ನಿನ್ನ ನೋಡುವೆ ಇವುಗಳು ‘ಎರಡು ಕನಸು’ ಸಿನಿಮಾದ ಇತರ ಹಾಡುಗಳು.

ಇದನ್ನೂ ಓದಿ: ಕಣ್ಣಿಗೆ ಗಾಯವಾಗಿ ಆಪರೇಷನ್ ಆಗಿದ್ದ ನೋವಿನಲ್ಲೂ ಮೂರ್ತಿ ಕೆತ್ತನೆ ಮಾಡಿದ್ದ ಅರುಣ್: ಪತ್ನಿ ವಿಜೇತ ಮಾಹಿತಿ

ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಭಾವನಾತ್ಮಕವಾಗಿ ಹಾಡಿ ಯೂಟ್ಯೂಬ್​ನಲ್ಲಿ ಪ್ರಕಟಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ತಲೆದೂಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Tue, 16 January 24