ಬೆಂಗಳೂರು ಗ್ರಾಮಾಂತರದಲ್ಲಿ ಮೋದಿ ಮತಬೇಟೆ? ಮುಂದಿನ ವಾರ ರಾಮನಗರಕ್ಕೆ ಭೇಟಿ ಸಾಧ್ಯತೆ

| Updated By: Ganapathi Sharma

Updated on: Apr 10, 2024 | 9:25 AM

ರಾಮನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಭರ್ಜರಿ ಸಮಾವೇಶ ಆಯೋಜಿಸುವ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿಯ ಒಗ್ಗಟ್ಟಿನ ಸಂದೇಶ ಸಾರುವುದು ಉಭಯ ಪಕ್ಷಗಳ ನಾಯಕರ ಯೋಜನೆಯಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಉಭಯ ಪಕ್ಷಗಳ ನಾಯಕರ ವೇದಿಕೆ ಹಂಚಿಕೊಂಡು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಸ್ಪಷ್ಟ ಸಂದೇಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಬೆಂಗಳೂರು ಗ್ರಾಮಾಂತರದಲ್ಲಿ ಮೋದಿ ಮತಬೇಟೆ? ಮುಂದಿನ ವಾರ ರಾಮನಗರಕ್ಕೆ ಭೇಟಿ ಸಾಧ್ಯತೆ
ಪ್ರಧಾನಿ ನರೇಂದ್ರ ಮೋದಿ
Follow us on

ಬೆಂಗಳೂರು, ಏಪ್ರಿಲ್ 10: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಕರ್ನಾಟಕದಲ್ಲಿ ಪ್ರತಿಷ್ಠೆಯ ಕಣವಾಗಿ ಪರಿಣಮಿಸಿರುವ ಬೆಂಗಳೂರು ಗ್ರಾಮಾಂತರ (Bengaluru rural) ಕ್ಷೇತ್ರದಲ್ಲಿ ಕೇಂದ್ರ ಗ್ರಹ ಸಚಿವ ಅಮಿತ್ ಶಾ ಈಗಾಗಲೇ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಪರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅನ್ನು ಈ ಬಾರಿ ಶತಾಯಗತಾಯ ಸೋಲಿಸಲೇಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಪಣತೊಟ್ಟಿವೆ. ಇದೀಗ ಮಂಜುನಾಥ್ ಪರ ಪ್ರಧಾನಿ ನರೇಂದ್ರ ಮೋದಿ (Narendra Modi) ಕೂಡ ಮತಯಾಚನೆ ನಡೆಸುವ ಸಾಧ್ಯತೆ ಇದೆ.

ಏಪ್ರಿಲ್ 19 ಅಥವಾ 20ರಂದು ಪ್ರಧಾನಿ ನರೇಂದ್ರ ಮೋದಿ ರಾಮನಗರಕ್ಕೆ ಆಗಮಿಸಿ ಬೃಹತ್ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಇದೇ ಸಮಾವೇಶದಲ್ಲಿ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಕೂಡ ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವ ನೀರಿಕ್ಷೆ ಇದೆ.

ರಾಮನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ನಡೆಸುವ ಬಗ್ಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಕೋರ್ ಕಮಿಟಿ, ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಗೆ ಪ್ರಸ್ತಾವನೆ ಸಲ್ಲಿಸಿದೆ. ಇದರಂತೆ, ಸಮಾವೇಶ ರಾಮನಗರದಲ್ಲಿ ನಡೆಯುವುದು ಬಹುತೇಕ ಖಚಿತವಾಗಿದೆ.

ಮೈತ್ರಿ ಒಗ್ಗಟ್ಟು ಪ್ರದರ್ಶಿಸಲು ಚಿಂತನೆ

ರಾಮನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಭರ್ಜರಿ ಸಮಾವೇಶ ಆಯೋಜಿಸುವ ಮೂಲಕ ಬಿಜೆಪಿ ಜೆಡಿಎಸ್ ಮೈತ್ರಿಯ ಒಗ್ಗಟ್ಟಿನ ಸಂದೇಶ ಸಾರುವುದು ಉಭಯ ಪಕ್ಷಗಳ ನಾಯಕರ ಯೋಜನೆಯಾಗಿದೆ. ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಉಭಯ ಪಕ್ಷಗಳ ನಾಯಕರ ವೇದಿಕೆ ಹಂಚಿಕೊಂಡು ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಸ್ಪಷ್ಟ ಸಂದೇಶ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇದನ್ನೂ ಓದಿ: ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ನರೇಂದ್ರ ಮೋದಿ ಸಂವಾದ; ಪ್ರಚಾರ ತಂತ್ರಗಳೇಗಿರಬೇಕು ಎಂದು ತಿಳಿಸಿದ ಪ್ರಧಾನಿ

ಏಪ್ರಿಲ್ 14 ರಂದು ಮಂಗಳೂರು, ಬೆಂಗಳೂರಿಗೆ ಮೋದಿ

ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಮುಂದಿನ ಭಾನುವಾರ, ಏಪ್ರಿಲ್ 14 ರಂದು ಮಂಗಳೂರು ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ ಮಂಗಳೂರಿಗೆ ಭೇಟಿ ನೀಡಲಿರುವ ಮೋದಿ, ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ಮತಯಾಚನೆ ನಡೆಸಲಿದ್ದಾರೆ. ನಂತರ ಬೆಂಗಳೂರಿಗೆ ಬರಲಿರುವ ಅವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ರೋಡ್ ಶೋ ನಡೆಸಿ ಮತಯಾಚನೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:13 am, Wed, 10 April 24