AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ: ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಲಾಂಛನ ಅನಾವರಣ

ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಂಜೆ ಭೇಟಿಯಾದರು. ಇದೇ ವೇಳೆ ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಪ್ರಧಾನಿ ಅನಾವರಣಗೊಳಿಸಿದರು. ಈ ಕುರಿತು ಖುದ್ದು ಪ್ರಧಾನಿಯವರು ಎಕ್ಸ್ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ಮೋದಿ, ಉಡುಪಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ: ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಲಾಂಛನ ಅನಾವರಣ
ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಅನಾವರಣಗೊಳಿಸಿದ ಪ್ರಧಾನಿ ಮೋದಿImage Credit source: @narendramodi
ಗಣಪತಿ ಶರ್ಮಾ
|

Updated on:Sep 23, 2026 | 8:04 AM

Share

ನವದೆಹಲಿ, ಸೆಪ್ಟೆಂಬರ್ 23: ಉಡುಪಿಯ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಂಗಳವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾದರು. ಇದೇ ವೇಳೆ, ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ (ಜನ್ಮ ಶತಾಬ್ದ ಪಂಚವಾರ್ಷಿಕ ಯೋಜನೆ) ಆಚರಣೆಯ ಲಾಂಛನವನ್ನು ಅನಾವರಣಗೊಳಿಸಲಾಯಿತು. ಈ ಕುರಿತು ಸ್ವತಃ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.

‘ಉಡುಪಿಯ ಶ್ರೀ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಇತರ ಗಣ್ಯರನ್ನು ಭೇಟಿಯಾದೆ. ಪದ್ಮವಿಭೂಷಣ ಯತಿಕುಲ ಚಕ್ರವರ್ತಿ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಅನಾವರಣಗೊಳಿಸಲಾಯಿತು. ಭಕ್ತಿ, ಜ್ಞಾನ ಮತ್ತು ಸೇವೆಯಿಂದ ಕೂಡಿದ ಅವರ ಜೀವನವು ಅಸಂಖ್ಯಾತ ಜನರಿಗೆ ನಿರಂತರ ಸ್ಫೂರ್ತಿಯಾಗಿದೆ. ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಚಟುವಟಿಕೆಗಳು ಅವರ ಉದಾತ್ತ ಆದರ್ಶಗಳನ್ನು ಮತ್ತಷ್ಟು ಮುಂದಕ್ಕೆ ಕೊಂಡೊಯ್ಯಲಿವೆ’ ಎಂದು ಪ್ರಧಾನಿ ಮೋದಿ ಎಕ್ಸ್ ಸಂದೇಶದಲ್ಲಿ ತಿಳಿಸಿದ್ದಾರೆ.

Modi With Pejawar Seer

ಪ್ರಧಾನಿ ಮೋದಿಗೆ ಯಕ್ಷಗಾನ ಕಿರೀಟ ತೊಡಿಸಿ ಸ್ವಾಮೀಜಿಯವರಿಂದ ಗೌರವ

ಪ್ರಧಾನಿ ಮೋದಿ ಎಕ್ಸ್ ಸಂದೇಶ

ಈ ವಿಶೇಷ ಭೇಟಿಯ ಸಂದರ್ಭದಲ್ಲಿ ಅಖಿಲ ಭಾರತ ಮಾಧ್ವ ಮಹಾಮಂಡಲದ ಅಧ್ಯಕ್ಷ ಗೌತಮ್, ನವದೆಹಲಿ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಮಠದ ಸಾರ್ವಜನಿಕ ಸಂಪರ್ಕಾಧಿಕಾರಿ ವಾಸುದೇವ ಭಟ್ ಪೆರಂಪಳ್ಳಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಕುರಿತು…

ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ 32ನೇ ಪೀಠಾಧಿಪತಿಗಳಾಗಿದ್ದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಭಾರತದ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಾರ್ಗದರ್ಶಕರಾಗಿದ್ದವರು. ಸಮಾಜ ಸುಧಾರಣೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಶ್ರೀಗಳು ದಲಿತರ ಕೇರಿಗಳಿಗೆ ಭೇಟಿ ನೀಡಿ, ಅವರಿಗೆ ವೈಷ್ಣವ ದೀಕ್ಷೆ ನೀಡುವ ಮೂಲಕ ಸಮಾಜದ ತುಳಿತಕ್ಕೊಳಗಾದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದರು. ಕೇವಲ ಮಠದ ಪೂಜೆ-ಪುನಸ್ಕಾರಗಳಿಗೆ ಸೀಮಿತವಾಗದೆ, ಸಾಮಾಜಿಕ ಕಳಕಳಿ, ಶಿಕ್ಷಣ ಸಂಸ್ಥೆಗಳ ಸ್ಥಾಪನೆ, ನದಿಗಳ ಸ್ವಚ್ಛತೆ (ಗಂಗಾ ಅಭಿಯಾನ) ಹಾಗೂ ಗೋರಕ್ಷಣೆಯಂತಹ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಬಿಜೆಪಿ, ಪ್ರಧಾನಿ ಮೋದಿ ಜೊತೆ ಆಪ್ತ ನಂಟು ಹೊಂದಿದ್ದ ಶ್ರೀಗಳು

ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರು ಎಲ್.ಕೆ. ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ಸೇರಿದಂತೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಹಿರಿಯ ನಾಯಕರೊಂದಿಗೆ ಅತ್ಯಂತ ನಿಕಟ ಬಾಂಧವ್ಯ ಹೊಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 1992ರ ರಾಷ್ಟ್ರೀಯ ಏಕತಾ ಯಾತ್ರೆಯ ಕಾಲದಿಂದಲೂ ಆಪ್ತ ಸಂಬಂಧ ಕಾಯ್ದುಕೊಂಡಿದ್ದರು. ಶ್ರೀಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಮಾರ್ಗದರ್ಶಕರಂತೆ ಗೌರವಿಸುತ್ತಿದ್ದರು.

ಇದನ್ನೂ ಓದಿ: ಭಕ್ತರ ಒತ್ತಾಯಕ್ಕೆ ಉಯ್ಯಾಲೆಯಲ್ಲಿ ಕೂತು ಸಂತಸಪಟ್ಟ ಪೇಜಾವರ ಶ್ರೀಗಳು

ಅಯೋಧ್ಯೆಯ ರಾಮಜನ್ಮಭೂಮಿ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಪೇಜಾವರ ಶ್ರೀಗಳು, ವಿಶ್ವ ಹಿಂದೂ ಪರಿಷತ್‌ನ ಧರ್ಮ ಸಂಸದ್ ಮತ್ತು ರಾಮಜನ್ಮಭೂಮಿ ನ್ಯಾಸದ ಪ್ರಮುಖ ಟ್ರಸ್ಟಿಯಾಗಿ ಸಕ್ರಿಯ ಪಾತ್ರ ವಹಿಸಿದ್ದರು. ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಬೇಕೆಂಬುದು ಜೀವನದ ಮಹದಾಸೆ ಎಂದು ಅವರೇ ಹೇಳಿಕೊಂಡಿದ್ದರು. ಇದೀಗ ಶ್ರೀಗಳ ಜನ್ಮ ಶತಮಾನೋತ್ಸವ ಆಚರಣೆಯ ಲಾಂಛನವನ್ನು ಪ್ರಧಾನಿ ಅನಾವರಣಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Wed, 23 September 26

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ