ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು, ಜೂನ್ 29: ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ (Narendra Modi) ಜೊತೆ ಕಾಂಗ್ರೆಸ್ ನಾಯಕರು ಸುಮಾರು 40 ನಿಮಿಷ ಮಾತನಾಡಿದ್ದು, ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಮನವಿ ಮಾಡಿದ್ದಾರೆ. ಭೇಟಿ ಬಳಿಕ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇವೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾವು ಹೆಚ್ಚು ತೆರಿಗೆ ನೀಡುತ್ತೇವೆ ಎಂದು ವಿವರಣೆ ನೀಡಿದ್ದೇವೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
Had a meeting with Hon’ble Prime Minister Shri @narendramodi in Delhi today. We discussed various important issues related to Karnataka’s development and progress. Looking forward to collaborative efforts for the betterment of our state. pic.twitter.com/EyurIqTFTj
— Siddaramaiah (@siddaramaiah) June 29, 2024
ನಮಗೆ ಒಂದು ಗಿಫ್ಟ್ ಸಿಟಿ ಬೇಕೆಂದು ಪ್ರಧಾನಿಗೆ ಬೇಡಿಕೆ ಇಟ್ಟಿದ್ದೇವೆ. ಗುಜರಾತ್ನಲ್ಲಿ ಇರುವಂತೆ ಗಿಫ್ಟ್ ಸಿಟಿ ನಮಗೂ ಬೇಕೆಂದು ಬೇಡಿಕೆ ಇಡಲಾಗಿದೆ. ದೇಶದಲ್ಲಿ ಒಂದೇ ಕಡೆ ಗಿಫ್ಟ್ ಸಿಟಿ ಕೊಡೋಕೆ ಸಾಧ್ಯವೆಂದು ಹೇಳಿದ್ದಾರೆ. ಆದರೂ ಪರಿಶೀಲನೆ ಮಾಡುತ್ತೇವೆಂದು ಮೋದಿ ಹೇಳಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ
ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ ಬಳಿಕ ಟ್ವೀಟ್ ಮಾಡಿದ್ದು, ಕರ್ನಾಟಕದ ಅಭಿವೃದ್ಧಿಯ ಪ್ರಮುಖ ಬೇಡಿಕೆಗಳು ಮತ್ತು ಆದ್ಯತೆಗಳ ಪ್ರಸ್ತಾವನೆ ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದೇವೆ. ನಮ್ಮ ರಾಜ್ಯದ ಪ್ರಗತಿಯನ್ನು ಮುನ್ನಡೆಸಲು ಸಕಾರಾತ್ಮಕ ಸಹಯೋಗವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:53 pm, Sat, 29 June 24