ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್​, ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ
ಪ್ರಧಾನಿ ಮೋದಿ ಭೇಟಿ ಮಾಡಿದ ಸಿದ್ದರಾಮಯ್ಯ: ಮಹದಾಯಿ, ಬೆಂಗಳೂರು ಅಭಿವೃದ್ಧಿ ಸೇರಿ ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ
Edited By:

Updated on: Jun 29, 2024 | 10:06 PM

ಬೆಂಗಳೂರು, ಜೂನ್​ 29: ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ (Narendra Modi) ಜೊತೆ ಕಾಂಗ್ರೆಸ್​ ನಾಯಕರು ಸುಮಾರು 40 ನಿಮಿಷ ಮಾತನಾಡಿದ್ದು, ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಮನವಿ ಮಾಡಿದ್ದಾರೆ. ಭೇಟಿ ಬಳಿಕ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇವೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾವು ಹೆಚ್ಚು ತೆರಿಗೆ ನೀಡುತ್ತೇವೆ ಎಂದು ವಿವರಣೆ ನೀಡಿದ್ದೇವೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ನಮಗೆ ಒಂದು ಗಿಫ್ಟ್ ಸಿಟಿ ಬೇಕೆಂದು ಪ್ರಧಾನಿಗೆ ಬೇಡಿಕೆ ಇಟ್ಟಿದ್ದೇವೆ. ಗುಜರಾತ್​ನಲ್ಲಿ ಇರುವಂತೆ ಗಿಫ್ಟ್ ಸಿಟಿ ನಮಗೂ ಬೇಕೆಂದು ಬೇಡಿಕೆ ಇಡಲಾಗಿದೆ. ದೇಶದಲ್ಲಿ ಒಂದೇ ಕಡೆ ಗಿಫ್ಟ್ ಸಿಟಿ ಕೊಡೋಕೆ ಸಾಧ್ಯವೆಂದು ಹೇಳಿದ್ದಾರೆ. ಆದರೂ ಪರಿಶೀಲನೆ ಮಾಡುತ್ತೇವೆಂದು ಮೋದಿ ಹೇಳಿರುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ಭೇಟಿ ಬಳಿಕ ಟ್ವೀಟ್​ ಮಾಡಿದ್ದು, ಕರ್ನಾಟಕದ ಅಭಿವೃದ್ಧಿಯ ಪ್ರಮುಖ ಬೇಡಿಕೆಗಳು ಮತ್ತು ಆದ್ಯತೆಗಳ ಪ್ರಸ್ತಾವನೆ ಪ್ರಧಾನಿ ಮೋದಿ ಅವರಿಗೆ ಸಲ್ಲಿಸಿದ್ದೇವೆ. ನಮ್ಮ ರಾಜ್ಯದ ಪ್ರಗತಿಯನ್ನು ಮುನ್ನಡೆಸಲು ಸಕಾರಾತ್ಮಕ ಸಹಯೋಗವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:53 pm, Sat, 29 June 24

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us