AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರ ಮನ್​​ ಕೀ ಬಾತ್​​​ನಲ್ಲಿ ಮೆಚ್ಚುಗೆ ಪಡೆದ ಬೆಂಗಳೂರಿನ ನಿಂಗಮ್ಮ ಯಾರು?

ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಇಂದು (ಆಗಸ್ಟ್ 30) ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 137ನೇ ಸಂಚಿಕೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿ, ಭಾರತೀಯರ ನವೀನ ಆಲೋಚನೆಗಳು, ಇತಿಹಾಸದ ಡಿಜಿಟಲೀಕರಣ, ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣ, ಮಹಿಳಾ ಸಬಲೀಕರಣ ಹಾಗೂ ನವೋದ್ಯಮ ಕೃಷಿಯ ಯಶೋಗಾಥೆಗಳನ್ನು ಹಂಚಿಕೊಂಡರು. ಇದೇ ವೇಳೆ ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಬಲ ನೀಡುವ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ನಿಂಗಮ್ಮ ಅವರ ಸಾಧನೆಯನ್ನು ಪ್ರಧಾನಿ ಉಲ್ಲೇಖಿಸಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ, ಯಾರು ಈ ನಿಂಗಮ್ಮ? ಏನು ಕೆಲಸ ಮಾಡುತ್ತಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಪ್ರಧಾನಿ ಮೋದಿಯವರ ಮನ್​​ ಕೀ ಬಾತ್​​​ನಲ್ಲಿ ಮೆಚ್ಚುಗೆ ಪಡೆದ ಬೆಂಗಳೂರಿನ ನಿಂಗಮ್ಮ ಯಾರು?
Ningamma And Pm Modi
ರಮೇಶ್ ಬಿ. ಜವಳಗೇರಾ
|

Updated on:Aug 30, 2026 | 3:19 PM

Share

ನವದೆಹಲಿ/ಬೆಂಗಳೂರು, (ಆಗಸ್ಟ್​ 30): ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಆಗಸ್ಟ್ 30) ತಮ್ಮ 137ನೇ ಮನ್ ಕಿ ಬಾತ್  (137th Mann Ki Baat) ಕಾರ್ಯಕ್ರಮದಲ್ಲಿ ಭಾರತದ ಪ್ರಗತಿಯ ವಿವಿಧ ಮುಖಗಳನ್ನು ಅನಾವರಣಗೊಳಿಸಿದ್ದಾರೆ. ಅದರಲ್ಲೂ ಪ್ರಮುಖವಾಗಿ ಪಿಎಂ ಸ್ವನಿಧಿ ಯೋಜನೆಯಡಿ ಬೆಂಗಳೂರಿನ ನಿಂಗಮ್ಮ (Bengaluru’s Ningamma )ಅವರ ಸಬಲೀಕರಣ ಬಗ್ಗೆ ಉಲ್ಲೇಖಿಸಿ ಪ್ರಶಂಸಿಸಿದ್ದಾರೆ. ಹೌದು…ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಬಲ ನೀಡುವ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ನಿಂಗಮ್ಮ ಅವರ ಸಾಧನೆಯನ್ನು ಪ್ರಧಾನಿ ಉಲ್ಲೇಖಿಸಿದ್ದಾರೆ. ಜತೆಗೆ ತಾನು ದುಡಿದಿರುವ ಹಣದಲ್ಲಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಾಗಿದ್ದಾರೆ. ಈ ಯೋಜನೆಯ ಒಟ್ಟು ಫಲಾನುಭವಿಗಳಲ್ಲಿ ಸುಮಾರು ಶೇಕಡಾ 46 ರಷ್ಟು ಮಹಿಳೆಯರಿದ್ದು, ಮಹಿಳಾ ಸಬಲೀಕರಣಕ್ಕೆ ಇದು ದೊಡ್ಡ ಸಾಕ್ಷಿ ಎಂದು ಪ್ರಧಾನಿ ಮೋದಿ, ಬೆಂಗಳೂರಿನ ನಿಂಗಮ್ಮನವರ ಸ್ವಾವಲಂಬಿ ಬದುಕನ್ನು ಉದಾಹರಣೆಯಾಗಿ ನೀಡಿದ್ದಾರೆ.

ಯಾರು ಈ ನಿಂಗಮ್ಮ? ಏನು ಮಾಡ್ತಾರೆ?

ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ಬಲ ನೀಡುವ ‘ಪಿಎಂ ಸ್ವನಿಧಿ’ ಯೋಜನೆಯಡಿ ಯಶಸ್ವಿಯಾಗಿ ಸದುಉಪಯೋಗ ಮಾಡಿಕೊಂಡಿರುವ ಬೆಂಗಳೂರಿನ ನಿಂಗಮ್ಮ ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ ಬೆಂಗಳೂರಿನ ನಿಂಗಮ್ಮ ಯಾರು ಎನ್ನುವುದನ್ನು ನೋಡುವುದಾದರೆ, ಹಾಸನ ಮೂಲದ ನಿಂಗಮ್ಮ ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಯಾಗಿದ್ದು, ಕೇಂದ್ರ ಸರ್ಕಾರದ ಸ್ವಾನಿಧಿ ಯೋಜನೆ ಉಪಯೋಗದೊಂದಿಗೆ ಮಾಗಡಿ ರಸ್ತೆಯ ಹೊಸಹಳ್ಳಿ ಮೇಟ್ರೋ ನಿಲ್ದಾಣ ಬಳಿ ಬೀದಿಬದಿ ಹೋಟೆಲ್ ನಡೆಸಿ ಜೀವನ ಸಾಗಿಸುತ್ತಿದ್ದಾರೆ. ಇದರಿಂದ ಬರುವ ಲಾಭದಿಂದ ತಮ್ಮ ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ ಕೊಡಿಸುತ್ತಿದ್ದಾರೆ.

ಇದನ್ನೂ ಓದಿ: Mann Ki Baat: ಬೆಂಗಳೂರಿನ ನಿಂಗಮ್ಮನ ಸ್ವಾವಲಂಬನೆ, ಚಿಕ್ಕಮಗಳೂರಿನ ಅವಕಾಡೊ, ಭಾರತರಾಜ್ಯ ಪೋರ್ಟಲ್‌ಗೆ ಪ್ರಧಾನಿ ಮೆಚ್ಚುಗೆ

ಏನಿದು ಕೇಂದ್ರ ಸ್ವಾನಿಧಿ ಯೋಜನೆ?

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಈ ಸ್ವಾನಿಧಿ ಯೋಜನೆಯನ್ನು ಜಾರಿಗೆ ತರಲಾಗಿದ್ದು. ಯಾವುದೇ ತೊಂದರೆ ಇಲ್ಲದೆ ಮಹಿಳೆಯರು, ಕೇಂದ್ರ ಸರ್ಕಾರದ ಸ್ವಾನಿಧಿ ಯೋಜನೆಯಡಿಯಲ್ಲಿ ನೀಡಲಾಗುವ ಕಡಿಮೆ ಬಡ್ಡಿಯಲ್ಲಿ ಲೋನ್ ಪಡೆದುಕೊಂಡು ಸಂತ್ವ ವ್ಯಾಪಾರ ಮಾಡಬಹುದು. ಅದರಂತೆ ನಿಂಗಮ್ಮ ಸಹ ಕಡಿಮೆ ಬಡ್ಡಿಯಲ್ಲಿ ಸ್ವಾನಿಧಿ ಯೋಜನೆ ಅಡಿ 50 ಸಾವಿರ ಲೋನ್ ಪಡೆದುಕೊಂಡು ಬೆಂಗಳೂರಿನ ಮಾಗಡಿ ರಸ್ತೆಯ ಹೊಸಹಳ್ಳಿ ಮೇಟ್ರೋ ನಿಲ್ದಾಣ ಬಳಿ ಬೀದಿಬದಿ ಹೋಟೆಲ್ ನಡೆಸುತ್ತಿದ್ದಾರೆ. ಈ ಹೋಟೆಲ್​​​ನಿಂದ ಬರುವ ಲಾಭದಿಂದಲೇ ಜೀವನ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಿಂಗಮ್ಮಳ ಸ್ವಾಲಂಬಿ ಬದುಕನ್ನು ತಮ್ಮ ಮನ್​​ ಕೀ ಬಾತ್​​​ನಲ್ಲಿ ಉದಾಹರಣೆಯಾಗಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Sun, 30 August 26

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ