’ಬೆಂಗಳೂರು ಟೆಕ್ ಸಮ್ಮಿಟ್ 2020’ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ […]

ಬೆಂಗಳೂರು: ’ಬೆಂಗಳೂರು ಟೆಕ್ ಸಮ್ಮಿಟ್ 2020’ನ್ನು ಪ್ರಧಾನಿ ನರೇಂದ್ರ ಮೋದಿ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ನವಂಬರ್ 19ರಿಂದ 21ರವರೆಗೆ, ಮೂರು ದಿನಗಳ ಕಾಲ ನಡೆಯಲಿರುವ ಈ ಶೃಂಗಸಭೆ, 19ನೇ ತಾರೀಕಿನಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಕರ್ನಾಟಕ ಇನ್ನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ವಿಷನ್ ಗ್ರೂಪ್, ಬಯೋಟೆಕ್ನಾಲಜಿ ಮತ್ತು ಸ್ಟಾರ್ಟಪ್ ಸಂಸ್ಥೆ, ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (STPI), ಎಮ್.ಎಮ್. ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಶೃಂಗಸಭೆಯನ್ನು ಆಯೋಜಿಸಲಿದೆ.
ಬೆಂಗಳೂರು ಟೆಕ್ ಸಮ್ಮಿಟ್ 2020ರಲ್ಲಿ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಎಚ್.ಇ. ಸ್ಕಾಟ್ ಮಾರಿಸನ್, ಸ್ವಿಸ್ ಕಾನ್ಫೆಡರೇಷನ್ ಉಪಾಧ್ಯಕ್ಷ ಎಚ್.ಇ. ಗೈ ಪರ್ಮೆಲಿನ್ ಮತ್ತಿತರ ಅಂತಾರಾಷ್ಟ್ರೀಯ ಅತಿಥಿಗಳು ಭಾಗವಹಿಸಲಿದ್ದಾರೆ. ದೇಶ ವಿದೇಶದ ಚಿಂತಕರು, ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ಹೂಡಿಕೆದಾರರು, ನೀತಿ ನಿರೂಪಕರು, ಶಿಕ್ಷಣ ತಜ್ಞರು ಕೂಡ ಸಮ್ಮಿಟ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಬಾರಿಯ ಶೃಂಗಸಭೆಯ ವಿಷಯ ’ನೆಕ್ಸ್ಟ್ ಇಸ್ ನೌ’ ಎಂದಾಗಿದ್ದು, ಕೊರೊನೋತ್ತರ ಪ್ರಪಂಚದ ಸವಾಲುಗಳ ಕುರಿತು ಚರ್ಚೆಯಾಗಲಿದೆ. ’ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್’ ಹಾಗೂ ’ಬಯೋಟೆಕ್ನಾಲಜಿ’ ವಿಭಾಗದ ಪ್ರಮುಖ ತಂತ್ರಜ್ಞಾನಗಳು ಮತ್ತು ಹೊಸತನಗಳು ಶೃಂಗಸಭೆಯ ಮುಖ್ಯ ಅಂಶಗಳಾಗಿ ಇರಲಿವೆ.