ಜ.19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ಕೊಟ್ಟ DC

PM VISIT: ಜಿಲ್ಲೆಗೆ ಜನವರಿ 19ಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು ಯಾವುದೇ ತೊಂದರೆಯಾಗದಂತೆ ಕಾರ್ಯಕ್ರಮವನ್ನ ನಡೆಸುವ ಕುರಿತು ಇಂದು(ಜ.10) ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಜ.19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನು ಕೊಟ್ಟ DC
ಪ್ರಧಾನ ಮಂತ್ರಿ ನರೇಂದ್ರ ಮೋದಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 10, 2023 | 8:06 PM

ಕಲಬುರಗಿ: ಜಿಲ್ಲೆಯಲ್ಲಿ ಐತಿಹಾಸಿಕ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ಕಲಬುರಗಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು(ಜ.10) ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದರು.

ಸೇಡಂ ತಾಲೂಕಿನ ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಪ್ರಧಾನ ಮಂತ್ರಿಗಳು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ್​, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್​ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಸುಗಮ ನಿರ್ವಹಣೆ ಮತ್ತು ಯಶಸ್ಸಿಗೆ ವಿವಿಧ 10ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನ ಚಾಚುತಪ್ಪದೆ ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿರಬೇಕು ಎಂದು ಅಧಿಕಾರಿಗಳಿಗೆ ಡಿ.ಸಿ. ಯಶವಂತ ವಿ. ಗುರುಕರ್ ಖಡಕ್ ಸೂಚನೆ ನೀಡಿದರು.

ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನ ಇರಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾವುದೇ ಲೋಪಕ್ಕೆ ಇಲ್ಲಿ ಅವಕಾಶವಿಲ್ಲದೆ ಸಣ್ಣ-ಪುಟ್ಟ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರಬೇಕು. ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,500 ಸಾರಿಗೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆ.ಕೆ.ಅರ್.ಟಿ.ಸಿ. ಸಂಸ್ಥೆಯ ಎಂ.ಡಿ. ರಾಚಪ್ಪ ಅವರಿಗೆ ತಿಳಿಸಿದರು. ಇನ್ನು ಮಳಖೇಡ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮುಂಜಾಗ್ರತವಾಗಿ ಸಿ.ಎಚ್.ಸಿ. ಕೇಂದ್ರಕ್ಕೆ ಬೇಕಾಗುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಡಿ.ಎಚ್.ಓ ಅವರಿಗೆ ಡಿ.ಸಿ. ನಿರ್ದೇಶನ ನೀಡಿದರು.

ಇದನ್ನೂ ಓದಿ:Nationl Youth Fest: ಯುವಜನೋತ್ಸವ ಅತಿಥಿಗಳಿಗೆ ನೋಂದಣಿ ಕಿಟ್; ಪ್ರಧಾನಿ ಮೋದಿಗಾಗಿ ತಯಾರಾಗಿದೆ ವಿಶೇಷ ರಾಷ್ಟ್ರ ಧ್ವಜ

ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಹೋಗುವಂತಿಲ್ಲ

ಪ್ರಧಾನಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಜನವರಿ 20ರವರೆಗೆ ಜಿಲ್ಲೆಯ ಯಾವುದೇ ಅಧಿಕಾರಿ-ಸಿಬ್ಬಂದಿಗಳು ಕೇಂದ್ರಸ್ಥಾನ ಬಿಡುವಂತಿಲ್ಲ. ಅಲ್ಲದೇ ಪ್ರತಿ ಕಚೇರಿಯಲ್ಲಿ ಶೇ.100ರ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಬೇಕು. ಕೇಂದ್ರಸ್ಥಾನ ಬಿಡಬೇಕಾದಲ್ಲಿ ತಮ್ಮ ಅನುಮತಿ ಪಡೆಯಬೇಕು. ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ಅನಿವಾರ್ಯ ಎಂದು ಡಿ.ಸಿ. ಯಶವಂತ ವಿ. ಗುರುಕರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ ಮಾಡಿ

ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ
ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ