ಮಾ. 16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ, 18ರಂದು ಶಿವಮೊಗ್ಗದಲ್ಲಿ ಸಮಾವೇಶ: ಶಾಸಕ ವಿ ಸುನೀಲ್ ಕುಮಾರ್

ಮಾ.16 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ಇಂದು ರಾತ್ರಿ ಅಥವಾ ನಾಳೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ ಎಂದು ಹೇಳಿದ್ದಾರೆ.

ಮಾ. 16ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ, 18ರಂದು ಶಿವಮೊಗ್ಗದಲ್ಲಿ ಸಮಾವೇಶ: ಶಾಸಕ ವಿ ಸುನೀಲ್ ಕುಮಾರ್
ಪ್ರಧಾನಿ ಮೋದಿ, ಶಾಸಕ ವಿ.ಸುನೀಲ್ ಕುಮಾರ್
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 13, 2024 | 6:08 PM

ಬೆಂಗಳೂರು, ಮಾರ್ಚ್​​ 13: ರಾಜ್ಯ ರಾಜಕಾರಣದಲ್ಲಿ ಇದೀಗ ಲೋಕಸಭಾ ಚುನಾವಣೆಯ ಕೆಲಸಗಳು ಆರಂಭಗೊಂಡಿವೆ. ಪ್ರತಿಯೊಂದು ಪಕ್ಷಗಳು ಚುನಾವಣಾ ಗೆಲುವಿಗೆ ಸಾಕಷ್ಟು ಕಸರತ್ತು ನಡೆಸಿವೆ. ಈ ಮಧ್ಯೆ  ಮಾ.16 ರಂದು ಮಧ್ಯಾಹ್ನ 2 ಗಂಟೆಗೆ ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮಿಸುತ್ತಿದ್ದಾರೆ. ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಸಮಾವೇಶದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ (V Sunil Kumar) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ಸಭೆಗೆ 2 ಲಕ್ಷಕ್ಕಿಂತ ಹೆಚ್ಚು ಜನ ಸೇರಿಸಲು ಸಿದ್ಧತೆ ಮಾಡುತ್ತಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲೂ ರಾಷ್ಟ್ರೀಯ ನಾಯಕರು ಪ್ರವಾಸ ಮಾಡಲಿದ್ದಾರೆ ಎಂದಿದ್ದಾರೆ.

ಶೀಘ್ರವೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ಇಂದು ರಾತ್ರಿ ಅಥವಾ ನಾಳೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಆಗುತ್ತೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್ ಆಗಿ​ ಮಾಡಲಾಗಿದ್ದು, 8 ಕ್ಲಸ್ಟರ್​ಗಳಿಗೆ ರಾಷ್ಟ್ರೀಯ ನಾಯಕರ ಪ್ರವಾಸ ಮುಕ್ತಾಯವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಸದಾನಂದಗೌಡಗೆ ಕರೆ ಮಾಡಿ ಬಿಗ್‌ ಶಾಕ್ ಕೊಟ್ಟ ಅಮಿತ್ ಶಾ, ಕುತೂಹಲ ಮೂಡಿಸಿದ ಡಿವಿಎಸ್ ನಡೆ!

ಬಿಜೆಪಿ ಟಿಕೆಟ್ ಅನೌನ್ಸ್ ಆಗೋದಕ್ಕೆ ಕೌಂಟ್​ಡೌನ್ ಸ್ಟಾರ್ಟ್ ಆಗಿದೆ. ಯಾವುದೇ ಕ್ಷಣದಲ್ಲಾದ್ರೂ ಟಿಕೆಟ್ ಘೋಷಣೆ ಆಗಲಿದೆ. ಅದ್ರಲ್ಲೂ, ಕರ್ನಾಟಕದ ಅಭ್ಯರ್ಥಿಗಳ ಹೆಸರು ಘೋಷಣೆ ಆಗಲಿದ್ದು, ಇಡೀ ರಾಜ್ಯ ಬಿಜೆಪಿ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಮೂಲಗಳ ಪ್ರಕಾರ ಕರ್ನಾಟಕದ 15 ರಿಂದ 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಅನ್ಯಾಯದ ವಿರುದ್ಧ ಧ್ವನಿಯೆತ್ತದೆ ಶೋಭಾ ಕರಂದ್ಲಾಜೆ ರಾಜ್ಯದ ಜನತೆಗೆ ದ್ರೋಹವೆಸಗಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಡಿ.ವಿ.ಸದಾನಂದ ಗೌಡಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ಬಾರಿ ಅಭ್ಯರ್ಥಿ ಬದಲಾವಣೆ ಮಾಡುವ ಬಗ್ಗೆ ಡಿವಿಎಸ್​ಗೆ ಹೈಕಮಾಂಡ್ ದೂರವಾಣಿ ‌ಮೂಲಕ ಮಾಹಿತಿ ರವಾನೆ ಮಾಡಿದೆ.

ಕೆ.ಎಸ್​.ಈಶ್ವರಪ್ಪ ಪುತ್ರ ಕಾಂತೇಶ್​ಗೆ ಲೋಕಸಭೆ ಟಿಕೆಟ್ ಕೈ ತಪ್ಪೋ ಆತಂಕದಲ್ಲಿ ವರಿಷ್ಠರ ವಿರುದ್ಧ ಅಸಮಾಧಾನಗೊಂಡಂತಿದೆ. ಹೀಗಾಗಿ ಆಪ್ತರು, ಬೆಂಬಲಿಗರ ಜೊತೆ ಶಿವಮೊಗ್ಗದಲ್ಲಿ ಶುಕ್ರವಾರ ಸಂಜೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿಲುವು ಪ್ರಕಟಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್