AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ: ಲೋಕಸಭೆ ಟಿಕೆಟ್ ಹಂಚಿಕೆ ಚರ್ಚೆ

ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ.

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ: ಲೋಕಸಭೆ ಟಿಕೆಟ್ ಹಂಚಿಕೆ ಚರ್ಚೆ
ಜೆಡಿಎಸ್ ನಿಯೋಗವು ಗುರುವಾರ ಪ್ರಧಾನಿ ನರೇಂದ್ರ ಮೋದಿnಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತುImage Credit source: X
TV9 Web
| Updated By: Ganapathi Sharma|

Updated on:Dec 21, 2023 | 1:06 PM

Share

ನವದೆಹಲಿ, ಡಿಸೆಂಬರ್ 21: ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda), ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಹಾಗೂ ಶಾಸಕ ಹೆಚ್​ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು (JDS Deligation) ಗುರುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿದ್ದು, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಹೇಳಿಕೊಂಡಿದ್ದಾರೆ.

‘ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ. ಜತೆಗೆ, ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ ಅವರೂ ಇದ್ದರು. ದೇಶದ ಪ್ರಗತಿಗೆ ದೇವೇಗೌಡರ ಅನುಸರಣೀಯ ಕೊಡುಗೆಯನ್ನು ಭಾರತವು ಬಹುವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ ವಿಷಯಗಳ ಕುರಿತು ಅವರ ಆಲೋಚನೆಗಳು ಒಳನೋಟವುಳ್ಳವು ಮತ್ತು ಭವಿಷ್ಯದ ದೃಷ್ಟಿಕೋನ ಹೊಂದಿದವುಗಳಾಗಿವೆ’ ಎಂದು ಮೋದಿ ಎಕ್ಸ್​ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಗೊಂದಲವಿಲ್ಲ: ಕುಮಾರಸ್ವಾಮಿ

ದೇಶದ ಪ್ರಧಾನಿಯವರನ್ನು ನಾನು ದೇವೇಗೌಡರು, ರೇವಣ್ಣ ಇತರ ಶಾಸಕರು ಭೇಟಿಯಾಗಿದ್ದೇವೆ. ನಾನು ಮತ್ತು ದೇವೇಗೌಡರು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ. ಸೀಟು ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಮೋದಿ ಭೇಟಿ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ವಿಶೇಷವಾಗಿ ದೇವೇಗೌಡರ ಬಗ್ಗೆ ಮೋದಿಯವರು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಗೌರವ ಕೊಡುವುದನ್ನು ಅನೇಕ ಬಾರಿ ಕಂಡಿದ್ದೇನೆ. ನಮ್ಮ ಕುಟುಂಬದ ಬಗ್ಗೆ ಪ್ರಧಾನಿ ವಿಶ್ವಾಸ ಇಟ್ಟಿದ್ದಾರೆ. ಅದರಲ್ಲಿ ಕುಂದುಂಟಾಗಿಲ್ಲ. ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ: ಕುಮಾರಸ್ವಾಮಿ ಹಿಂದೆಯೇ ದೆಹಲಿಗೆ ಹಾರಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಕಾಡುಗೊಲ್ಲ ಸಮುದಾಯಕ್ಕೆ ಎಸ್​​ಟಿ ಮೀಸಲಾತಿಗಾಗಿ ಮನವಿ ಮಾಡಿದ್ದೇವೆ. ರಾಜ್ಯದ ನೀರಾವರಿ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಪ್ರಧಾನಿಯವರ ಗಮನ ಸೆಳೆದಿದ್ದೇವೆ. ಕೊಬ್ಬರಿ ಬೆಂಬಲಬೆಲೆ ಹೆಚ್ಚಿಸುವಂತೆ ಮನವಿ ಮಾಡಿದ್ದೇವೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:58 pm, Thu, 21 December 23

ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ