ಮಂಗಳೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ರೋಡ್ ಶೊ: ಪೊಲೀಸ್ ಇಲಾಖೆ ಹೈ ಅಲರ್ಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Apr 14, 2024 | 3:13 PM

ಇಂದು ಕಡಲನಗರಿ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೀಗಾಗಿ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಇರಲಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಮಂಗಳೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ಮೋದಿ ರೋಡ್ ಶೊ: ಪೊಲೀಸ್ ಇಲಾಖೆ ಹೈ ಅಲರ್ಟ್
ಪೊಲೀಸ್ ಸಿಬ್ಬಂದಿ ನಿಯೋಜನೆ
Follow us on

ಮಂಗಳೂರು, ಏಪ್ರಿಲ್​ 14: ಇಂದು ಕಡಲನಗರಿ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರೋಡ್ ಶೋ ನಡೆಸಲಿದ್ದಾರೆ. ಮೈಸೂರು ಸಮಾವೇಶ ಮುಗಿಸಿ ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಜೆ 6.40 ಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ರೋಡ್ ಶೋಗೆ ಸಕಲ ಸಿದ್ಧತೆ ಮಾಡಕೊಳ್ಳಲಾಗಿದೆ. ಇನ್ನು ಮೋದಿ ಆಗಮನ ಹಿನ್ನಲೆ ಮಂಗಳೂರು ಪೊಲೀಸ್ ಇಲಾಖೆ ಹೈ ಅಲರ್ಟ್ ಆಗಿದ್ದು, ಏರ್​ಪೋರ್ಟ್​​​ನಿಂದ ರೋಡ್ ಶೋ ಮುಕ್ತಾಯವಾಗುವ ಪ್ರದೇಶದವರೆಗೂ ಬಿಗಿ ಭದ್ರತೆ ಒದಗಿಸಲಾಗಿದೆ.

ಈ ಕುರಿತಾಗಿ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್​ ಪ್ರತಿಕ್ರಿಯಿಸಿದ್ದು, ವಿಮಾನ ನಿಲ್ದಾಣದಿಂದ ಲೇಡಿಹಿಲ್​​ವರೆಗೂ ವಿಶೇಷ ಭದ್ರತೆ ಒದಗಿಸಲಾಗಿದ್ದು, ಸುಮಾರು 2500 ಸಾವಿರ ಪೊಲೀಸ್ ಸಿಬ್ಬಂದಿ, 10 ಜನ ಎಸ್ಪಿ ಹಾಗೂ ಹೆಚ್ಚುವರಿ ಎಸ್ಪಿ ರಾಂಕ್ ಅಧಿಕಾರಿಗಳು, 250 ಡಿವೈಎಸ್ಪಿ ಮತ್ತು ಪಿಎಸ್​ಐ ರಾಂಕ್ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಮೋದಿ ರೋಡ್​ ಶೋ: ಈ ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್ ನಿಷೇಧ, ಮಾರ್ಗ ಬದಲಾವಣೆ ಇಲ್ಲಿದೆ

ವಾಹನ ಸಂಚಾರ, ಪಾರ್ಕಿಂಗ್ ಸೇರಿದಂತೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ರೋಡ್ ಶೊ ಆರಂಭವಾಗುವ ಎರಡು ಗಂಟೆ ಮುನ್ನ ನಿಬಂಧನೆಗಳು ಜಾರಿಯಾಗಲಿವೆ. ರೋಡ್ ಶೊ ಸುತ್ತಮುತ್ತದ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ನಿಷೇಧಿಸಲಾಗಿದ್ದು, 3 ದಿನದಿಂದ ಭದ್ರತೆಯ ದೃಷ್ಟಿಕೋನದಲ್ಲಿ ನಿರಂತರ ಡ್ರೋನ್ ಸರ್ವೇ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮೋದಿ ರೋಡ್ ಶೋ

ಮೈಸೂರಿನ ಸಮಾವೇಶದ ಬಳಿಕ ಮೋದಿ ಮಂಗಳೂರಿಗೆ ಆಗಮಿಸುವ ಪ್ರಧಾನಿ ಮೋದಿ, ಅಲ್ಲಿಂದ 7 ಗಂಟೆಗೆ ನಾರಾಯಣಗುರು ವೃತ್ತಕ್ಕೆ ಆಗಮಿಸಿ ಅಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರೋಡ್ ಶೋ ಆರಂಭಿಸುತ್ತಾರೆ. ಮಹಾನಗರ ಪಾಲಿಕೆ ಮುಂಭಾಗದಿಂದ ಬಲ್ಲಾಳ ಬಾಗ್, ಎಂ.ಜಿ.ರಸ್ತೆಯಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ರಾಷ್ಟ್ರಕವಿ ಗೋವಿಂದ ಪೈ ಸರ್ಕಲ್​​ನಲ್ಲಿ ರಾತ್ರಿ 8 ಗಂಟೆಗೆ ರೋಡ್ ಶೋ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: NDA ಅಭ್ಯರ್ಥಿಗಳ ಪರ ಮತಯಾಚನೆ

ರೋಡ್ ಶೋನಲ್ಲಿ ಮೋದಿ ಜತೆ ಇಬ್ಬರು ಅಭ್ಯರ್ಥಿಗಳು ಮಾತ್ರ ಭಾಗಿ ಆಗಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಭಾಗಿಯಾಗಲಿದ್ದಾರೆ. ಕಟೀಲು ಹೆಸರನ್ನೂ ಸಹ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಳುಹಿಸಿತ್ತು. ಆದರೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಮಾತ್ರ ಪಿಎಂ ಕಚೇರಿ ಅಂತಿಮಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.