AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ

ಕರ್ನಾಟಕದ ಎಲ್ಲ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಮತ್ತು ಮೋದಿ ಭಾಷಣದ, ಅವರು ನೀಡುವ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದೊಂದಿಗೆ ಈ ಎಕ್ಸ್​ ಖಾತೆ ಆರಂಭಿಸಲಾಗಿದೆ. ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಎಕ್ಸ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರತ್ಯೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ
ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪ್ರತ್ಯತೇಕ ಕನ್ನಡ ಖಾತೆ ಆರಂಭಿಸಿದ ಪ್ರಧಾನಿ ಮೋದಿ
Ganapathi Sharma
|

Updated on:Apr 10, 2024 | 11:45 AM

Share

ಬೆಂಗಳೂರು, ಏಪ್ರಿಲ್ 10: ಲೋಕಸಭೆ ಚುನಾವಣೆಯ (Lok Sabha Elections) ಮೊದಲನೇ ಹಂತದ ಮತದಾನಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ (ಹಿಂದಿನ ಟ್ವಿಟರ್​) ಕನ್ನಡ ಭಾಷೆಯಲ್ಲಿ ಪ್ರತ್ಯೇಕ ಖಾತೆ (Narendra Modi Kannada X) ತೆರೆದಿದ್ದಾರೆ. ‘ನಮೋ ಕನ್ನಡ’ ಎಂಬ ಹೆಸರಿನಲ್ಲಿ ನರೇಂದ್ರ ಮೋದಿ ಕನ್ನಡ ಖಾತೆ ಆರಂಭಿಸಲಾಗಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದ್ದು, ಮೇ 7ರಂದು ನಂತರದ ಹಂತದ ಮತದಾನ ನಡೆಯಲಿದೆ. ಹೀಗಾಗಿ ಮತದಾರರನ್ನು ತಲುಪುವ ಉದ್ದೇಶದಿಂದ ಹೊಸ ಖಾತೆ ತೆರೆಯಲಾಗಿದೆ.

ಕರ್ನಾಟಕದ ಎಲ್ಲ ಮತದಾರರನ್ನು ತಲುಪುವ ನಿಟ್ಟಿನಲ್ಲಿ ಮತ್ತು ಮೋದಿ ಭಾಷಣದ, ಅವರು ನೀಡುವ ಮಾಹಿತಿಯನ್ನು ಜನತೆಗೆ ತಲುಪಿಸುವ ಉದ್ದೇಶದೊಂದಿಗೆ ಈ ಎಕ್ಸ್​ ಖಾತೆ ಆರಂಭಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮೋದಿ ತೆರೆದಿರುವ ಪ್ರತ್ಯೇಕ ಎಕ್ಸ್ ಖಾತೆಯಲ್ಲಿ ಮೋದಿ ಭಾಷಣದ ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಲಾಗಿದೆ. ಆದರೆ, ಈ ವಿಡಿಯೋಗಳಿಗೆ ಮೋದಿ ಭಾಷಣದ ಕನ್ನಡಾನುವಾದದ ಹಿನ್ನೆಲೆ ಧ್ವನಿ ನೀಡಲಾಗಿದೆ.

ಮೋದಿ ಎಕ್ಸ್ ಸಂದೇಶಗಳು

ಒಂದು ಸಂದೇಶದಲ್ಲಿ, 1984 ರಲ್ಲಿ ಸಿಖ್ ಸಮುದಾಯದ ವಿರುದ್ಧ ಕಾಂಗ್ರೆಸ್ ಮಾಡಿದ್ದನ್ನು ನಾವ್ಯಾರೂ ಮರೆಯಲಾಗದು ಎಂಬ ಮೋದಿ ಭಾಷಣದ ತುಣುಕು ಇದೆ.

ನವರಾತ್ರಿಯ ಸಮಯದಲ್ಲಿ ನಾವು ಶಕ್ತಿಯ ಚೈತನ್ಯವನ್ನು ಅನುಭವಿಸುತ್ತೇವೆ. ಆದರೆ ‘ಇಂಡಿಯಾ’ ಮೈತ್ರಿಕೂಟದವರು ಶಕ್ತಿಯನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ ಎಂದು ಮತ್ತೊಂದು ವಿಡಿಯೋದಲ್ಲಿ ಮೋದಿ ಹೇಳಿದ್ದಾರೆ. ಇನ್ನೊಂದು ವಿಡಿಯೋದಲ್ಲಿ ಕಾಂಗ್ರೆಸ್ ಪಕ್ಷಗಳೇ ಸಮಸ್ಯೆಯ ಸೃಷ್ಟಿಕರ್ತ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ ಬೂತ್ ಮಟ್ಟದ ಕಾರ್ಯಕರ್ತರ ಜೊತೆ ನರೇಂದ್ರ ಮೋದಿ ಸಂವಾದ; ಪ್ರಚಾರ ತಂತ್ರಗಳೇಗಿರಬೇಕು ಎಂದು ತಿಳಿಸಿದ ಪ್ರಧಾನಿ

ಈಗಾಗಲೇ ಕರ್ನಾಟಕದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ನಡೆಸಿರುವ ಮೋದಿ, ಮತ್ತೊಮ್ಮೆ ಏಪ್ರಿಲ್ 14ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಏಪ್ರಿಲ್ 14ರ ಭಾನುವಾರ ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲಿದ್ದು, ನಂತರ ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:41 am, Wed, 10 April 24

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ