14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ನಿಧನ: ಕನ್ನಡದಲ್ಲೇ ಟ್ವೀಟ್ ಮಾಡಿ ಮೋದಿ ಸಂತಾಪ
ನಾಡಹಬ್ಬ ದಸರಾ ಜಂಬೂಸವಾರಿಯಲ್ಲಿ ಹಲವು ವರ್ಷಗಳ ಕಾಲ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಹೆಗ್ಗಳಿಕೆಯ ಬಲರಾಮ ಆನೆ ಅನಾರೋಗ್ಯದಿಂದ ಮೃತಪಟ್ಟಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ(67) ಆನೆ (elephant balarama) ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ.ಬಲರಾಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,(Narendra Modi) ಹಲವು ವರ್ಷಗಳಿಂದ ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದರು. ಅವನು ಚಾಮುಮಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದ. ಈಗ ಅವನ ಅಗಲಿಕೆಯಿಂದ ದುಖವಾಗಿದೆ. ಆತ್ಮಕ್ಕೆ ಶಾಂತಿ ಸಿಗಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Elephant Balarama: 14 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ
ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ. pic.twitter.com/lUfqXE0WR6
— Narendra Modi (@narendramodi) May 8, 2023
ಅತ್ಯಂತ ಸೌಮ್ಯ ಸ್ವಭಾವದ ಬಲರಾಮ ಆನೆ ಎಲ್ಲರ ಪ್ರೀತಿ ಪಾತ್ರವಾಗಿತ್ತು. ಇತ್ತಿಚಿಗೆ ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದರು. ಜೊತೆಗೆ ಬಾಯಿಯಲ್ಲಿ ಹುಣ್ಣಿನಿಂದ ಬಳಲುತ್ತಿದ್ದ ಬಲರಾಮ ಆಹಾರ ಸೇವಿಸದೇ ನೀರು ಕುಡಿಯದೇ ಅಸ್ವಸ್ಥಗೊಂಡಿತ್ತು. ವೈದ್ಯರ ಚಿಕಿತ್ಸೆಗೆ ಸ್ಪಂದಿಸದ ಬಲರಾಮ ಭಾನುವಾರ ಜೀವಬಿಟ್ಟಿದ್ದಾನೆ.
ದಸರಾ ಅಂದರೆ ಥಟ್ಟನೆ ನೆನಪಾಗುವುದು ವಿಶ್ವವಿಖ್ಯಾತ ಜಂಬೂಸವಾರಿಯ ಗಜಪಡೆ. ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಸಾಗುವ ಗಜಪಡೆಯ ಗಜಗಾಂಭೀರ್ಯ ನಡಿಗೆಯನ್ನು ಕಣ್ಣು ತುಂಬಿಕೊಳ್ಳುವುದೇ ರೋಚಕ. ಈ ಮಹತ್ತರ ಜವಾಬ್ದಾರಿಯನ್ನು ಹಲವು ಆನೆಗಳು ಯಶಸ್ವಿಯಾಗಿ ನಿರ್ವಹಿಸಿವೆ. ಅದರಲ್ಲಿ ಪ್ರಮುಖವಾದ ಆನೆ ಬಲರಾಮ. ಸೌಮ್ಯ ಸ್ವಭಾವದ ಬಲರಾಮ ಆನೆ ಒಂದಲ್ಲ ಎರಡಲ್ಲ ಬರೋಬ್ಬರಿ 14 ಬಾರಿ ಅಂಬಾರಿ ಹೊತ್ತಿದ್ದಾನೆ. ದಸರಾದ ಅತ್ಯಂತ ಯಶಸ್ವಿಯಾಗಿ ಜಂಬೂಸವಾರಿ ಜವಾಬ್ದಾರಿ ನಿರ್ವಹಿಸಿದ ಬಲರಾಮ ಈಗ ನೆನಪು ಮಾತ್ರ.
ಮೈಸೂರು ದಸರೆಯ ಅಸ್ಮಿತೆ. ಎಲ್ಲರ ಪ್ರೀತಿ ಪಾತ್ರ ಬಲರಾಮ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎನ್ನುವುದು ಎಲ್ಲರ ಪ್ರಾರ್ಥನೆಯಾಗಿತ್ತು. ಮೈಸೂರು ಮಾತ್ರವಲ್ಲ ಜಗತ್ತಿನ ಹಲವರು ಬಲರಾಮನ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸುತ್ತಿದ್ದರು. ನಮ್ಮೆಲ್ಲರ ನೆಚ್ಚಿನ ಹೆಮ್ಮೆಯ ಬಲರಾಮ ಆದಷ್ಟು ಬೇಗ ಗುಣಮುಖವಾಗಲಿ ಎಂದು ನೆಟ್ಟಿಗರು ಸಹ ಪ್ರಾರ್ಥಿಸಿದ್ದರು. ಆದ್ರೆ, ಎಲ್ಲರ ಪ್ರಾರ್ಥನೆ ಫಲಿಸಲಿಲ್ಲ.
Published On - 1:56 pm, Mon, 8 May 23




