ಮೈಸೂರಿಗೂ ಬರಲಿದೆ ಮೆಟ್ರೋ ರೈಲು: ಪ್ರಧಾನಿ ಮೋದಿ ಹೇಳಿದ್ದೇನು? ವಿವರ ಇಲ್ಲಿದೆ

|

Updated on: Oct 20, 2023 | 8:57 PM

ನಮ್ಮ ಮೆಟ್ರೋ ವಿಸ್ತರಿತ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿ ಪ್ರಧಾನಿ ಮೋದಿ, ನವದೆಹಲಿ, ಉತ್ತರ ಪ್ರದೇಶದ ನೋಯ್ಡಾ, ಗಾಜಿಯಾಬಾದ್, ಆಗ್ರಾ, ಕಾನ್ಪುರ, ಲಕ್ನೋ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಈಗ ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರಿನ ಮೆಟ್ರೋ ರೈಲು ಸೇವೆ ವಿಸ್ತರಣೆಯಾಗುತ್ತಿದೆ. ಮೈಸೂರಿನಲ್ಲಿಯೂ ಮೆಟ್ರೋ ರೈಲು ಸಂಚರಿಸಲಿದೆ ಎಂದು ಹೇಳಿದ್ದಾರೆ.

ಮೈಸೂರಿಗೂ ಬರಲಿದೆ ಮೆಟ್ರೋ ರೈಲು: ಪ್ರಧಾನಿ ಮೋದಿ ಹೇಳಿದ್ದೇನು? ವಿವರ ಇಲ್ಲಿದೆ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us on

ಬೆಂಗಳೂರು, ಅಕ್ಟೋಬರ್ 20: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೆಟ್ರೋ ರೈಲು (Metro Train) ಸೇವೆಯ ವಿಸ್ತರಣಾ ಕಾರ್ಯ ಭರದಿಂದೆ ಸಾಗುತ್ತಿದೆ. ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ಮೆಟ್ರೋ ವಿಸ್ತರಿತ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಸಿಎಂ ಸಿದ್ದರಾಮಯ್ಯ ಶುಕ್ರವಾರ ಉದ್ಘಾಟನೆ ಮಾಡಿದ್ದಾರೆ. ಮೋದಿ ಅವರು ವಿಡಿಯೋ ಕಾನ್ಫರೆನ್ಸ್​​​ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಮೈಸೂರಿಗೂ ಮೆಟ್ರೋ ರೈಲು ಸೇವೆ ಒದಗಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇದೇ ವೇಳೆ, ಕೆ.ಆರ್.ಪುರ-ಬೈಯ್ಯಪ್ಪನಹಳ್ಳಿ, ಕೆಂಗೇರಿ-ಚಲ್ಲಘಟ್ಟ ವಿಸ್ತರಿತ ಮಾರ್ಗ ಉದ್ಘಾಟನೆ ಮಾಡಿದ ಪ್ರಧಾನಿಯವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಸಮರ್ಪಿಸಿದ್ದಾರೆ.

ನಮ್ಮ ಮೆಟ್ರೋ ವಿಸ್ತರಿತ ಮಾರ್ಗ ಉದ್ಘಾಟನೆ ಮಾಡಿದ ಬಳಿಕ ಮಾತನಾಡಿ ಪ್ರಧಾನಿ ಮೋದಿ, ನವದೆಹಲಿ, ಉತ್ತರ ಪ್ರದೇಶದ ನೋಯ್ಡಾ, ಗಾಜಿಯಾಬಾದ್, ಆಗ್ರಾ, ಕಾನ್ಪುರ, ಲಕ್ನೋ ಸೇರಿದಂತೆ ದೇಶದ ಅನೇಕ ಕಡೆಗಳಲ್ಲಿ ಈಗ ಮೆಟ್ರೋ ರೈಲುಗಳು ಸಂಚರಿಸುತ್ತಿವೆ. ಇನ್ನು ಅನೇಕ ಕಡೆಗಳಲ್ಲಿ ಮೆಟ್ರೋ ಸೇವೆಗೆ ಸಿದ್ಧತೆ ನಡೆಯುತ್ತಿದೆ. ಅದೇ ರೀತಿ ಕರ್ನಾಟಕದ ಬೆಂಗಳೂರಿನಲ್ಲಿಯೂ ಮೆಟ್ರೋ ರೈಲು ಸೇವೆ ಇದೆ. ಬೆಂಗಳೂರಿನ ಮೆಟ್ರೋ ರೈಲು ಸೇವೆ ವಿಸ್ತರಣೆಯಾಗುತ್ತಿದೆ. ಮೈಸೂರಿನಲ್ಲಿಯೂ ಮೆಟ್ರೋ ರೈಲು ಸಂಚರಿಸಲಿದೆ ಎಂದು ಹೇಳಿದ್ದಾರೆ.

ಇನ್ನು ಮೈಸೂರಿಗೆ ಮೆಟ್ರೋ ರೈಲು ಸೇವೆ ನೀಡುವ ವಿಚಾರವಾಗಿ ಪ್ರಧಾನಿ ಮೋದಿ ಭಾಷಣದಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಮೈಸೂರು ಸಂಸದ ಪ್ರತಾಪ್​ ಸಿಂಹ ಕೂಡ ಸಾಮಾಜಿಕ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಮೋದಿ, ಸಿದ್ದರಾಮಯ್ಯ ಹೇಳಿದ್ದೇನು?

‘ಕಳೆದ 3 ವರ್ಷಗಳಿಂದ ಬೃಹತ್ ಮೈಸೂರು ನಿರ್ಮಾಣಕ್ಕೆ ನಾನು ಹೋರಾಟ ಮಾಡುತ್ತಿರುವ ಹಿಂದಿರುವ ಮುಖ್ಯ ಉದ್ದೇಶವೇ ಪ್ರಧಾನಿ ಮೋದಿಜೀ ಅವರ ಕನಸಿನ ಮೆಟ್ರೋ ಟ್ರೈನ್ ಯೋಜನೆಯನ್ನು ತರುವುದಾಗಿದೆ’ ಎಂದು ಪ್ರತಾಪ್ ಸಿಂಹ ಎಕ್ಸ್​ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಕೆ.ಆರ್.ಪುರಂ- ಬೈಯಪ್ಪನಹಳ್ಳಿ ಮತ್ತು ಕೆಂಗೇರಿ- ಚಲ್ಲಘಟ್ಟ ಸೇರಿ 2 ವಿಸ್ತೃತ ಮಾರ್ಗಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯ ಹಾಗೂ ಬೆಂಗಳೂರು ಜನತೆ ಪರವಾಗಿ ಪ್ರಧಾನಿಗಳಿಗೆ ಧನ್ಯವಾದ ಹೇಳುತ್ತೇನೆ. ಪ್ರಧಾನಿಗಳು ವಿಡಿಯೋ ಕಾನ್ಫರೆನ್ಸ್​ ಮೂಲಕ ಬೆಂಗಳೂರು ಮೆಟ್ರೋ ಯೋಜನೆಯ ಕೆ.ಆರ್.ಪುರಂ- ಬೈಯಪ್ಪನಹಳ್ಳಿ ಮತ್ತು ಕೆಂಗೇರಿ- ಚಲ್ಲಘಟ್ಟದವರಗೆ ಮೆಟ್ರೋ ಸೇವೆಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ್ದಾರೆ. ರಾಜ್ಯದ ಹಾಗೂ ಬೆಂಗಳೂರು ಜನತೆ ಪರವಾಗಿ ಪ್ರಧಾನಿಗಳಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Fri, 20 October 23