ಹೆಚ್ಡಿ ದೇವೇಗೌಡಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಅನಾರೋಗ್ಯದ ಕಾರಣ ಪ್ರಧಾನಿ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಹೆಚ್ಡಿ ದೇವೇಗೌಡ ಭಾಗಿಯಾಗಿರಲಿಲ್ಲ.
ಬೆಂಗಳೂರು, ಜೂನ್ 11: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Devegowda) ಅವರು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಹೆಚ್ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ” ಎಂದು ಟ್ವೀಟ್ ಮಾಡಿದ್ದಾರೆ.
PM Shri @narendramodi avaru called me to share his thoughts and ideas on the new government. He enquired after my health too. I am grateful for his care and concern. His warmth made me emotional. May the almighty’s blessings always be on him. May he lead India to greater glory.
— H D Deve Gowda (@H_D_Devegowda) June 10, 2024
“ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಭಾಗಿಯಾಗಲಿಲ್ಲ. ಈ ಕುರಿತು ಟ್ವೀಟ್ ಮಾಡಿದ ಹೆಚ್ಡಿ ದೇವೇಗೌಡ “ಜೂನ್ 9 ರಂದು ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ. ಆದರೆ ನಾನು ಟಿವಿಯಲ್ಲಿ ಸಮಾರಂಭವನ್ನು ನೋಡಿದ್ದೇನೆ. ಕಾಂಗ್ರೆಸ್ ಏನೇ ಹೇಳಿದರೂ ಭಾರತೀಯ ಪ್ರಜಾಪ್ರಭುತ್ವ ಸದೃಢವಾಗಿದೆ” ಎಂದು ಹೆಚ್ಡಿ ದೇವೇಗೌಡ ಜೂನ್9 ರಂದು ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್
ಲೋಕಸಭೆ ಚುನಾವಣೆಗೆ 8 ತಿಂಗಳು ಇರುವಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಹಿಂದೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ತಂತ್ರಗಾರಿಕೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಎರಡೂ ಪಕ್ಷಗಳು ಒಗ್ಗಟ್ಟಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದವು. ಇದು ಯಶಸ್ವಿಯಾಯಿತು. ರಾಜ್ಯದಲ್ಲಿ ಬಿಜೆಪಿ 17 ಮತ್ತು ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆದ್ದವು.
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಇದು ರಾಜ್ಯದಲ್ಲಿ ಜೆಡಿಎಸ್ ಮತ್ತೆ ಪುಟಿದೇಳಲು ಅನುಕೂಲಕರವಾಗಿದೆ. ಜೆಡಿಎಸ್ ರಾಜ್ಯಾದ್ಯಂತ ಪಕ್ಷ ಸಂಘಟನೆ ಅನುಕೂಲವಾಗಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:28 am, Tue, 11 June 24