ಹೆಚ್​ಡಿ ದೇವೇಗೌಡಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

| Updated By: ವಿವೇಕ ಬಿರಾದಾರ

Updated on: Jun 11, 2024 | 10:37 AM

ಪ್ರಧಾನಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿದರು. ಈ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಪ್ರಧಾನಿ ಮೋದಿ ಅವರು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಸಿದ್ದಾರೆ. ಅನಾರೋಗ್ಯದ ಕಾರಣ ಪ್ರಧಾನಿ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಹೆಚ್​ಡಿ ದೇವೇಗೌಡ ಭಾಗಿಯಾಗಿರಲಿಲ್ಲ.

ಹೆಚ್​ಡಿ ದೇವೇಗೌಡಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಹೆಚ್​ಡಿ ದೇವೇಗೌಡ, ಪ್ರಧಾನಿ ಮೋದಿ
Follow us on

ಬೆಂಗಳೂರು, ಜೂನ್​ 11: ಅನಾರೋಗ್ಯ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Devegowda) ಅವರು ಟ್ವೀಟ್​ ಮಾಡಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಹೆಚ್​ಡಿ ದೇವೇಗೌಡ ಅವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. “ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ಮಾಡಿ, ಹೊಸ ಸರ್ಕಾರದ ಬಗ್ಗೆ ತಮಗೆ ಇರುವ ಆಲೋಚನೆಗಳನ್ನು ನನ್ನೊಂದಿಗೆ ಹಂಚಿಕೊಂಡರು. ಹಾಗೆ ನನ್ನ ಆರೋಗ್ಯವನ್ನೂ ವಿಚಾರಿಸಿದರು. ಅವರ ಕಾಳಜಿಗೆ ನಾನು ಆಭಾರಿಯಾಗಿದ್ದೇನೆ. ಅವರ ಈ ಕಾಳಜಿ ನನ್ನನ್ನು ಭಾವುಕರನ್ನಾಗಿಸಿತು. ಪರಮಾತ್ಮನ ಆಶೀರ್ವಾದ ಸದಾ ಅವರ ಮೇಲಿರಲಿ. ಅವರು ಭಾರತವನ್ನು ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿ” ಎಂದು ಟ್ವೀಟ್​ ಮಾಡಿದ್ದಾರೆ.

“ಜೂನ್​ 9 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಭಾಗಿಯಾಗಲಿಲ್ಲ. ಈ ಕುರಿತು ಟ್ವೀಟ್​ ಮಾಡಿದ ಹೆಚ್​​ಡಿ ದೇವೇಗೌಡ “ಜೂನ್​ 9 ರಂದು ಪ್ರಧಾನಿ ಮೋದಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ಅನಾರೋಗ್ಯ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಹಾಜರಾಗಲು ಆಗಲಿಲ್ಲ. ಆದರೆ ನಾನು ಟಿವಿಯಲ್ಲಿ ಸಮಾರಂಭವನ್ನು ನೋಡಿದ್ದೇನೆ. ಕಾಂಗ್ರೆಸ್ ಏನೇ ಹೇಳಿದರೂ ಭಾರತೀಯ ಪ್ರಜಾಪ್ರಭುತ್ವ ಸದೃಢವಾಗಿದೆ” ಎಂದು ಹೆಚ್​ಡಿ ದೇವೇಗೌಡ ಜೂನ್​9 ರಂದು ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ: ಗೆಲುವಿನ ನಂತರ ಹಿರಿಯರಾದ ದೇವೇಗೌಡ ಮತ್ತು ಯಡಿಯೂರಪ್ಪರ ಆಶೀರ್ವಾದ ಪಡೆದಿರುವೆ: ಡಾ ಮಂಜುನಾಥ್

ಲೋಕಸಭೆ ಚುನಾವಣೆಗೆ 8 ತಿಂಗಳು ಇರುವಾಗಲೇ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಮಾಡಿಕೊಂಡವು. ಈ ಮೈತ್ರಿ ಹಿಂದೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ತಂತ್ರಗಾರಿಕೆ ಇದೆ. ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಎರಡೂ ಪಕ್ಷಗಳು ಒಗ್ಗಟ್ಟಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದವು. ಇದು ಯಶಸ್ವಿಯಾಯಿತು. ರಾಜ್ಯದಲ್ಲಿ ಬಿಜೆಪಿ 17 ಮತ್ತು ಜೆಡಿಎಸ್​ 2 ಕ್ಷೇತ್ರಗಳಲ್ಲಿ ಗೆದ್ದವು.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕಿದೆ. ಇದು ರಾಜ್ಯದಲ್ಲಿ ಜೆಡಿಎಸ್​ ಮತ್ತೆ ಪುಟಿದೇಳಲು ಅನುಕೂಲಕರವಾಗಿದೆ. ಜೆಡಿಎಸ್​ ರಾಜ್ಯಾದ್ಯಂತ ಪಕ್ಷ ಸಂಘಟನೆ ಅನುಕೂಲವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:28 am, Tue, 11 June 24