ಅಂಬೇಡ್ಕರ್​ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ

| Updated By: shruti hegde

Updated on: Apr 14, 2021 | 8:14 AM

ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡಿರುವ ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ಹೇಳಿದ್ದಾರೆ.

ಅಂಬೇಡ್ಕರ್​ ಜಯಂತಿ: ಸಂವಿಧಾನ ಶಿಲ್ಪಿಯನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ
ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್
Follow us on

ದೆಹಲಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಪ್ರಯುಕ್ತ ಭಾರತದ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸಿಕೊಂಡಿರುವ ಮೋದಿ, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಹೋರಾಟ ನಡೆಸಿದ ಅಂಬೇಡ್ಕರ್ ಎಂದಿಗೂ ಸ್ಮರಣೀಯರು. ಅವರ ಹೋರಾಟ ಪ್ರತಿ ಪೀಳಿಗೆಗೂ ಉದಾಹರಣೆ ಎಂದು ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್
ಅಂಬೇಡ್ಕರ್ ಜಯಂತಿ ಪ್ರಯುಕ್ತ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಸಂವಿಧಾನ ಶಿಲ್ಪಿ, ಭಾರತರತ್ನ ಡಾ|ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಂದು ಅವರಿಗೆ ಶ್ರದ್ಧಾಪೂರ್ವಕ ಪ್ರಣಾಮಗಳು. ಸಮಾಜದಲ್ಲಿ ಸ್ವಾತಂತ್ರ್ಯ, ಸಮಾನತೆಗಳನ್ನು ಪ್ರತಿಪಾದಿಸುವ ಜೊತೆಗೆ ಶೋಷಿತ ಸಮುದಾಯಗಳ ಪರವಾಗಿ ನಿರಂತರವಾಗಿ ಹೋರಾಡಿದ ಡಾ|ಅಂಬೇಡ್ಕರ್ ಅವರ ಸಾಧನೆ, ದೇಶ ನಿರ್ಮಾಣದಲ್ಲಿ ಅವರ ಕೊಡುಗೆ ಚರಿತ್ರಾರ್ಹ ಎಂದು ಬಣ್ಣಿಸಿದ್ದಾರೆ.

ಕರ್ನಾಟಕ ಬಿಜೆಪಿ ಟ್ವೀಟ್
ಅಂಬೇಡ್ಕರ್ ಜಯಂತಿಗೆ ಕರ್ನಾಟಕ ಬಿಜೆಪಿ ಅಧಿಕೃತ ಟ್ವಿಟರ್ ಅಕೌಂಟ್ ಮೂಲಕ ಶುಭಕೋರಲಾಗಿದೆ. ಸಂವಿಧಾನ ಶಿಲ್ಪಿ, ಶೋಷಿತರ ಧ್ವನಿಯಾಗಿ ಶಿಕ್ಷಣ, ಸಮಾನತೆಗೆ ಶ್ರಮಿಸಿದ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಜೀವನ ಮತ್ತು ಆದರ್ಶಗಳು ಸರ್ವಕಾಲಕ್ಕೂ ಸ್ಮರಣೀಯವಾದದ್ದು. ಭಾರತ ರತ್ನ ಡಾ. ಬಿ.ಆರ್.‌ಅಂಬೇಡ್ಕರ್‌ ಅವರ ಜಯಂತಿಯಂದು ಶತ ನಮನಗಳು ಎಂದು ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ:
ಸಂವಿಧಾನ ಓದು ಕಾರ್ಯಕ್ರಮದಲ್ಲಿ ಅಂಬೇಡ್ಕರ್​ ಕುರಿತು ಹಾಡುವಾಗ ಭಾವುಕರಾದ ಸಂಸದ ವಿ.ಶ್ರೀನಿವಾಸ ಪ್ರಸಾದ್

(PM Narendra Modi CM BS Yediyurappa tweet for Ambedkar Jayanti)