AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ ದುಃಖ ತಂದಿದೆ: ಪ್ರಧಾನಿ ಮೋದಿ ಸಂತಾಪ

Narendra Modi on Dr. Siddalingaiah Death: ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನೇಕ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಕೋರಿದ್ದಾರೆ.

ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನ ದುಃಖ ತಂದಿದೆ: ಪ್ರಧಾನಿ ಮೋದಿ ಸಂತಾಪ
TV9 Web
| Updated By: guruganesh bhat|

Updated on:Jun 11, 2021 | 8:35 PM

Share

ದೆಹಲಿ: ಹಿರಿಯ ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾ.ಸಿದ್ದಲಿಂಗಯ್ಯರವರ ನಿಧನ ಸುದ್ದಿ ಕೇಳಿ ದುಃಖವಾಯಿತು. ಸಿದ್ದಲಿಂಗಯ್ಯರವರ ಸಮೃದ್ಧ ಬರಹಗಳು, ಕವನಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರು ನೀಡಿದ ಕೊಡುಗೆಗಳಿಗಾಗಿ ಅವರನ್ನು ಸ್ಮರಿಸುತ್ತೇನೆ. ಅವರು ತೀರಿಕೊಂಡ ವಿಷಯ ತಿಳಿದು ದುಃಖವಾಯಿತು. ದುಃಖದ ಈ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅನೇಕ ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ. ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಕೋರಿದ್ದಾರೆ.

ಹಿರಿಯ ದಲಿತ ಕವಿ, ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. 66 ವರ್ಷದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದ ಅವರು, ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ಸೃಷ್ಟಿಸಿದ್ದರು.  1988-1994 ಮತ್ಎತು 1995-2001ರವರೆಗೆ ಬಾರಿ ವಿಧಾನಪರಿಷತ್ ಸದಸ್ಯರಾಗಿಯೂ ಡಾ.ಸಿದ್ದಲಿಂಗಯ್ಯ ಕಾರ್ಯನಿರ್ವಹಿಸಿದ್ದರು.

ವಿಧಾನಪರಿಷತ್‌ನ ಮಾಜಿ ಸದಸ್ಯರೂ ಆಗಿದ್ದ ಸಿದ್ದಲಿಂಗಯ್ಯ ನಿಧನಕ್ಕೆ ಇನ್ನೂ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.  ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ದಲಿತರ ನೋವನ್ನು ಸಮರ್ಥವಾಗಿ ಅಕ್ಷರ ರೂಪಕ್ಕಿಳಿಸಿ, ಅವರನ್ನು ಜಾಗೃತಗೊಳಿಸಿದವರು ಡಾ. ಸಿದ್ದಲಿಂಗಯ್ಯ. ನೋವಿನ ಕೆಂಡವನ್ನೇ ಒಡಲೊಳಗಿರಿಸಿಕೊಂಡ ಅವರ ಕವನಗಳು ದಲಿತ ಚಳವಳಿಗೆ ಕಾವು ನೀಡಿತ್ತು ಎಂದು ಬರೆದುಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಅನನ್ಯ ಸೇವೆ ಸಲ್ಲಿಸಿದ್ದ ಅವರ ನಿಧನದಿಂದ, ಸಾಮಾಜಿಕ ಕಳಕಳಿಯ ಅಪೂರ್ವ ಸಾಹಿತಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು, ಅವರ ಕುಟುಂಬ, ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.

ಹಿರಿಯ ಕವಿ ಡಾ. ಸಿದ್ದಲಿಂಗಯ್ಯ ಅವರ ನಿಧನದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ದಲಿತರನ್ನು ಜಾಗೃತಗೊಳಿಸುವಲ್ಲಿ ಡಾ. ಸಿದ್ದಲಿಂಗಯ್ಯನವರ ಕೊಡುಗೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಾದ್ಯಂತ ಇರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಕೋರಿದ್ದಾರೆ.

ಕವಿ, ಆತ್ಮೀಯ ಮಿತ್ರ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ‌‌ ಸಮಾನತೆಯ ಹೋರಾಟವನ್ನು‌ ಮುನ್ನಡೆಸಿದ್ದ ದಲಿತ ಕವಿ, ವಿಧಾನಪರಿಷತ್‌ನ ಮಾಜಿ ಸದಸ್ಯ ಮತ್ತು ನನ್ನ ಆತ್ಮೀಯ ಮಿತ್ರ ಸಿದ್ದಲಿಂಗಯ್ಯನವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಸಾವನ್ನು ಮೀರಿದ ಸಾಹಿತ್ಯದ ಮೂಲಕ ಅವರು ಅಜರಾಮರ. ಅವರ ಕುಟುಂಬದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿದ್ದಲಿಂಗಯ್ಯ ನುಡಿನಮನ ; ಏನೋ ಬೆಳಕಿದೆ ಇವನಲ್ಲಿ ಅನ್ನಿಸಿಯೇ ನಾನು ಕೀರಂ ‘ಹೊಲೆಮಾದಿಗರ ಹಾಡು’ ಪ್ರಕಟಿಸಿದೆವು; ಡಾ.ವಿಜಯಾ

ಹಿರಿಯ ದಲಿತ ಕವಿ, ಸಾಹಿತಿ ಡಾ. ಸಿದ್ದಲಿಂಗಯ್ಯ ನಿಧನ

( PM Narendra Modi Condolence for Kannada Dalit Poet Writer Dr.Siddalingaiah death)

Published On - 8:24 pm, Fri, 11 June 21

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ