AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನ ದಾಸೋಹಿ ಸಂತ ‘ಸಿದ್ದೇಶ್ವರ ಸ್ವಾಮೀಜಿ’ ಅಸ್ತಂಗತ: ಶ್ರೀ ಜೊತೆಯಿದ್ದ ಫೋಟೋಗಳನ್ನ ಹಂಚಿಕೊಂಡು ಕಂಬನಿ ಮಿಡಿದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರಿಗೆ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಜ್ಞಾನ ದಾಸೋಹಿ ಸಂತ 'ಸಿದ್ದೇಶ್ವರ ಸ್ವಾಮೀಜಿ' ಅಸ್ತಂಗತ: ಶ್ರೀ ಜೊತೆಯಿದ್ದ ಫೋಟೋಗಳನ್ನ ಹಂಚಿಕೊಂಡು ಕಂಬನಿ ಮಿಡಿದ ಮೋದಿ
ಮೋದಿ ಮತ್ತು ಸಿದ್ದೇಶ್ವರ ಸ್ವಾಮೀಜಿ
TV9 Web
| Edited By: |

Updated on:Jan 03, 2023 | 12:02 AM

Share

ಬೆಂಗಳೂರು: ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಆಶ್ರಯತಾಣವಾಗಿ ಪ್ರವಚನದ ಮೂಲಕ ಜನರಲ್ಲಿ ಜ್ಞಾನದ ಜ್ಯೋತಿಯನ್ನು ಬೆಳಗುತ್ತಿದ್ದ ವಿಜಯಪುರ ಜ್ಞಾನಯೋಗಾಶ್ರಮದ  ಶ್ರೀ ಸಿದ್ಧೇಶ್ವರ ಸ್ವಾಮೀಜಿ (Siddeshwara Swamiji) ಇಂದು(ಜನವರಿ 02) ಅಸ್ತಂಗತರಾಗಿದ್ದಾರೆ. ಸಿದ್ದೇಶ್ವರ ಶ್ರೀಗಳ ಲಿಂಗೈಕ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಕನ್ನಡದಲ್ಲೇ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: ಪದ್ಮಶ್ರೀ ಪ್ರಶಸ್ತಿಯನ್ನು ವಿನಮೃವಾಗಿಯೇ ನಿರಾಕರಿಸಿದ್ದ ಸಿದ್ಧೇಶ್ವರ ಸ್ವಾಮೀಜಿ, ಅಂದು ಮೋದಿಗೆ ಹೇಳಿದ್ದು ಇದೊಂದೇ ಮಾತು

ಶ್ರೀಗಳ ಜೊತೆಯಿದ್ದ ಫೋಟೋ ಟ್ವಿಟರ್‌ನಲ್ಲಿ ಹಾಕಿ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅವರು ಸಮಾಜಕ್ಕೆ ನೀಡಿರುವ ಗಣನೀಯ ಸೇವೆಗಾಗಿ ಅವರನ್ನು ಸ್ಮರಿಸಲಾಗುತ್ತದೆ. ಅವರು ಇತರರ ಒಳಿತಿಗಾಗಿ ಅವಿಶ್ರಾಂತವಾಗಿ ಶ್ರಮಿಸಿದ್ದರು ಮತ್ತು ಅವರ ಜ್ಞಾನೋತ್ಸಾಹಕ್ಕಾಗಿ ಅವರು ಗೌರವಗಳಿಸಿದ್ದರು. ಈ ದುಃಖದ ಸಮಯದಲ್ಲಿ ಅವರ ಅಸಂಖ್ಯಾತ ಭಕ್ತರೊಂದಿಗೆ ನನ್ನ ಸಂವೇದನೆ ಇದೆ. ಓಂ. ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ಸ್ವಾಮೀಜಿಗಳ ಅಂತಿಮ ದರ್ಶನ, ಅಂತ್ಯಕ್ರಿಯೆ ಮಾಹಿತಿ

ನಾಳೆ (ಜ. 3) ಸಂಜೆ 5 ಗಂಟೆ ಆಶ್ರಮದ ಆವರಣದಲ್ಲೇ ಅಂತ್ಯಕ್ರಿಯೆ ಮಾಡಲು ತಿರ್ಮಾನಿಸಲಾಗಿದೆ. ಆಶ್ರಮದಲ್ಲಿ ಬೆಳಗ್ಗೆ 4.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ(ಜ. 3) ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆವರೆಗೆ ಸೈನಿಕ ಶಾಲೆಯಲ್ಲಿ ಭಕ್ತರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಸೈನಿಕ ಶಾಲೆಯಲ್ಲಿ ಮಧ್ಯಾಹ್ನ 3-4 ಗಂಟೆವರೆಗೆ ಸರ್ಕಾರದ ವತಿಯಿಂದ ಪೂಜ್ಯರಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗುವುದು. ಬಳಿಕ ಸಂಜೆ 5 ಗಂಟೆಗೆ ಆಶ್ರಮದ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ವಿಜಯಪುರ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ಹೇಳಿದ್ದಾರೆ.

Published On - 12:00 am, Tue, 3 January 23