ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ, ಹೇಳಿದ್ದೇನು?

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣ ಇದೀಗ ರಾಷ್ಟ್ರ ಮಟ್ಟದಲ್ಲಿ ಮಾತ್ರವಲ್ಲದೇ ವಿದೇಶಿ ಮಾಧ್ಯಮಗಳಲ್ಲೂ ಸುದ್ದಿಯಾಗಿದೆ. ಇನ್ನು ಪ್ರಜ್ವಲ್ ರೇವಣ್ಣ ಎನ್​ಡಿಎ ಅಭ್ಯರ್ಥಿಯಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಹಾಗಾದ್ರೆ, ಮೋದಿ ಪ್ರಜ್ವಲ್ ರೇವಣ್ಣ ಕೇಸ್​ ಬಗ್ಗೆ ಏನೆಲ್ಲಾ ಹೇಳಿದ್ದಾರೆ ಎನ್ನುವುದು ಇಲ್ಲಿದೆ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿ ಮಾತನಾಡಿದ ಮೋದಿ, ಹೇಳಿದ್ದೇನು?
ಮೋದಿ- ಪ್ರಜ್ವಲ್ ರೇವಣ್ಣ
Follow us
ರಮೇಶ್ ಬಿ. ಜವಳಗೇರಾ
|

Updated on:May 06, 2024 | 11:13 PM

ನವದೆಹಲಿ, (ಮೇ.6): ಪ್ರಜ್ವಲ್​ ರೇವಣ್ಣ(Prajwal Revanna) ಅವರ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಖುದ್ದು ಪ್ರಧಾನಿ ನರೇಂದ್ರ ಮೋದಿ(Narendra Modi) ಮೊದಲ ಬಾರಿಗೆ ಮಾತನಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದ್ರೆ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಈ ಮೂಲಕ ಪ್ರಜ್ವಲ್​ ಪ್ರಕರಣದ ಬಗ್ಗೆ ಮೋದಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ಬಗ್ಗೆ ಮಾತನಾಡಿರುವ ಮೋದಿ, ಇದು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯವಾಗಿರುವ ಕಾರಣ ಕ್ರಮ ಜರುಗಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲೆ ಇದೆ. ಸಹಸ್ರಾರು ವಿಡಿಯೋಗಳ ಇವೆ ಎಂದಾದರೆ ಅವು ಜೆಡಿಎಸ್ ಪಕ್ಷವು ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಅವಧಿಯದ್ದಾಗಿವೆ ಎನ್ನುವುದು ತಿಳಿದುಬಂದಿದೆ. ಅವರು ಅಧಿಕಾರದಲ್ಲಿ ಇದ್ದಾಗ ಆ ವಿಡಿಯೋಗಳನ್ನು ಒಟ್ಟುಗೂಡಿಸಿಕೊಂಡು, ಈಗ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಕ್ಕಲಿಗರು ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಆ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್‌: ಮೋದಿಗೆ ಪತ್ರ ಬರೆದ ಸಿದ್ದರಾಮಯ್ಯ, ಪತ್ರದಲ್ಲೇನಿದೆ?

ಆತ ದೇಶದಿಂದ ಹೊರಹೋದ ಬೆನ್ನಲ್ಲಿಯೇ ಈ ವಿಡಿಯೋಗಳನ್ನು ಬಿಡುಗಡೆ ಮಾಡಲಾಗಿದ್ದು, ಇಡೀ ಬೆಳವಣಿಗೆ ಬಹಳ ಅನುಮಾನಾಸ್ಪದವಾಗಿದೆ. ರಾಜ್ಯ ಸರಕಾರಕ್ಕೆ ಮಾಹಿತಿ ಇದ್ದಿದ್ದರೆ ನಿಗಾ ಇಡಬೇಕಿತ್ತು. ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ನೀವು (ಕಾಂಗ್ರೆಸ್‌ ಸರ್ಕಾರ) ಏನನ್ನೂ ಮಾಡಲಿಲ್ಲ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರಕ್ಕೂ ಇದರ ಬಗ್ಗೆ ಮಾಹಿತಿಯೂ ಸಹ ನೀಡಲಿಲ್ಲ. ಅಂದರೆ ಇದು ಪೊಲಿಟಿಕಲ್ ಗೇಮ್ ಆಗಿತ್ತು. ಅವರೊಂದಿಗೆ ಮೈತ್ರಿ ಇದ್ದ ಕಾಲದಿಂದಲೂ ಈ ವಿಡಿಯೋಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಹಾಗಂತ ನಮ್ಮ ವಿಚಾರ ಇದಲ್ಲ. ಯಾವುದೇ ಅಪರಾಧಿಗಳನ್ನು ಬಿಡಬಾರದು ಎನ್ನುವುದಷ್ಟೇ ನಮ್ಮ ಉದ್ದೇಶ. ನಮ್ಮ ದೇಶದಲ್ಲಿ ಇಂತಹ ರಾಜಕೀಯ ಆಟಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಇದೆ ಎಂದು ವಾಗ್ದಾಳಿ ನಡೆಸಿದರು.

ಮೋದಿಯವರಿಗೆ ಸಂಬಂಧಿಸಿದಂತೆ, ಬಿಜೆಪಿಗೆ ಸಂಬಂಧಿಸಿದಂತೆ, ನಮ್ಮ ಸಂವಿಧಾನಕ್ಕೆ ಸಂಬಂಧಿಸಿದಂತೆ, ಅಂತವರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕೆಂದು ನನ್ನ ಸ್ಪಷ್ಟ ಅಭಿಪ್ರಾಯ. ಲಭ್ಯವಿರುವ ಕಾನೂನು ಆಯ್ಕೆಗಳಲ್ಲಿ ಇಂತವರಿಗೆ ಕಠಿಣ ಶಿಕ್ಷೆ ಆಗಬೇಕು. ನಾವು ಆತನನ್ನು ವಾಪಾಸ್‌ ಕರೆತರಬೇಕು. ಕಠಿಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ಅನುಮಾನಗಳೂ ಇರಕೂಡದು ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಮ್ಮ ಸ್ಪಷ್ಟ ನಿಲುವು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ಅದರಲ್ಲೂ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಆದಿಯಾಗಿ ಮಂತ್ರಿ ಮಂಡಲದ ಸದಸ್ಯರು ಪ್ರಜ್ವಲ್ ಕೇಸ್​ ಬಗ್ಗೆ ಮೋದಿ ಅವರನ್ನು ಎಳೆದು ತರುತ್ತಿದ್ದಾರೆ.  ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಏಕೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರನ್ನು ಈ ಕೇಸ್​ನಲ್ಲಿ ಎಳೆದುಕೊಂಡು ಬರುತ್ತೀರಿ ಎಂದು ಕಾಂಗ್ರೆಸ್ ನಾಯಕರಿಗೆ ಪ್ರಶ್ನಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಮೋದಿ ಅವರಿಗೆ ಈ ಪ್ರಕರಣ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಬಹಿರಂಗವಾಗಿಯೇ ಹೇಳಿದ್ದರು. ಇದೀಗ ಅಂತಿಮವಾಗಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಜ್ವಲ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಸರ್ಕಾರವನ್ನು ತರಾಟೆ್ಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಪ್ರಕರಣವನ್ನು ಖಂಡಿಸುವ ಮೂಲಕ ತಮ್ಮ ನಿಲುವು ಪ್ರಕಟಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:12 pm, Mon, 6 May 24

Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ