ಪ್ರಧಾನಿ ನರೇಂದ್ರ ಮೋದಿ ಮತ್ತು ಅಜಿತ್ ದೋವಲ್ ನಡುವೆ ಮತ್ತೊಂದು ಸಭೆ, ಪಾಕ್ ಬೆನ್ನು ಹುರಿಯಲ್ಲಿ ನಡುಕ

ಅರುಣ್​ ಕುಮಾರ್​ ಬೆಳ್ಳಿ

Updated on: May 06, 2025 | 12:44 PM

ಏತನ್ಮಧ್ಯೆ, ಉಗ್ರರಿಗೆ ಭಾರತದಲ್ಲಿ ಸಹಾನುಭೂತಿ ತೋರುತ್ತಿರುವ ಮತ್ತು ಅವರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವ ಕುಟುಂಬಗಳಿಗೆ ಪಾಠ ಕಲಿಸುವ ಕೆಲಸವನ್ನು ಪೊಲೀಸ್ ಮತ್ತು ಸೇನೆ ಮುಂದುವರಿಸಿವೆ. ಜಮ್ಮು ಮತ್ತು ಕಾಶ್ಮೀರದ ಬಗದ್ಗಾಮ್ ಜಿಲ್ಲೆಯಲ್ಲಿ ಇಬ್ಬರನ್ನು ವಶಕ್ಕೆ ಪಡೆದು ಅವರಿಂದ ಒಂದು ಪಿಸ್ಟಲ್ ಮತ್ತು ಗ್ರೆನೇಡ್​ಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ.

ಬೆಂಗಳೂರು, ಮೇ 6: ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯ ಪ್ರವಾಸಿಗಳ ನರಮೇಧ ನಡೆಸಿದ ಉಗ್ರರಿಗೆ ಕುಮ್ಮಕ್ಕು ನೀಡಿರುವ ಪಾಕಿಸ್ತಾನಕ್ಕೆ (Pakistan) ಬುದ್ಧಿ ಕಲಿಸಲು ಭಾರತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ದೇಶದ ಹಲವು ಭಾಗಗಳಲ್ಲಿ ಸಮರಭ್ಯಾಸ ಜೋರಾಗಿ ನಡೆಯುತ್ತಿದೆ. ಎಲ್ಲಕ್ಕಿಂತ ಮುಖ್ಯವಾಗಿ ಇವತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮತ್ತೊಂದು ಸಭೆ ನಡೆಸುತ್ತಿದ್ದಾರೆ. ಇಬ್ಬರ ನಡುವೆ ಏನು ಮಾತುಕತೆ ನಡೆಯಲಿದೆಯೋ? ಅದರೆ ಈ ಸಭೆ ಮಾತ್ರ ಪಾಕಿಸ್ತಾನವನ್ನು ಮತ್ತಷ್ಟು ಅಧೀರಗೊಳಿಸಿದೆ, ನಡುಕ ಹೆಚ್ಚಿಸಿದೆ. ನಿನ್ನೆ ನಡೆಸಿದ ಸಭೆಯೊಂದರಲ್ಲಿ ಪ್ರಧಾನಿಯವರು ನಾಳೆ ದೇಶದಾದ್ಯಂತ ಯುದ್ಧದ ಅಣಕು ಪ್ರದರ್ಶನ ನಡೆಸಲು ಸೂಚಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನಕ್ಕೆ ಸಾಲ ಕೊಡಬೇಡಿ: ಐಎಂಎಫ್​​​ಗೆ ಭಾರತ ಮನವಿ; ಈ ಸಾಲ ತಪ್ಪಿದರೆ ಪಾಕಿಸ್ತಾನಕ್ಕೆ ಏನು ಸಮಸ್ಯೆ?

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.