AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi Bangalore Visit Live: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; 15,600 ಕೋಟಿ ರೂ. ಯೋಜನೆಗಳಿಗೆ ಚಾಲನೆ!

ಪ್ರಧಾನಿ ಮೋದಿ ಬೆಂಗಳೂರು ಭೇಟಿ ಲೈವ್ : ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ನಮ್ಮ ಮೆಟ್ರೋ ಪಿಂಕ್ ಲೈನ್ ಲೋಕಾರ್ಪಣೆ ಹಾಗೂ ₹15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಮತ್ತು ಸಂಚಾರ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಇಂದಿನ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು ಇಲ್ಲಿವೆ.

PM Modi Bangalore Visit Live: ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ; 15,600 ಕೋಟಿ ರೂ. ಯೋಜನೆಗಳಿಗೆ ಚಾಲನೆ!
ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿImage Credit source: PTI
ಭಾವನಾ ಹೆಗಡೆ
|

Updated on:Nov 13, 2026 | 8:31 AM

Share

LIVE NEWS & UPDATES

  • 13 Nov 2026 08:31 AM (IST)

    ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಪಿಂಕ್ ಲೈನ್ ಉದ್ಘಾಟನೆಗೆ ಬಿಗಿ ಪೊಲೀಸ್ ಭದ್ರತೆ

    ಕಾಳೇನ ಅಗ್ರಹಾರದಿಂದ ತಾವರೆಕರೆವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಎಸ್‌ಪಿಜಿ (SPG) ಮಾರ್ಗಸೂಚಿಯಂತೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ 3 ಜಂಟಿ ಆಯುಕ್ತರು, 15 ಡಿಸಿಪಿ, 20 ಎಸಿಪಿ, 30 ಇನ್ಸ್‌ಪೆಕ್ಟರ್, 100ಕ್ಕೂ ಹೆಚ್ಚು ಪಿಎಸ್‌ಐ ಹಾಗೂ 1,000ಕ್ಕೂ ಹೆಚ್ಚು ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ಸಂಚರಿಸುವ ಮಾರ್ಗ, ಎತ್ತರದ ಕಟ್ಟಡಗಳು ಮತ್ತು ಅಪಾರ್ಟ್‌ಮೆಂಟ್‌ಗಳ ಮೇಲೆ ಸಿಸಿಟಿವಿ ಹಾಗೂ ವಿಶೇಷ ನಿಗಾ ವಹಿಸಲಾಗಿದೆ.

Breaking News Today Live Updates in Kannada: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶುಕ್ರವಾರ) ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಬೆಂಗಳೂರು ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 10:05ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ಪ್ರಶಾಂತಿ ಕುಟೀರಂ ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ತಾವರೆಕೆರೆ ಮೆಟ್ರೋ ನಿಲ್ದಾಣದಿಂದ ಐಐಎಂ ಬೆಂಗಳೂರು ನಿಲ್ದಾಣದವರೆಗೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ. ಈ ವೇಳೆ ಪಿಂಕ್ ಲೈನ್ ಲೋಕಾರ್ಪಣೆ ಸೇರಿದಂತೆ ₹15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಎಸ್‌ಪಿಜಿ ಹಾಗೂ ಪೊಲೀಸ್ ಇಲಾಖೆ ಬಿಗಿ ಭದ್ರತೆ ಕೈಗೊಂಡಿವೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ಮಾರ್ಗಗಳಲ್ಲೂ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಸಂಜೆ ಮೈಸೂರಿನಿಂದ ದೆಹಲಿಗೆ ವಾಪಸಾಗಲಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

live_tv_iframe_post]

Published On - Nov 13,2026 8:30 AM

Follow Us
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್