AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗ ಉದ್ಘಾಟನೆ ದಿನಾಂಕ ಬದಲಾವಣೆ: ಮೋದಿ ಬೆಂಗಳೂರಿಗೆ ಆಗಮಿಸುವ ವಿವರ ಇಲ್ಲಿದೆ

ರಾಜ್ಯ ರಾಜಧಾನಿ ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ ಮಾರ್ಗ ಉದ್ಘಾಟನೆ ದಿನಾಂಕದಲ್ಲಿ ಬದಲಾವಣೆಯಾಗಿದ್ದು, ಇದೀಗ ಹೊಸ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಈ ಮೊದಲ ನವೆಂಬರ್ 15ರಂದು ಪ್ರಧಾನಿ ಮೋದಿ ಉದ್ಗಾಟನೆ ಮಾಡುತ್ತಾರೆ ಎಂದು ಸ್ವತಃ ಸಿಎಂ ಘೋಷಣೆ ಮಾಡಿದ್ದಾರೆ. ಆದ್ರೆ, ಇದೀಗ ಹೊಸ ದಿನಾಂಕವನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಘೋಷಣೆ ಮಾಡಿದ್ದಾರೆ. ಹಾಗಾದ್ರೆ, ಅಧಿಕೃತ ಉದ್ಘಾಟನೆಯ ಯಾವಾಗ, ಈ ಗುಲಾಬಿ ಮಾರ್ಗ ಎಲ್ಲಿಂದ ಎಲ್ಲಿಗೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನಮ್ಮ ಮೆಟ್ರೋ  ಪಿಂಕ್ ಲೈನ್ ಮಾರ್ಗ ಉದ್ಘಾಟನೆ ದಿನಾಂಕ ಬದಲಾವಣೆ: ಮೋದಿ ಬೆಂಗಳೂರಿಗೆ ಆಗಮಿಸುವ ವಿವರ ಇಲ್ಲಿದೆ
Narendra Modi
ಕಿರಣ್​ ಸೂರ್ಯ
| Edited By: |

Updated on: Nov 02, 2026 | 5:35 PM

Share

ಬೆಂಗಳೂರು, ನವೆಂಬರ್ 2: ಸಿಲಿಕಾನ್ ಸಿಟಿಯ ಸಂಚಾರದ ಜೀವನಾಡಿ ನಮ್ಮ ಮೆಟ್ರೋ ಪಿಂಕ್ ಮಾರ್ಗ ಉದ್ಘಾಟನೆ ದಿನಾಂಕ ಬದಲಾಗಿದೆ. ಈ ಮೊದಲು ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದು ಎಂದು ಸ್ವತಃ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದ್ರೆ, ಇದೀಗ ನವೆಂಬರ್ 15ರ ಬದಲಾಗಿ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಗುಲಾಬಿ ಮಾರ್ಗದ ಮೆಟ್ರೋ ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಆರು ತಿಂಗಳಿಂದ ಉದ್ಘಾಟನೆಗಾಗಿ ಕಾದಿತ್ತು

ಪಿಂಕ್ ಲೈನ್ ಕಳೆದ ಆರು ತಿಂಗಳಿಂದ ಉದ್ಘಾಟನೆ ಆಗಲಿದೆ ಎಂದು ಹೇಳಿಕೊಂಡು ಬರುಲಾಗುತ್ತಿದೆ. ಆದರೆ ಉದ್ಘಾಟನೆ ಆಗಿರಲಿಲ್ಲ. ರೈಲುಗಳಿಗೆ ನಿಯಮಾನುಸವಾರಗಿ ಅನುಮೋದನೆ ಪಡೆಯೋದು ವಿಳಂಬಕ್ಕೆ ಕಾರಣವಾಗಿತ್ತು. ಆದ್ರೆ, ಇದೀಗ ಉದ್ಗಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿ ಉದ್ಘಾಟನೆ ಮಾಡಲಿದ್ದಾರೆ. 7.5 ಕಿ.ಮೀ ಮಾರ್ಗ ಇದಾಗಿದ್ದು, ಆರಂಭದಲ್ಲಿ ಆರು ರೈಲುಗಳನ್ನು ಕಾರ್ಯಾಚರಣೆಗೊಳಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಸಂಸ್ಥೆ ಪ್ಲಾನ್ ಮಾಡಿದೆ.

ಈಗಾಗಲೇ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ (CMRS) ಗ್ರೀನ್ ಸಿಗ್ನಲ್ ಸಿಕ್ಕಿರುವುದರಿಂದ ತಾಂತ್ರಿಕವಾಗಿ ಮಾರ್ಗ ಸಿದ್ಧವಾಗಿದ್ದು, ಬಿಎಂಆರ್‌ಸಿಎಲ್ ಮತ್ತು ರಾಜ್ಯ ಸರ್ಕಾರದಿಂದ ಅಧಿಕೃತ ವೇಳಾಪಟ್ಟಿ ಮತ್ತು ಕಾರ್ಯಕ್ರಮದ ವಿವರಗಳು ಶೀಘ್ರದಲ್ಲೇ ಪ್ರಕಟವಾಗಲಿದೆ.

ಪಿಂಕ್ ಲೈನ್ ಮಾರ್ಗದ ವಿವರ

ಕಾಳೇನ ಅಗ್ರಹಾರದಿಂದ ನಾಗವಾರ ಸಂಪರ್ಕ ಕಲ್ಪಿಸುವ ಈ ಮಾರ್ಗವು 21.26 ಕಿ.ಮೀ. ಉದ್ದ ಹೊಂದಿದ್ದು, ಇದರಲ್ಲಿ 13.76 ಕಿ.ಮೀ. ಸುರಂಗ ಮಾರ್ಗವಾಗಿದೆ. ಸದ್ಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ. ಎಲಿವೇಟೆಡ್ ವಿಭಾಗದ ಕಾಮಗಾರಿ ಪೂರ್ಣಗೊಂಡಿದ್ದು, ಇತ್ತೀಚೆಗೆ ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರಿಂದ ಸುರಕ್ಷತಾ ಕ್ಲಿಯರೆನ್ಸ್ ಸಹ ಸಿಕ್ಕಿದೆ. ಹೀಗಾಗಿ ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಗೆ ರೈಲು ಸಂಚಾರ ಆರಂಭವಾಗಲಿದೆ. ಉದ್ಘಾಟನೆಗೆ ಸಿದ್ಧವಾಗಿರುವ ಈ ಮಾರ್ಗದಲ್ಲಿ ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ. ನಗರ 4ನೇ ಹಂತ, ಜಯದೇವ ಆಸ್ಪತ್ರೆ (ಹಳದಿ ಮತ್ತು ಗುಲಾಬಿ ಮಾರ್ಗಗಳ ಪ್ರಮುಖ ಇಂಟರ್‌ಚೇಂಜ್ ನಿಲ್ದಾಣ) ತಾವರೆಕೆರೆ ಸೇರಿ 6 ನಿಲ್ದಾಣಗಳು ಇವೆ.

ಈ ಭಾಗದಲ್ಲಿ ಟ್ರಾಫಿಕ್​​ಗೆ ಸಿಗಲಿದೆ ಮುಕ್ತಿ

ಈ ಮಾರ್ಗ ಕಾರ್ಯಾರಂಭಗೊಂಡರೆ ಬನ್ನೇರುಘಟ್ಟ ರಸ್ತೆ, ಐಐಎಂಬಿ, ಜೆಪಿ ನಗರ ಹಾಗೂ ಜಯದೇವ ಆಸ್ಪತ್ರೆ ಭಾಗದ ಪ್ರಯಾಣಿಕರಿಗೆ ಟ್ರಾಫಿಕ್ ಕಿರಿಕಿರಿಯಿಂದ ಮುಕ್ತಿ ಸಿಗಲಿದೆ.  ಬೆಳಗ್ಗೆ ಹಾಗೂ ಸಂಜೆ ಹೊತ್ತಿನಲ್ಲಿ ಈ ಭಾಗದಲ್ಲಿ ಫುಲ್ ಟ್ರಾಫಿಕ್ ಆಗುವುದು ಸಾಮಾನ್ಯವಾಗಿದೆ. ಅದರಲ್ಲೂ ಮಳೆ ಬಂತಂದರೆ ಸಾಕು ಕಿಲೋಮೀಟರ್ ಗಟ್ಟಲೇ ಸಂಚಾರ ದಟ್ಟಣೆಯಾಗುತ್ತದೆ. ಆದ್ರೆ, ಇದೀಗ ಮೆಟ್ರೋ ಆರಂಭವಾದರೆ ಕೊಂಚ  ಟ್ರಾಫಿಕ್​​ನಿಂದ ಮುಕ್ತಿ ಸಿಗಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ತೀವ್ರಗೊಂಡ ಕಬ್ಬು ಬೆಳೆಗಾರರ ಹೋರಾಟ: ಹಿಂಡಲಗಾ ಜೈಲ್ ಭರೋ ಚಳವಳಿ ಆರಂಭ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ಮುರಸು ಚಂಡಮಾರುತದ ಎಫೆಕ್ಟ್​​: ಕರ್ನಾಟಕದಲ್ಲಿ 5 ದಿನಗಳ ಕಾಲ ಮಳೆ
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ದರ ಏರಿಕೆ ಎಫೆಕ್ಟ್​: ನವ ದಂಪತಿಗೆ ಹಾಲು ಮೊಸರು ಗಿಫ್ಟ್
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಹೆಲಿಕಾಪ್ಟರ್​ಗಳಲ್ಲಿ ಎರಡು ಪೈಲಟ್ಗಳು ಕಡ್ಡಾಯ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ಬಿಗ್ ಬಾಸ್ ಮನೆಯಲ್ಲಿ ಕೋಲಾಹಲಕ್ಕೆ ಕಾರಣವಾದ ಕ್ಯಾಪ್ಟನ್ ಜಗದೀಶ್ ನಿರ್ಧಾರ
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ವಿಎ ಪರೀಕ್ಷೆಯಲ್ಲಿ ಅಕ್ರಮ: ಶಂಕರ್ ಬನ್ನೂರು ವಿರುದ್ಧ ಎಫ್​ಐಆರ್​​
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಸಿಎಂ ಡಿಕೆ ಶಿವಕುಮಾರ್ ಭೇಟಿಗೆ ಆಗಮಿಸಿದ ಸಂಸದ ಬಸವರಾಜ ಬೊಮ್ಮಾಯಿ!
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಅರುಣ್ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳು
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಕಾಫಿ, ಟೀ ಬೆಲೆ ಹೆಚ್ಚಳ: ಸರ್ಕಾರದ ವಿರುದ್ಧ ಆಕ್ರೋಶ, ಜನ ಏನಂತಾರೆ ನೋಡಿ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ
ಸ್ಟಿಂಗ್ ಆಪರೇಷನ್ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸ ಪರಿಶೀಲನೆ ಸಾಧ್ಯತೆ