ಸಿದ್ದಗಂಗಾ ಹಿರಿಯ ಶ್ರೀಗಳ ವಾರ್ಷಿಕ ಪುಣ್ಯಸ್ಮರಣೆ: ಪ್ರಧಾನಿ ಮೋದಿಗೆ ಆಹ್ವಾನ
ದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಮಹಾಸ್ವಾಮಿಗಳವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಲಾಗಿದೆ. 111 ವರ್ಷ ದೀರ್ಘಾಯುಷ್ಯದ ಹಿರಿಯ ಶ್ರೀಗಳು 2019ರ ಜನವರಿ 21 ರಂದು ಲಿಂಗೈಕ್ಯರಾಗಿದ್ದರು. ಸಿದ್ಧಗಂಗಾ ಮಠದ ಹಾಲಿ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ, ವಾರ್ಷಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ತುಮಕೂರು ಸಂಸದ ಜಿ.ಎಸ್. ಬಸವರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow us on
ದೆಹಲಿ: ತುಮಕೂರಿನ ಸಿದ್ದಗಂಗಾ ಮಠದ ಲಿಂಗೈಕ್ಯ ಡಾ. ಶಿವಕುಮಾರ ಮಹಾಸ್ವಾಮಿಗಳವರ ವಾರ್ಷಿಕ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ ನೀಡಲಾಗಿದೆ. 111 ವರ್ಷ ದೀರ್ಘಾಯುಷ್ಯದ ಹಿರಿಯ ಶ್ರೀಗಳು 2019ರ ಜನವರಿ 21 ರಂದು ಲಿಂಗೈಕ್ಯರಾಗಿದ್ದರು.
ಸಿದ್ಧಗಂಗಾ ಮಠದ ಹಾಲಿ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರು ಇಂದು ನವದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನ ಭೇಟಿ ಮಾಡಿ, ವಾರ್ಷಿಕ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ತುಮಕೂರು ಸಂಸದ ಜಿ.ಎಸ್. ಬಸವರಾಜು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.