ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ

PM Narendra Modi: ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಯಡಿಯೂರಪ್ಪನವರ ಕೆಲಸ, ಕೊಡುಗೆ ಬಗ್ಗೆ ಮಾತನಾಡಲು ಪದಗಳಿಲ್ಲ ಎಂದ ಪ್ರಧಾನಿ ಮೋದಿ: ನೂತನ ಸಿಎಂಗೆ ಅಭಿನಂದನೆ
ನಿರ್ಗಮಿತ ಮತ್ತು ನೂತನ ಮುಖ್ಯಮಂತ್ರಿ ಕುರಿತು ಟ್ವೀಟ್ ಮಾಡಿದ ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Jul 28, 2021 | 12:16 PM

ಕರ್ನಾಟಕದಲ್ಲಿ ಮುಖ್ಯಮಂತ್ರಿ ರಾಜೀನಾಮೆ ಚರ್ಚೆ ಉತ್ತುಂಗದಲ್ಲಿದ್ದಾಗಲೂ ಬಿಜೆಪಿ ಹೈಕಮಾಂಡ್ ಮೌನವಾಗಿಯೇ ಇತ್ತು. ಅಂತೂ ಯಡಿಯೂರಪ್ಪ ರಾಜೀನಾಮೆ ನೀಡಿದರು..ಬಸವರಾಜ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾದರು. ಇದೀಗ ಪ್ರಧಾನಿ ನರೇಂದ್ರ ಮೋದಿಯವರು ಮೌನ ಮುರಿದಿದ್ದಾರೆ. ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪನವರ ಕಾರ್ಯವೈಖರಿಯನ್ನು ಹೊಗಳಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶುಭಕೋರಿದ್ದಾರೆ.

ಇಂದು ಯಡಿಯೂರಪ್ಪನವರ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ, ಬಿಜೆಪಿ ಪಕ್ಷ ಮತ್ತು ಕರ್ನಾಟಕದಲ್ಲಿ ಪಕ್ಷದ ಬೆಳವಣಿಗೆಗೆ ಯಡಿಯೂರಪ್ಪನವರು ನೀಡಿದ ಸ್ಮರಣೀಯ ಕೊಡುಗೆ ಬಗ್ಗೆ ಮಾತನಾಡಲು ಯಾವ ಪದಗಳೂ ನ್ಯಾಯ ಒದಗಿಸುವುದಿಲ್ಲ. ಅರ್ಥಾತ್​ ಪದಗಳೇ ಇಲ್ಲ. ಅದೆಷ್ಟೋ ದಶಕಗಳಿಂದ ಯಡಿಯೂರಪ್ಪ ಅವರು ಬಿಜೆಪಿ ಪಕ್ಷಕ್ಕಾಗಿ ಶ್ರಮವಹಿಸಿ ದುಡಿದಿದ್ದಾರೆ. ಪಕ್ಷ ಸಂಘಟನೆಗಾಗಿ ಕರ್ನಾಟಕವನ್ನು ಸುತ್ತಿದ್ದಾರೆ. ಪಕ್ಷವನ್ನು ಜನರು ಒಪ್ಪಿಕೊಳ್ಳುವಂತೆ ಮಾಡಿದ್ದಾರೆ. ಸಾಮಾಜಿಕ ಅಭಿವೃದ್ಧಿ ಕಾರ್ಯಗಳಿಂದ ಮೆಚ್ಚುಗೆ ಪಡೆದಿದ್ದಾರೆ ಎಂದು ಹೊಗಳಿದ್ದಾರೆ.

ನೂತನ ಸಿಎಂಗೆ ಅಭಿನಂದನೆ ಹಾಗೇ, ಪ್ರಧಾನಿ ಮೋದಿಯವರು ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಶುಭಹಾರೈಸಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಬೊಮ್ಮಾಯಿಯವರಿಗೆ ಶಾಸಕಾಂಗ ಮತ್ತು ಆಡಳಿತಾತ್ಮಕವಾಗಿ ಅಪಾರ ಅನುಭವ ಇದೆ. ಈಗಾಗಲೇ ಕರ್ನಾಟಕದಲ್ಲಿ ನಮ್ಮ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಿಕೊಂಡು ಹೋಗುತ್ತಾರೆಂಬ ಆತ್ಮವಿಶ್ವಾಸ ನನಗೆ ಇದೆ. ಅವರ ಮುಂದಿನ ಆಡಳಿತಕ್ಕೆ ನನ್ನ ಶುಭ ಹಾರೈಕೆಗಳು ಎಂದು ಹೇಳಿದ್ದಾರೆ.

ಇದನ್ನೂ ಓದಿ: ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ, ಎದ್ದು ಕಾಣುತ್ತಿತ್ತು ಕೆ.ಎಸ್.ಈಶ್ವರಪ್ಪ ಅನುಪಸ್ಥಿತಿ

Published On - 12:15 pm, Wed, 28 July 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್