ಬೈಎಲೆಕ್ಷನ್ನಲ್ಲಿ ಅಧಿಕ ಸ್ಥಾನ, ಬಿಎಸ್ವೈ ಜೊತೆ ದೂರವಾಣಿಯಲ್ಲಿ ಮೋದಿ ಮಾತು
ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಮತ್ತೊಮ್ಮೆ ಅಭಿನಂದನೆ ತಿಳಿಸಿದ್ದಾರೆ. ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಸಿಎಂಗೆ ಭರವಸೆ ನೀಡಿದ್ದಾರೆ. ಜೊತೆಗೆ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಸಿಎಂ ಅವರಿಂದ ಮಾಹಿತಿ ಪಡೆದ ಪ್ರಧಾನಿ, […]
ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪ್ರಧಾನಿ ಮೋದಿ ಕರೆ ಮಾಡಿ ಮತ್ತೊಮ್ಮೆ ಅಭಿನಂದನೆ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ಕೊಡುವುದಾಗಿ ಸಿಎಂಗೆ ಭರವಸೆ ನೀಡಿದ್ದಾರೆ. ಜೊತೆಗೆ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ತೆರಿಗೆಯ ಪಾಲು ಕೊಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.
ರಾಜ್ಯದ ತೆರಿಗೆ ಸಂಗ್ರಹ, ಅಭಿವೃದ್ಧಿ ಕುರಿತು ಸಿಎಂ ಅವರಿಂದ ಮಾಹಿತಿ ಪಡೆದ ಪ್ರಧಾನಿ, ಆದಷ್ಟು ಬೇಗ ರಾಜ್ಯದ ಜಿಎಸ್ಟಿ ಪಾಲು ಕೊಡುವುದಾಗಿ ಭರವಸೆ ನೀಡಿದ್ದಾರೆ. ಇದೇ ವೇಳೆ ಸಿಎಬಿ ಮತ್ತು ಎನ್ಆರ್ಸಿ ಜಾರಿ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಬಿಎಸ್ವೈರಿಂದ ಮಾಹಿತಿ ಪಡೆದಿದ್ದಾರೆ.
Published On - 12:34 pm, Sat, 14 December 19