Lok Sabha Elections 2024: 8 ದಿನಗಳಲ್ಲಿ ಕರ್ನಾಟಕದ ನಾಲ್ಕು ಕಡೆ ಪ್ರಧಾನಿ ಮೋದಿ ರ‍್ಯಾಲಿ

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 15ರಿಂದ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದು ರಾಜ್ಯದ ನಾಲ್ಕು ಮುಖ್ಯ ಲೋಕಸಭಾ ಕ್ಷೇತ್ರಗಳಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಮಾರ್ಚ್ 15 ರಂದು ಕೋಲಾರದಲ್ಲಿ, ಮಾರ್ಚ್ 17 ರಂದು ಶಿವಮೊಗ್ಗದಲ್ಲಿ, 18 ರಂದು ಬೀದರ್‌ನಲ್ಲಿ ಮತ್ತು ಮಾರ್ಚ್ 19 ರಂದು ಧಾರವಾಡದಲ್ಲಿರ‍್ಯಾಲಿಗಳನ್ನು ನಡೆಸಲಿದ್ದಾರೆ.

Lok Sabha Elections 2024: 8 ದಿನಗಳಲ್ಲಿ ಕರ್ನಾಟಕದ ನಾಲ್ಕು ಕಡೆ ಪ್ರಧಾನಿ ಮೋದಿ ರ‍್ಯಾಲಿ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಆಯೇಷಾ ಬಾನು

Updated on: Mar 11, 2024 | 11:05 AM

ಶಿವಮೊಗ್ಗ, ಮಾರ್ಚ್.11: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿದೆ. ರಾಜ್ಯ, ಕೇಂದ್ರ ನಾಯಕರು ಕಣಕ್ಕೆ ಇಳಿದಿದ್ದು ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರನ್ನು ಸೆಳೆಯಲು ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರಚಾರಕ್ಕೆ ಮುಂದಾಗಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸುತ್ತಿದ್ದು ಮುಂದಿನ ಎಂಟು ದಿನಗಳಲ್ಲಿ ನಾಲ್ಕು ರ‍್ಯಾಲಿಗಳನ್ನು ನಡೆಸುವ ನಿರೀಕ್ಷೆಯಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 15 ಮತ್ತು 19 ರ ನಡುವೆ ಕೋಲಾರ, ಶಿವಮೊಗ್ಗ, ಬೀದರ್ ಮತ್ತು ಧಾರವಾಡದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಪ್ರಧಾನಿಯವರು ಇದೇ ಅವಧಿಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಇತರ ರ‍್ಯಾಲಿಗಳನ್ನು ನಡೆಸಲಿದ್ದಾರೆ. ಭಾರತೀಯ ಚುನಾವಣಾ ಆಯೋಗವು ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲೇ, ಪ್ರಧಾನಿ ಮೋದಿ ಲೋಕಸಭೆ ಚುನಾವಣೆಯ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಅವರು ಹಲವಾರು ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಾ.17ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಾ.17ರ ಮಧ್ಯಾಹ್ನ 2 ಗಂಟೆಗೆ ಕೇರಳದಿಂದ ನೇರವಾಗಿ ವಿಶೇಷ ಫ್ಲೈಟ್​ನಲ್ಲಿ ಆಗಮಿಸಲಿದ್ದು ಶಿವಮೊಗ್ಗದ ಫ್ರೀಡಂಪಾರ್ಕ್​ನಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ

ಪ್ರಧಾನಿಯವರು ಮಾರ್ಚ್ 15-19 ರ ನಡುವೆ ದಕ್ಷಿಣ ಭಾರತದಲ್ಲಿ ವ್ಯಾಪಕ ಪ್ರಚಾರ ನಡೆಸಲಿದ್ದಾರೆ. ಈ ಅವಧಿಯಲ್ಲಿ ಪ್ರಧಾನಿಯವರು ಕರ್ನಾಟಕದಲ್ಲಿ ಕನಿಷ್ಠ ನಾಲ್ಕು ಸಮಾವೇಶಗಳಲ್ಲಿ ಭಾಗಿಯಾಗಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ಮೂಲಗಳ ಪ್ರಕಾರ, ಮಾರ್ಚ್ 15 ರಂದು ಕೋಲಾರದಲ್ಲಿ, ಮಾರ್ಚ್ 17 ರಂದು ಶಿವಮೊಗ್ಗದಲ್ಲಿ, 18 ರಂದು ಬೀದರ್‌ನಲ್ಲಿ ಮತ್ತು ಮಾರ್ಚ್ 19 ರಂದು ಧಾರವಾಡದಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ಮಾತನಾಡಲಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ 28ರಲ್ಲಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ರಾಜ್ಯದಲ್ಲಿ ಉತ್ತಮ ಪ್ರದರ್ಶನ ನೀಡಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು. ಮೂರನೇ ಸ್ಥಾನವನ್ನು ಮಂಡ್ಯದಿಂದ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಗೆದ್ದುಕೊಂಡಿದ್ದು, ಅವರಿಗೆ ಬಿಜೆಪಿ ಹೊರಗಿನಿಂದ ಬೆಂಬಲ ನೀಡಿತ್ತು. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ನಂತರ ಈಗಿರುವ ಸ್ಥಾನಗಳನ್ನು ಉಳಿಸಿಕೊಳ್ಳುವುದು ಹಾಗೂ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು ಬಿಜೆಪಿಯ ಗುರಿಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ