AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಕುರಿತು ನರೇಂದ್ರ ಮೋದಿ ಚರ್ಚೆ; ಉತ್ತರ ಕನ್ನಡ ನಂ.1

ಉತ್ತರ ಕನ್ನಡ ಜಿಲ್ಲೆಯ ಶೇ.60ರಷ್ಟು ಜನ ಉದ್ಯೋಗ ನಿಮಿತ್ತ ಹೊರಜಿಲ್ಲೆ ಹಾಗೂ ರಾಜ್ಯಗಳಲ್ಲಿದ್ದು, ಲಾಕ್‌ಡೌನ್ ಘೋಷಿಸುತ್ತಿದ್ದಂತೆ ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಬೆಂಗಳೂರು, ಗೋವಾ, ಮಹಾರಾಷ್ಟ್ರದಿಂದ ಅಧಿಕ ಪ್ರಮಾಣದ ಜನ ಆಗಮಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಕಟ್ಟುನಿಟ್ಟಿನ ಕ್ರಮಕೈಗೊಂಡಿಲ್ಲ ಎಂಬ ಆಪಾದನೆ ಕೇಳಿಬಂದಿದೆ.

ಕೊರೊನಾ ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಕುರಿತು ನರೇಂದ್ರ ಮೋದಿ ಚರ್ಚೆ; ಉತ್ತರ ಕನ್ನಡ ನಂ.1
ಪ್ರಧಾನ ಮಂತ್ರಿ ನರೇಂದ್ರ ಮೋದಿ
Skanda
|

Updated on:May 17, 2021 | 9:40 AM

Share

ಉತ್ತರ ಕನ್ನಡ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಉಲ್ಬಣಿಸಿದ ಕಾರಣ ಸೋಂಕು ನಿಯಂತ್ರಣಕ್ಕೆ ತರುವ ಕುರಿತು ಚರ್ಚಿಸಲು ಕೇಂದ್ರ ಸರ್ಕಾರದ ವತಿಯಿಂದ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿರುವ ಜಿಲ್ಲೆಗಳ ಪಟ್ಟಿ ಸಿದ್ಧವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಪೈಕಿ ಈ ಪಟ್ಟಿಯಲ್ಲಿ ಉತ್ತರ ಕನ್ನಡ ಜಿಲ್ಲೆಯೇ ಮೊದಲ ಸ್ಥಾನದಲ್ಲಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಸಿಟಿವಿಟಿ ಪ್ರಮಾಣ ಹೆಚ್ಚಿರುವ ಜಿಲ್ಲೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಸೋಂಕು ಹೆಚ್ಚಲು ಜಿಲ್ಲಾಡಳಿತದ ಸಂಪೂರ್ಣ ನಿರ್ಲಕ್ಷ್ಯವೇ ಕಾರಣ ಎಂಬ ಮಾತುಗಳು ಕೇಳಿಬರುತ್ತಿದ್ದು, ಸರ್ಕಾರದ ಮಾರ್ಗಸೂಚಿಗೆ ಕಾಯುತ್ತಿದ್ದ ಜಿಲ್ಲಾಡಳಿತ ಆರಂಭದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಂಡಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಹೆಚ್ಚಾಗಿರುವ ಪಾಸಿಟಿವಿಟಿ ಪ್ರಮಾಣ ಏರಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶೇ.60ರಷ್ಟು ಜನ ಉದ್ಯೋಗ ನಿಮಿತ್ತ ಹೊರಜಿಲ್ಲೆ ಹಾಗೂ ರಾಜ್ಯಗಳಲ್ಲಿದ್ದು, ಲಾಕ್‌ಡೌನ್ ಘೋಷಿಸುತ್ತಿದ್ದಂತೆ ಜಿಲ್ಲೆಗೆ ವಾಪಸ್ಸಾಗಿದ್ದಾರೆ. ಬೆಂಗಳೂರು, ಗೋವಾ, ಮಹಾರಾಷ್ಟ್ರದಿಂದ ಅಧಿಕ ಪ್ರಮಾಣದ ಜನ ಆಗಮಿಸಿದ್ದು, ಈ ಸಂದರ್ಭದಲ್ಲಿ ಯಾವುದೇ ಕಟ್ಟುನಿಟ್ಟಿನ ಕ್ರಮಕೈಗೊಂಡಿಲ್ಲ ಎಂಬ ಆಪಾದನೆ ಕೇಳಿಬಂದಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಮದುವೆ, ಮುಂಜಿ ಸೇರಿದಂತೆ1000ಕ್ಕೂ ಹೆಚ್ಚು ಕಾರ್ಯಕ್ರಮಗಳಿಗೆ ಬೇಕಾಬಿಟ್ಟಿ ಅವಕಾಶ ನೀಡಲಾಗಿತ್ತು, ಯಾವ ಕಾರ್ಯಕ್ರಮಗಳಲ್ಲೂ ಕೊವಿಡ್ ನಿಯಮಾವಳಿಗಳನ್ನು ಪಾಲಿಸಿಲ್ಲ. ಹೀಗಾಗಿ ಸೋಂಕು ಉಲ್ಬಣಿಸಿದೆ ಎಂದು ಹೇಳಲಾಗುತ್ತಿದೆ.

ಸ್ವತಃ ಉತ್ತರ ಕನ್ನಡ ಜಿಲ್ಲಾಧಿಕಾರಿಯೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಕಾರಣ ಆ ವೇಳೆ ಪರಿಸ್ಥಿತಿ ನಿಭಾಯಿಸದೆ ಕಡೆಗಣಿಸಲಾಗಿತ್ತು. ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದವರಿಂದಲೇ ಉತ್ತರ ಕನ್ನಡದಲ್ಲಿ ಸೋಂಕು ತೀವ್ರವಾಗಿದ್ದು ಜನರು ಬೇಕಾಬಿಟ್ಟಿ ಓಡಾಡುತ್ತಿದ್ದ ಕಾರಣ ಬೆಂಗಳೂರಿನ ಪರಿಸ್ಥಿತಿ ಇಲ್ಲೂ ನಿರ್ಮಾಣವಾಗುವಂತೆ ಆಗಿದೆ ಎಂಬ ಮಾತು ಕೇಳಿಬರುತ್ತಿದೆ. ಸದ್ಯ ದಾಂಡೇಲಿ, ಅಂಕೋಲಾದಂತಹ ಸಣ್ಣ ಪಟ್ಟಣಗಳಲ್ಲೂ ಪ್ರತ್ಯೇಕ ಲಾಕ್​ಡೌನ್ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಇದು ಗಂಭೀರ ಪರಿಸ್ಥಿತಿಯಾಗಿರುವ ಕಾರಣ ಪ್ರಧಾನಿ ಮೋದಿ‌ಯೊಂದಿಗಿನ ಸಭೆಯಲ್ಲಿ ಈ ವಿಚಾರ ಪ್ರಮುಖವಾಗಿ ಪ್ರಸ್ತಾಪವಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: Covid-19 Positivity Rate: ಕೊವಿಡ್ ಪಾಸಿಟಿವಿಟಿ ರೇಟ್​ನಲ್ಲಿ ಉತ್ತರ ಕನ್ನಡ ನಂ.1: ಇದು ಗಾಬರಿ ಹುಟ್ಟಿಸುವ ವಿಚಾರ

Published On - 9:21 am, Mon, 17 May 21

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​