AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಆ.10ರಂದು ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿಯವರು ಇದೇ ಭಾನುವಾರ ಕರ್ನಾಟಕ ಪ್ರವಾಸದಂದು ಮೂರು ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅಗಸ್ಟ್ 10ರಂದು ಕರ್ನಾಟಕದ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಹಾಗಾದ್ರೆ, ನೂತನ ರೈಲುಗಳು ಎಲ್ಲಿಂದ ಎಲ್ಲಿಗೆ ಸಂಚರಿಸಲಿವೆ ಎನ್ನುವ ಮಾಹಿತಿ ಇಲ್ಲಿದೆ.

ಕರ್ನಾಟಕಕ್ಕೆ ಮತ್ತೊಂದು ವಂದೇ ಭಾರತ್ ರೈಲು: ಆ.10ರಂದು ಮೋದಿ ಚಾಲನೆ
Vande Bharat Train
ರಮೇಶ್ ಬಿ. ಜವಳಗೇರಾ
|

Updated on:Aug 05, 2025 | 4:46 PM

Share

ನವದೆಹಲಿ/ಬೆಂಗಳೂರು,(ಆಗಸ್ಟ್​ 05): ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಅವರ ಕೋರಿಕೆಯಂತೆ ಬೆಂಗಳೂರು-ಬೆಳಗಾವಿ ನೂತನ `ವಂದೇ ಭಾರತ್’ ರೈಲು (Vande Bharat Train) ಸೇರಿದಂತೆ ಒಟ್ಟು 3 ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆಗಸ್ಟ್ 10ರ ಭಾನುವಾರ ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜ್ಯದಲ್ಲಿ 3 ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.

ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಸಚಿವ ಪ್ರಹ್ಲಾದ್ ಜೋಶಿ ಮನವಿಗೆ ಸ್ಪಂದನೆ

ಈ ಹಿಂದೆ ಸಚಿವ ಪ್ರಹ್ಲಾದ್ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಇದರಿಂದ ಜೋಶಿ ಅವರು ಮೋದಿ, ಅಶ್ವಿನಿ ವೈಷ್ಣವ್ ಹಾಗೂ ರೈಲ್ವೇ ರಾಜ್ಯ ಖಾತೆ ಸಚಿವ ವಿ ಸೋಮಣ್ಣಗೆ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ವೇಳಾಪಟ್ಟಿ

ಈ ನೂತನ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಬೆಂಗಳೂರಿಗೆ ಮಧ್ಯಾಹ್ನ 1:50ಕ್ಕೆ ತಲುಪಲಿದೆ. ವಾಪಸ್ ಬೆಂಗಳೂರಿನಿಂದ ಮಧ್ಯಾಹ್ನ 2:20ಕ್ಕೆ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:42 pm, Tue, 5 August 25

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​