Narendra Modi: ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚಣೆ; ಏಪ್ರಿಲ್ 9ರಂದು ಮೈಸೂರಿಗೆ ಪ್ರಧಾನಿ ಮೋದಿ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ 7 ಬಾರಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಮುಂದಿನ ತಿಂಗಳು ಮತ್ತೆ ಮೈಸೂರಿಗೆ ಆಗಮಿಸಲಿದ್ದಾರೆ.

Narendra Modi: ಪ್ರಾಜೆಕ್ಟ್ ಟೈಗರ್ 50ನೇ ವರ್ಷಾಚಣೆ; ಏಪ್ರಿಲ್ 9ರಂದು ಮೈಸೂರಿಗೆ ಪ್ರಧಾನಿ ಮೋದಿ
ಪ್ರಧಾನಿ ಮೋದಿ
Follow us
|

Updated on: Mar 25, 2023 | 2:28 PM

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ 7 ಬಾರಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಂದಿನ ತಿಂಗಳು ಮತ್ತೆ ಮೈಸೂರಿಗೆ ಆಗಮಿಸಲಿದ್ದಾರೆ. ಏಪ್ರಿಲ್ 9ರಂದು ಮೈಸೂರಿಗೆ ಬರಲಿರುವ ಪ್ರಧಾನಿ ‘ಪ್ರಾಜೆಕ್ಟ್ ಟೈಗರ್​ (Project Tiger)’ 50ನೇ ವರ್ಷಾಚರಣೆ ಪ್ರಯುಕ್ತ ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ‘ಪ್ರಾಜೆಕ್ಟ್ ಟೈಗರ್’ ಯೋಜನೆಯ 50ನೇ ವರ್ಷಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ 3 ದಿನಗಳ ಬೃಹತ್ ಕಾರ್ಯಕ್ರಮವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ವನ್ಯಜೀವಿನ ಸಂರಕ್ಷಣೆ ವಿಚಾರದಲ್ಲಿ ಭಾರತದ ಬದ್ಧತೆಯ ಕುರಿತಾದ ಸಂದೇಶವನ್ನು ಈ ಕಾರ್ಯಕ್ರಮ ಸಾರಲಿದೆ. 2023ರ ಏಪ್ರಿಲ್ 1ರಂದು ಪ್ರಾಜೆಕ್ಟ್ ಟೈಗರ್ 50 ವರ್ಷಗಳನ್ನು ಪೂರ್ಣಗೊಳಿಸಲಿದೆ. ಇದು ಅಮೃತಕಾಲದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಶಾಂತಿ, ಸಮೃದ್ಧಿ, ಅಭಿವೃದ್ಧಿ ಮತ್ತು ಸಂರಕ್ಷಣೆಯ ದೃಷ್ಟಿಕೋನವನ್ನು ಸಮನ್ವಯಗೊಳಿಸುತ್ತದೆ. ಹುಲಿ ಸಂರಕ್ಷಣೆಗಾಗಿ ಹೆಚ್ಚಿನ ರಾಜಕೀಯ, ಸಾರ್ವಜನಿಕ ಬೆಂಬಲವನ್ನು ಪಡೆಯಲು ಜಾಗತಿಕವಾಗಿ ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ಪ್ರದರ್ಶಿಸಲು ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹುಲಿ ಗಣತಿಯ ಹೊರತಾಗಿ, ನಾಣ್ಯ ಬಿಡುಗಡೆಯನ್ನೂ ಪ್ರಸ್ತಾಪಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Chikkaballapur Medical College: ಮಧುಸೂದನ್​ ವೈದ್ಯಕೀಯ ಶಿಕ್ಷಣ ಸಂಸ್ಥೆ ಉದ್ಘಾಟಿಸಿದ ನರೇಂದ್ರ ಮೋದಿ

ಮೂರು ದಿನಗಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಹುಲಿ ಅಂದಾಜು ಸಂಖ್ಯೆಯ ಘೋಷಣೆ, ಹುಲಿ ಸಂರಕ್ಷಿತ ಪ್ರದೇಶದ ಪರಿಣಾಮಕಾರಿ ಮೌಲ್ಯಮಾಪನ ವರದಿ (2022) ಬಿಡುಗಡೆ ಮತ್ತು ಹುಲಿ ಸಂರಕ್ಷಣೆಗಾಗಿ ‘ಅಮೃತ್ ಕಲ್ ಕಾ ವಿಷನ್’ ಮತ್ತು ಸ್ಮರಣಾರ್ಥ ನಾಣ್ಯ ಬಿಡುಗಡೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಏಳು ಬಾರಿ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ಮೋದಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ, ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇಂದು (ಮಾರ್ಚ್​ 25) ರಾಜ್ಯಕ್ಕೆ ಬಂದಿರುವ ಮೋದಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಆಶ್ರಮದ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ & ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಿದ್ದಾರೆ. ನಂತರ ಬೆಂಗಳೂರಿಗೆ ಆಗಮಿಸಿ ವೈಟ್​ಫೀಲ್ಡ್ – ಕೆಆರ್​ ಪುರಂ ಮೆಟ್ರೋ ಲೇನ್ ಲೋಕಾರ್ಪಣೆಗೊಳಿಸಿ ಮೆಟ್ರೋ ರೈಲಿನಲ್ಲಿ ಸಂಚರಿಸಿದ್ದಾರೆ. ನಂತರ ಇದೀಗ ದಾವಣಗೆರೆಯಲ್ಲಿ ಬಿಜೆಪಿಯ ‘ಮಹಾ ಸಂಗಮ’ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ.

ರಾಜ್ಯದ ಮತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ