ನ.15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ, ಮಾಹಿತಿ ಹಂಚಿಕೊಂಡ ಸಿಎಂ ಶಿವಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಂದರೆ ನವೆಂಬರ್​​​ನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮೋದಿ ಆಗಮನದ ಬಗ್ಗೆ ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಬರದ ಬಗ್ಗೆ ಮಾಧ್ಯಮಗಳ ಜೊತೆ ಮತಾನಾಡುವ ವೇಳೆ ಸಿಎಂ ಮೋದಿ ಆಗಮನದ ವಿಚಾರವನ್ನು ಹೇಳಿದ್ದಾರೆ. ಹಾಗಾದ್ರೆ, ಮೋದಿ ಯಾವಾಗ? ಏಕೆ ಬರುತ್ತಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ನ.15ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ, ಮಾಹಿತಿ ಹಂಚಿಕೊಂಡ ಸಿಎಂ ಶಿವಕುಮಾರ್
DK Shivakumar And PM Modi

Updated on: Oct 28, 2026 | 2:50 PM

ಬೆಂಗಳೂರು, (ಅಕ್ಟೋಬರ್ 28): ಇದೇ ನವೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ. ಇಂದು (ಅಕ್ಟೋಬರ್ 28) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನವೆಂಬರ್ 15ರಂದು ಬೆಂಗಳೂರಿಗೆ ಪ್ರಧಾನಿಗಳು ಆಗಮಿಸಲಿದ್ದು, ಪಿಂಕ್ ಮೆಟ್ರೋ ರೈಲು ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರವು ಬರ ಪರಿಹಾರ ನಿಧಿ ಬಿಡುಗಡೆ ಕುರಿತು ಪ್ರಧಾನಿಯವರೊಂದಿಗೆ ಚರ್ಚಿಸಲು ಸರ್ವಪಕ್ಷ ನಿಯೋಗದ ಭೇಟಿಗೆ ಸಮಯಾವಕಾಶ ಕೇಳುತ್ತೇನೆ ಎಂದು ಹೇಳಿದ್ದಾರೆ.

ಪಿಂಕ್ ಮೆಟ್ರೋ ರೈಲು ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15ರಂದು ಬೆಂಗಳೂರಿಗೆ ಆಗಮಿಸಲಿದ್ದು, ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದರೊಂದಿಗೆ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗ ಪಿಂಕ್ ಮೆಟ್ರೋ ಸಂಚಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಪಿಂಕ್ ಮೆಟ್ರೋ ಮಾರ್ಗ ಕಾಳೇನ ಅಗ್ರಹಾರ ದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗವೂ ಒಟ್ಟು ಉದ್ದ ಸುಮಾರು 21.25 ಕಿ.ಮೀ ಇದ್ದು, ಒಟ್ಟು 18 ನಿಲ್ದಾಣಗಳಿದೆ.

ಇದನ್ನೂ ಓದಿ: ಬೆಂಗಳೂರಿನ ಅತಿ ಉದ್ದದ ಎಲಿವೇಟೆಡ್ ಮೆಟ್ರೊ ಮಾರ್ಗ ರೆಡಿ: ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ

ಸದ್ಯ 7.5 ಕಿ.ಮೀ. ಎತ್ತರಿಸಿದ ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದ್ದು, ಈ ಎಲಿವೇಟೆಡ್ ಮೆಟ್ರೋ ಮಾರ್ಗವನ್ನು ಪ್ರಧಾನಿಗಳು ಉದ್ಘಾಟನೆ ಮಾಡಲಿದ್ದಾರೆ. ಉಳಿದ 13.76 ಕಿ.ಮೀ. ಸುರಂಗ ಮಾರ್ಗ ಕಾಮಗಾರಿಯಲಿದ್ದು, ಈ ಮಾರ್ಗ ಮುಂದಿ ವರ್ಷ ಉದ್ಘಾಟನೆ ಆಗುವ ಸಾಧ್ಯತೆ ಇದೆ. ಡೈರಿ ಸರ್ಕಲ್‌ನಿಂದ ನಾಗವಾರ, ಶಿವಾಜಿನಗರ ಹಾಗೂ ಕಂಟೋನ್ಮೆಂಟ್ ಮೂಲಕ ನಾಗವಾರ ವರೆಗೂ ಸಂಪರ್ಕ ಕಲ್ಪಿಸಲಿದೆ.DK Shivakumar on PM Modi: ಬೆಂಗಳೂರಿಗೆ PM ಮೋದಿ ಬರ್ತಿದ್ದಾರೆ.. ಬರ ವಿಚಾರ ಚರ್ಚೆಗೆ ಟೈಂ ಕೇಳ್ತೀನಿ! | #TV9D

ದೇಶದ 2ನೇ ಅತೀ ಉದ್ದ ಮೆಟ್ರೋ ಮಾರ್ಗ

ಪಿಂಕ್ ಲೈನ್ ಉದ್ಘಾಟನೆ ಮೂಲಕ ನಮ್ಮ ಮೆಟ್ರೋ ಸಂಚಾರದ ಒಟ್ಟು ಕಾರ್ಯಾಚರಣೆಯ ಉದ್ದ 100 km ದಾಟಲಿದೆ. ಸದ್ಯ 96.1 ಕಿಮೀ ಮೆಟ್ರೋ ಮಾರ್ಗ ಇದ್ದು, ಪಿಂಕ್ ಮೆಟ್ರೋ ಮಾರ್ಗ ಉದ್ಘಾಟನೆ ಮೂಲಕ ಮೆಟ್ರೋ ಜಾಲ 100 ಕಿಮೀ ವಿಸ್ತರಣೆಯಾಗಲಿದೆ. ಇದರೊಂದೊಗೆ ದೆಹಲಿ ಬಿಟ್ಟರೆ ದೇಶದ 2ನೇ ಅತೀ ಉದ್ದ ಮೆಟ್ರೋ ಮಾರ್ಗ ಎಂಬ ಹೆಗ್ಗಳಿಕೆಗೆ ನಮ್ಮ ಮೆಟ್ರೋ ಪಾತ್ರವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us