PM Modi Mangalore visit: ಸೆ. 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ, ಪ್ರವಾಸದ ವಿವರ ಹೀಗಿದೆ

ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

PM Modi Mangalore visit: ಸೆ. 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ, ಪ್ರವಾಸದ ವಿವರ ಹೀಗಿದೆ
ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ
Updated By: ಸಾಧು ಶ್ರೀನಾಥ್​

Updated on: Aug 22, 2022 | 9:52 PM

ಮಂಗಳೂರು: ಸೆಪ್ಟೆಂಬರ್ 2 ಶುಕ್ರವಾರದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮಂಗಳೂರಿಗೆ (Mangalore) ಆಗಮಿಸಲಿದ್ದಾರೆ. ಸರ್ಕಾರದ ಅಧಿಕೃತ ಕಾರ್ಯಕ್ರಮ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವ ಯೋಗ ದಿನಾಚರಣೆ ಸಂದರ್ಭದಲ್ಲಿ ಇತ್ತೀಚೆಗೆ ಬೆಂಗಳೂರು, ಮೈಸೂರಿಗೆ ಬಂದಿದ್ದರು.

ಮೋದಿ ಮಂಗಳೂರು ಪ್ರವಾಸ ವಿವರ ಹೀಗಿದೆ:

ಪಣಂಬೂರುನಲ್ಲಿರುವ “ನವ ಮಂಗಳೂರು ಬಂದರು ಪ್ರಾಧಿಕಾರದ” ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಎನ್ ಎಂ ಪಿ ಟಿ ಯಲ್ಲಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಬಂಗ್ರ ಕೂಳೂರಿನ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಮೋದಿ ಕೇರಳದ ಕೊಚ್ಚಿಗೆ ಭೇಟಿ ನೀಡಿ, ಅಲ್ಲಿಂದ ಮಂಗಳೂರಿಗೆ ಬರಲಿದ್ದಾರೆ.

Published On - 6:19 pm, Mon, 22 August 22