Narendra Modi: ನಾಳೆ ರಾಜ್ಯಕ್ಕೆ ಮೋದಿ; ಎಷ್ಟೊತ್ತಿಗೆ ಎಲ್ಲಿ ಕಾರ್ಯಕ್ರಮ? ಇಲ್ಲಿದೆ ಸಂಪೂರ್ಣ ವಿವರ
ವೈಟ್ಫೀಲ್ಡ್ - ಕೆ. ಆರ್ ಪುರ ನಡುವಿನ ಮೆಟ್ರೋಗೆ ಚಾಲನೆ, ಮುದ್ದೇನಹಳ್ಳಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಹಾಗೂ ದಾವಣಗೆರೆಯಲ್ಲಿನ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಮೋದಿ ರಾಜ್ಯ ಭೇಟಿಯ ಹಾಗೂ ಭಾಗವಹಿಸಲಿರುವ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಾಳೆ (ಮಾರ್ಚ್ 24) ಬೆಂಗಳೂರು ಸೇರಿದಂತೆ ಕರ್ನಾಟಕದ (Karnataka) ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ರಾಜ್ಯಕ್ಕೆ ಹಲವು ಬಾರಿ ಪ್ರಧಾನಿ ಆಗಮಿಸಿದ್ದು, ಇದು ಇತ್ತೀಚೆಗೆ ನೀಡುತ್ತಿರುವ 7ನೇ ಭೇಟಿಯಾಗಿದೆ. ವೈಟ್ಫೀಲ್ಡ್ – ಕೆ. ಆರ್ ಪುರ ನಡುವಿನ ಮೆಟ್ರೋಗೆ ಚಾಲನೆ, ಮುದ್ದೇನಹಳ್ಳಿಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಹಾಗೂ ದಾವಣಗೆರೆಯಲ್ಲಿನ ಕಾರ್ಯಕ್ರಮಗಳಲ್ಲಿ ಮೋದಿ ಭಾಗವಹಿಸಲಿದ್ದಾರೆ. ಮೋದಿ ರಾಜ್ಯ ಭೇಟಿಯ ಹಾಗೂ ಭಾಗವಹಿಸಲಿರುವ ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ.
- ಬೆಳಗ್ಗೆ 10.25ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಅಲ್ಲಿಂದ ಚಿಕ್ಕಬಳ್ಳಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
- 10.50ಕ್ಕೆ ಚಿಕ್ಕಬಳ್ಳಾಪುರಕ್ಕೆ ತಲುಪಲಿರುವ ಮೋದಿ, 11.15ಕ್ಕೆ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆ ಮಾಡಲಿದ್ದಾರೆ.
- ಮಧ್ಯಾಹ್ನ 1.45ಕ್ಕೆ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ಗೆ ಆಗಮನ. ಮಧ್ಯಾಹ್ನ 1.50 ಗಂಟೆಗೆ ವೈಟ್ ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ಮಾಡಲಿದ್ದಾರೆ.
- ವೈಟ್ಫೀಲ್ಡ್ – ಕೆ. ಆರ್ ಪುರ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೆಟ್ರೋದಲ್ಲಿ ಪ್ರಯಾಣ ಮಾಡಲಿದ್ದಾರೆ.
- ಮಧ್ಯಾಹ್ನ3.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.
- ಮಧ್ಯಾಹ್ನ 3.30ಕ್ಕೆ ದಾವಣಗೆರೆಯಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
- ಸಂಜೆ 5.15ಕ್ಕೆ ದಾವಣಗೆರೆಯಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲಿದ್ದಾರೆ.
- ಸಂಜೆ 5.55ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ದೆಹಲಿಗೆ ನಿರ್ಗಮಿಸಲಿದ್ದಾರೆ.
ಮುದ್ದೇನಹಳ್ಳಿಗೆ ಸಚಿವ ಸುಧಾಕರ್ ಭೇಟಿ
ಪ್ರಧಾನಿ ನರೇಂದ್ರ ಮೋದಿ ಮುದ್ದೇನಹಳ್ಳಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅಲ್ಲಿಗೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್.ಎಂ. ವಿಶ್ವೇಶ್ವರಯ್ಯ ಸಮಾಧಿ ಸ್ಮಾರಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಜತೆ ಕೇಂದ್ರ ವಲಯ ಐಜಿಪಿ, ಎಸ್ಪಿ, ಡಿಸಿ ಇದ್ದರು.
ಇದನ್ನೂ ಓದಿ: ನಾಳೆ ಬೆಂಗಳೂರಿಗೆ ಮೋದಿ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ
ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಕಾರಣ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಮಾರ್ಚ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25 ಮಧ್ಯಾಹ್ನ 2 ಗಂಟೆಯ ವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ಎಂ ನಾಗರಾಜ್ ಗುರುವಾರ ಆದೇಶ ಹೊರಡಿಸಿದ್ದರು.ಪೊಲೀಸ್ ಅಧಿಕಾರಿಗಳು, ಎಸ್ಪಿಜಿ ಅಧಿಕಾರಿಗಳು ಹಾಗೂ ಪ್ರಧಾನಿಯವರ ಭದ್ರತಾ ಸಿಬ್ಬಂದಿ ಈಗಾಗಲೇ ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ತಂಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:20 pm, Fri, 24 March 23