ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: NDA ಅಭ್ಯರ್ಥಿಗಳ ಪರ ಮತಯಾಚನೆ

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಅವರು ಏಪ್ರಿಲ್​ 14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಿಂದಲೇ ಕಹಳೆ ಮೊಳಗಿಸಲಿದ್ದಾರೆ. ಚಾಮರಾಜನಗರ, ಮಂಡ್ಯ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ಮಾಡಲಿದ್ದಾರೆ.

ಇಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ ಭೇಟಿ: NDA ಅಭ್ಯರ್ಥಿಗಳ ಪರ ಮತಯಾಚನೆ
ಪ್ರಧಾನಿ ಮೋದಿ
Follow us
ಗಂಗಾಧರ​ ಬ. ಸಾಬೋಜಿ
| Updated By: ವಿವೇಕ ಬಿರಾದಾರ

Updated on:Apr 14, 2024 | 6:42 AM

ಬೆಂಗಳೂರು, ಏಪ್ರಿಲ್ 13: ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ (Narendra Modi) ಕಾಲಿಗೆ ಚಕ್ರ ಕಟ್ಟಿಕೊಂಡವಂತೆ ದೇಶದುದ್ದಕ್ಕೂ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಇಂದು (ಏ.14) ರಾಜ್ಯಕ್ಕೆ ಆಗಮಿಸಲಿದ್ದು, ಸಂಜೆ 4.30 ರಿಂದ 5.20ರವರೆಗೆ ಮೈಸೂರಿನಲ್ಲಿ ಸಮಾವೇಶ ನಡೆಸಲಿದ್ದಾರೆ. ಆ ಮೂಲಕ ಸಿಎಂ ಸಿದ್ದರಾಮಯ್ಯ  ತವರು ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಹಳೇ ಮೈಸೂರು ಭಾಗದ NDA ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಈ ವೇಳೆ ಮಾಜಿ ಪ್ರಧಾನಿ ದೇವೇಗೌಡರು ಮೋದಿಗೆ ಸಾಥ್ ನೀಡಲಿದ್ದಾರೆ.

ಸಂಜೆ 4.30 ರಿಂದ 5.20 ರವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದ್ದು, ಹಳೇ ಮೈಸೂರು ಭಾಗವನ್ನೇ ಗುರಿಯಾಗಿಸಿ ಪ್ರಧಾನಿ ಮೋದಿ ಮತಯಾಚನೆ ಮಾಡಲಿದ್ದಾರೆ. ಬಳಿಕ ಮೈತ್ರಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇನ್ನು ಸಮಾವೇಶದಲ್ಲಿ 3 ಕ್ಷೇತ್ರಗಳಿಂದ 1 ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸಲು ಪ್ಲ್ಯಾನ್ ಮಾಡಲಾಗಿದೆ.

ಮಂಗಳೂರಿನಲ್ಲಿ ಪ್ರಧಾನಿ ಮೋದಿ ಭರ್ಜರಿ ರೋಡ್ ಶೋ

ಇನ್ನು ಮೈಸೂರಿನ ಸಮಾವೇಶದ ಬಳಿಕ ಪ್ರಧಾನಿ ಮೋದಿ ಮಂಗಳೂರಿಗೆ ತೆರಳಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ರೋಡ್ ಶೋ ನಡೆಸಲಿದ್ದಾರೆ. ಸಂಜೆ 7:45 ಕ್ಕೆ ನಾರಾಯಣಗುರು ವೃತ್ತದಲ್ಲಿ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ರೋಡ್ ಶೋ ಆರಂಭಿಸಲಿದ್ದಾರೆ. ಮಹಾನಗರ ಪಾಲಿಕೆ ಮುಂಭಾಗದಿಂದ ಬಲ್ಲಾಳ ಬಾಗ್, ಎಂ.ಜಿ.ರಸ್ತೆಯಾಗಿ ಪಿವಿಎಸ್ ಸರ್ಕಲ್ ಬಳಿ ಬಲಕ್ಕೆ ತಿರುಗಿ ರಾಷ್ಟ್ರಕವಿ ಗೋವಿಂದ ಪೈ ಸರ್ಕಲ್​​ವರೆಗೆ ರೋಡ್ ಶೋ ಸಾಗಲಿದೆ. ರಾತ್ರಿ 8:30ರೊಳಗೆ ರೋಡ್ ಶೋ ಮುಗಿಯಲಿದೆ. ಈಗಾಗಲೇ ಮಂಗಳೂರಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಏ.14ರ ಮೋದಿ ಕರ್ನಾಟಕ ಪ್ರವಾಸ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ, ಇಲ್ಲಿದೆ ಹೊಸ ಅಪ್ಡೇಟ್

ಪ್ರಧಾನಿ ಮೋದಿ ರಾಜ್ಯಕ್ಕೆ ಬರುತ್ತಿರುವುದು ಕಾಂಗ್ರೆಸ್​​ನ ಕೆಂಗಣ್ಣಿಗೆ ಗುರಿಯಾಗಿದೆ. ಮೈಸೂರು, ಮಂಗಳೂರು, ಬೆಂಗಳೂರಿನಲ್ಲಿ ಗೋ ಬ್ಯಾಕ್ ಮೋದಿ ಅಂತಾ ಅಭಿಯಾನವನ್ನೇ ನಡೆಸಿದ್ದಾರೆ. ನಾಳೆ ಮೋದಿ ಆಗಮನದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಮೋದಿ ಮೈಸೂರಿಗೆ ಬರ್ತಿರೋದಕ್ಕೆ ನನ್ನ ಅಭ್ಯಂತರವಿಲ್ಲ, ಆದರೆ ರಾಜ್ಯಕ್ಕೆ ಏನ್ ಕೊಡುಗೆ ಕೊಟ್ಟಿದ್ದಾರೆ? ಕರುನಾಡಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಅಂತ ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

Published On - 8:03 pm, Sat, 13 April 24