ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ

Pratap Simha Birthday: ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಜನ್ಮದಿನಕ್ಕೆ ಕನ್ನಡದಲ್ಲೇ ಪತ್ರ ಬರೆದು ಹಾರೈಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹ
Follow us
TV9 Web
| Updated By: guruganesh bhat

Updated on:Jun 21, 2021 | 6:22 PM

ಮೈಸೂರು: ಇಂದು ಮೈಸೂರು,ಕೊಡಗು ಸಂಸದ ಪ್ರತಾಪ್ ಸಿಂಹ ಜನ್ಮದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಪತ್ರ ಬರೆದು ಪ್ರತಾಪ್ ಸಿಂಹ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಪ್ರತಾಪ್ ಸಿಂಹ ದೀರ್ಘಕಾಲ ಆರೋಗ್ಯಯುತವಾಗಿ ಜೀವಿಸುವಂತಾಗಲಿ ಹಾಗೂ ಜೀವನದ ಪ್ರತಿ ಹೆಜ್ಜೆಯಲ್ಲೂ ಯಶಸ್ಸು ದೊರೆಯುವಂತಾಗಲಿ. ಮುಂಬರುವ ವರ್ಷಗಳಲ್ಲಿ ತಮ್ಮ ಉತ್ತಮ ಮತ್ತು ಸುಸ್ಥಿತಿಯು ಮುಂದುವರಿಯಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸದ ಪ್ರತಾಪ್ ಸಿಂಹಗೆ ಹಾರೈಸಿದ್ದಾರೆ. ಜತೆಗೆ ಪತ್ರದಲ್ಲಿ ತಮ್ಮ ಸಹಿಯನ್ನೂ ನಮೂದಿಸಿದ್ದಾರೆ.

ಪತ್ರದ ಪ್ರತಿಯನ್ನು ಟ್ವಿಟರ್ ಮೂಲಕ ಹಂಚಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Pratap Simha Wish

ಶುಭಕೋರಿರುವ ಪತ್ರ

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ: ಸಂಸದ ಪ್ರತಾಪ್ ಸಿಂಹ

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳ ಸಾವು ಪ್ರಕರಣದಲ್ಲಿ ಚಾಮರಾಜನಗರಕ್ಕೆ ಏಕೆ ಆಕ್ಸಿಜನ್ ಹೋಗಿಲ್ಲವೆಂದು ಗೊತ್ತಿದೆ. ಆದರೆ ಆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಫೇಸ್​ಬುಕ್ ಪೋಸ್ಟ್ ಒಂದರಲ್ಲಿ ಇತ್ತೀಚಿಗೆ ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ನಮ್ಮ ಪಕ್ಷವೇ ಆಡಳಿತ ನಡೆಸುತ್ತಿದೆ. ಎಲ್ಲಾ ಅಧಿಕಾರಿಗಳು ನಮ್ಮ ಅಧೀನದಲ್ಲೇ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಸತ್ಯಗಳನ್ನು ಹೇಳಲು ಆಗಲ್ಲ. ಸದ್ಯ ಅದ್ಯಾವುದೋ ತೇಪೆ ಹಚ್ಚುವ ವರದಿಯನ್ನು ಕೊಟ್ಟಿದ್ದಾರೆ. ಆ ಬಗ್ಗೆ ತನಿಖೆ ನಡೆಯುತ್ತಿದೆ, ಅದರ ಸತ್ಯಾಂಶ ಗೊತ್ತಾಗಲಿದೆ. ಸಚಿವ ಸುರೇಶ್ ಕುಮಾರ್‌ ನಮ್ಮ ಡಿಸಿ ಬಗ್ಗೆ ಆರೋಪಿಸಿದ್ದರು. ಮೈಸೂರನ್ನು ಕಟ ಕಟೆಯಲ್ಲಿ ನಿಲ್ಲಸಬಾರದು ಎಂಬ ಕಾರಣಕ್ಕೆ ಮತ್ತು ಮೈಸೂರು, ಮಂಡ್ಯ, ಚಾಮರಾಜನಗರಕ್ಕೆ ಜಗಳವಾಗುತ್ತೆಂದು ಆ ಸಂದರ್ಭದಲ್ಲಿ ನಾನು ಸಮರ್ಥಿಸಿಕೊಂಡಿದ್ದೆ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಏಕೆ ಸರಬರಾಜಾಗಿಲ್ಲವೆಂಬುದು ತಿಳಿದಿದೆ, ಆದರೆ ಸತ್ಯವನ್ನು ಸಾರ್ವಜನಿಕವಾಗಿ ಹೇಳಲಾಗದು: ಸಂಸದ ಪ್ರತಾಪ್ ಸಿಂಹ

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಿಎಂ ಯಡಿಯೂರಪ್ಪರಿಗೆ ಪತ್ರ ಬರೆದ ಸಂಸದ ಪ್ರತಾಪ್ ಸಿಂಹ

(PM Narendra Modi wishes Mysuru Kodagu MP Pratap Simha on his birthady in Kannada)

Published On - 6:07 pm, Mon, 21 June 21

ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ