ಬೆಂಗಳೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ಸಹೋದರ, ಕಾರಣವೇನು? ವಿಡಿಯೋ ನೋಡಿ
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇಂದು (ಜುಲೈ 21) ಸೋಮಭಾಯಿ ಮೋದಿ ಅವರು ಗುಜರಾತ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಬೆಂಗಳೂರು, (ಜುಲೈ 21): ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ಮೋದಿ ಅವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇಂದು (ಜುಲೈ 21) ಸೋಮಭಾಯಿ ಮೋದಿ ಅವರು ಗುಜರಾತ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿರುವ ಸಾಯಿಬಾಬಾ ದೇವಸ್ಥಾನ ಹಾಗೂ ಟ್ರಸ್ಟ್ ಉದ್ಘಾಟನೆಗೆ ಆಗಮಿಸಿದ್ದಾರೆ. ಮೊದಲು ಯಲಹಂಕದ ಸಾಯಿಬಾಬಾ ದೇವಸ್ಥಾನ ಮತ್ತು ಗಂಚಿ ಸಮಾಜ್ ಪೂರ್ಣೇಶ್ವರ್ ದಾಮ್ ಟ್ರಸ್ಟ್ ಗೆ ಭೇಟಿ ನೀಡಲಿದ್ದಾರೆ. ಬಳಿಕ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯಕ್ಕೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.