ಪೋಕ್ಸೋ ಪ್ರಕರಣ: ಮುರುಘಾ ಶ್ರೀ ಶಿಫ್ಟ್ ವಿಚಾರ ಜಯದೇವ ಆಸ್ಪತ್ರೆಗೆ ಮಾಹಿತಿ ನೀಡದ ಜಿಲ್ಲಾ ಸರ್ಜನ್
ಜಯದೇವ ಆಸ್ಪತ್ರೆಗೆ ಮುರುಘಾ ಶ್ರೀಗಳನ್ನು ಸ್ಥಳಾಂತರಿಸುವ ವಿಚಾರವಾಗಿ ಜಿಲ್ಲಾ ಸರ್ಜನ್ ಯಾವುದೇ ಮಾಹಿತಿಯನ್ನು ಜಯದೇವ ಆಸ್ಪತ್ರೆಗೆ ನೀಡಿಲ್ಲ. ಇತ್ತ ಜಯದೇವ ಆಸ್ಪತ್ರೆಗೆ ರವಾನಿಸಲಾಗುವುದು ಎಂದು ಹೇಳುತ್ತಿರುವುದು ಮಾಧ್ಯಮಗಳ ದಾರಿ ತಪ್ಪಿಸಲೇ?
ಬೆಂಗಳೂರು: ಪೋಕ್ಸೋ ಕಾಯ್ದೆಯಡಿ ಸಿಲುಕಿರುವ ಮುರುಘಾ ಮಠದ ಶ್ರೀಗಳು ಸದ್ಯ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದು ಜಿಲ್ಲಾ ಸರ್ಜನ್ ಹೇಳುತ್ತಿದ್ದಾರೆ. ಇತ್ತ, ಈ ಬಗ್ಗೆ ಯಾವುದೇ ಮಾಹಿತಿ ಇದುವರೆಗೆ ಬಂದಿಲ್ಲ ಎಂದು ಜಯದೇವ ಆಸ್ಪತ್ರೆಯೆ ನಿರ್ದೇಶಕರು ಹೇಳುತ್ತಿದ್ದಾರೆ. ಇದನ್ನೆಲ್ಲಾ ಗಮನಿಸಿದಾಗ ಜಿಲ್ಲಾ ಸರ್ಜನ್ಗಳು ಮಾಧ್ಯಮದವರ ದಾರಿ ತಪ್ಪಿಸಲು ಪ್ರಯತ್ನಿಸಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.
ಚಿತ್ರದುರ್ಗ ಜಿಲ್ಲ ಸರ್ಜನ್ ಶ್ರೀಗಳನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಶಿಫ್ಟ್ ಮಾಡುವುದಾಗಿ ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಜಯದೇವ ಆಸ್ಪತ್ರೆಗೆ ಮಾಹಿತಿಯನ್ನೇ ಕೊಟ್ಟಿಲ್ಲ. ಆದರೆ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸ್ಪಷ್ಟನೆ ಕೇಳಿದಾಗ ಇದುವರೆಗೂ ನಮಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಅವರು ಹೇಳಿದ್ದಾರೆ.
ಮುರುಘಾ ಶ್ರೀಗಳನ್ನು ಜಯದೇವ ಆಸ್ಪತ್ರೆಗೆ ಕರೆತರುವ ವಿಚಾರದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಒಂದು ವೇಳೆ ಜಯದೇವಕ್ಕೆ ಶಿಫ್ಟ್ ಆದರೆ ಬೆಡ್ ವ್ಯವಸ್ಥೆ ಮಾಡುತ್ತೇವೆ. ಆದರೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ಮಾಹಿತಿ ನೀಡಿದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:51 pm, Fri, 2 September 22